Connect with us

ದಿನದ ಸುದ್ದಿ

ಟ್ರ್ಯಾಕ್ಟರ್’ನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು

Published

on

ಸುದ್ದಿದಿನ,ಉಡುಪಿ: ಟ್ರ್ಯಾಕ್ಟರ್ ನಿಂದ ಗದ್ದೆಯಲ್ಲಿ ಉಳುಮೆ ಮಾಡುತ್ತಿರುವ ಸಂದರ್ಭ ಚಾಲಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಜಿಲ್ಲೆಯ ಕುಂದಾಪುರದ ಕೆರಾಡಿ ಗ್ರಾಮದ ದೀಟಿಯಲ್ಲಿ ನಡೆದಿದೆ.

ಸಾವಿಗೀಡಾದ ವ್ಯಕ್ತಿವು ಹರಿಹರ ಮೂಲದ ರಾಜು ಎಂದು ಗುರುತಿಸಲಾಗಿದೆ. ಇವರು ದೀಟಿ ಗ್ರಾಮದಲ್ಲಿ ಗದ್ದೆಯಲ್ಲಿ ಟ್ರ್ಯಾಕ್ಟರ್ ಮೂಲಕ ಗದ್ದೆ ಉಳುಮೆ ಮಾಡುತ್ತಿದ್ದರು. ಈ ಸಂದರ್ಭ ಹೃದಯಾಘಾತ ಉಂಟಾಗಿದೆ. ಗದ್ದೆಯಲ್ಲಿ ಯಾರು ಇಲ್ಲದ ಹಿನ್ನೆಲೆ ಟ್ರ್ಯಾಕ್ಟರ್ ನಿಂದ ರಾಜು ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!

Published

on

ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ ವ್ಯಾಪಕ ವ್ಯವಸ್ಥೆಯಿಂದ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ಅಧಿಕಾರಿಗಳ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಚುನಾಯಿತ ಅಭ್ಯರ್ಥಿಗಳ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ನೂತನ ಅಭ್ಯರ್ಥಿಗಳ ಆಗಮನ ಪ್ರಕ್ರಿಯೆ ಆರಂಭವಾಗುತ್ತದೆ. ಅವರ ಪ್ರಯಾಣಕ್ಕೆ ಮುನ್ನವೇ ಲೋಕಸಭೆ ಕಾರ್ಯಾಲಯದ ನೋಡಲ್ ಅಧಿಕಾರಿಗಳು ಅವರನ್ನು ಸಂಪರ್ಕಿಸುತ್ತಾರೆ. ಐಜಿಐ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ವಿವಿಧ ಟರ್ಮಿನಲ್‌ಗಳಲ್ಲಿ ವಿಶೇಷ ಸ್ವಾಗತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಸಂಸದರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ನಿಗದಿತ ಕೇಂದ್ರಗಳಲ್ಲಿ ಬರ ಮಾಡಿಕೊಳ್ಳಲಾಗುತ್ತದೆ.

ಸಂಸತ್ತಿನ ಅನೆಕ್ಸೆ ವಿಸ್ತೃತ ಕಟ್ಟಡದ ಸ್ವಾಗತ ಕೇಂದ್ರಕ್ಕೆ ಆಗಮಿಸಿದ ನಂತರ ಅವರಿಗೆ ದೂರವಾಣಿ ಸಂಪರ್ಕ, ಹೊಸಬ್ಯಾಂಕ್ ಖಾತೆ, ಸಂಸತ್ ಕಟ್ಟಡಕ್ಕೆ ಪ್ರವೇಶ ಪಡೆಯಲು ಸ್ಮಾರ್ಟ್ ಆಕ್ಸೆಸ್ ಕಾರ್ಡ್, ಅವರ ವಾಹನಗಳಿಗಾಗಿ ಫಾಸ್ಟ್ ಟ್ಯಾಗ್ ಸ್ಟಿಕರ್ ಮತ್ತು ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಿ ಅತಿಥಿ ಭವನ ಹಾಗೂ ಪಶ್ಚಿಮ ನ್ಯಾಯಾಲಯ ಹಾಸ್ಟೇಲ್ ಸಂಕೀರ್ಣದಲ್ಲಿ ಅವರಿಗೆ ತಂಗಲು ಅವಕಾಶ ಕಲ್ಪಿಸಲಾಗುತ್ತದೆ. ಹೊಸ ಸದಸ್ಯರಿಗೆ ಸಂವಿಧಾನದ ಪ್ರತಿ ನೀತಿ ಮತ್ತು ಕಲಾಪ, ಪ್ರಕ್ರಿಯೆ, ನಿಯಮಾವಳಿ ಕೈಪಿಡಿಗಳನ್ನು ಅನುಸರಿಸಲು ನೀಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕವಿತೆ | ಒಂದು ಕಪ್ ಕಾಫಿ

Published

on

  • ಲಕ್ಕೂರು ಆನಂದ್

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending