Connect with us

ದಿನದ ಸುದ್ದಿ

2025ರ ವೇಳೆಗೆ ಕರ್ನಾಟಕ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿಯಿದೆ : ಡಿಸಿ ಮಹಾಂತೇಶ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯನ್ನು ಮಲೇರಿಯಾ ರೋಗದಿಂದ ಮುಕ್ತಗೊಳಿಸಲು ಆರೋಗ್ಯ ಇಲಾಖೆಯಿಂದ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಮತ್ತು ಇಲಾಖೆಯಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರೂ ಸಹ ಭಾಗವಹಿಸುವಂತೆ ಮಾನ್ಯ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಕರೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಐ.ಇ.ಸಿ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿಶ್ವ ಮಲೇರಿಯಾ ದಿನ, ಮಲೇರಿಯಾವನ್ನು ನಿಯಂತ್ರಿಸುವ ಮತ್ತು ಅಂತಿಮವಾಗಿ ನಿರ್ಮೂಲನೆ ಮಾಡುವ ಜಾಗತಿಕ ಪ್ರಯತ್ನದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷದಂತೆ ಈ ವರ್ಷವು ಸಹ ಏಪ್ರಿಲ್ 25 ರಂದು ವಿಶ್ವ ಮಲೇರಿಯಾ ದಿನಾಚರಣೆಯನ್ನು “ನವೀನ ವಿಧಾನಗಳನ್ನು ಬಳಸೋಣ-ಮಲೇರಿಯಾ ಕಡಿಮೆ ಮಾಡಿ, ಜೀವ ಉಳಿಸೋಣ” ಎಂಬ ಘೋಷಣೆಯೊಂದಿಗೆ ನಡೆಸಲಾಗುತ್ತಿದೆ. ಭಾರತದಲ್ಲಿ 2008 ರಲ್ಲಿ ಮೊದಲ ಬಾರಿಗೆ ವಿಶ್ವ ಮಲೇರಿಯಾ ದಿನವನ್ನು ಆಚರಣೆಯನ್ನು ಪ್ರಾರಂಭಿಸಲಾಯಿತು.

2025ರ ವೇಳೆಗೆ ಕರ್ನಾಟಕ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿಯನ್ನು ಸಾಧಿಸಬೇಕಾಗಿರುವುದರಿಂದ, ಎಲ್ಲ ಹಂತಗಳಲ್ಲೂ ಮಲೇರಿಯಾ ನಿವಾರಣಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ರಕ್ತ ಪರೀಕ್ಷೆ, ಜ್ವರ ಸಮೀಕ್ಷೆ, ಡಿ.ಡಿ.ಟಿ ಸಿಂಪರಣಾ ಕಾರ್ಯ, ಸಮಸ್ಯಾತ್ಮಾಕ ಪ್ರದೇಶಗಳಿಗೆ ಸೊಳ್ಳೆ ಪರದೆ ವಿತರಣೆ, ವಲಸೆ ಜನರ ಜ್ವರ ಸಮೀಕ್ಷೆ, ಸೊಳ್ಳೆ ನಿಯಂತ್ರಣಕ್ಕಾಗಿ ಲಾರ್ವಾಹಾರಿ ಮೀನುಗಳ ಬಿಡುಗಡೆ, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಾರ್ವಾಹಾರಿ ಮೀನುಗಳ ಸಾಕಾಣಿಕ ಕೇಂದ್ರಗಳ ಅಭಿವೃದ್ದಿ, ಕರಪತ್ರ/ಭಿತ್ತಿ ಪತ್ರ/ ಮೈಕಿಂಗ್/ ಸ್ಕ್ರೋಲಿಂಗ್ ಮೂಲಕ ಆರೋಗ್ಯ ಶಿಕ್ಷಣ ಮುಂತಾದ ಸಮರೋಪಾದಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಶ್ರಮವಹಿಸುತ್ತಿದೆ.

2025 ರ ವೇಳೆಗೆ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕೈಗೊಳ್ಳುವ ಚಟುವಟಿಕೆಗಳಿಗೆ ಇತರೆ ಇಲಾಖೆಗಳು ಮತ್ತು ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದರು. ಜಿಲ್ಲೆಯ ಕಳೆದ 05 ವರ್ಷದ ಮಲೇರಿಯಾ ಪ್ರಕರಣಗಳ ವಿವರ ಇಂತಿವೆ. 2017 ರಲ್ಲಿ 10 ಪ್ರಕರಣ, 2018 ರಲ್ಲಿ 09 ಪ್ರಕರಣ, 2019 ರಲ್ಲಿ 08 ಪ್ರಕರಣ, 2020 ರಲ್ಲಿ 04 ಪ್ರಕರಣ, 2021 ರಲ್ಲಿ 03 ಮಲೇರಿಯಾ ಪ್ರಕರಣ ವರದಿಯಾಗಿದ್ದು, 2025ರ ವೇಳೆಗೆ ಮಲೇರಿಯಾ ನಿವಾರಣಾ ಗುರಿ ಸಾಧಿಸುವ ನಿಟ್ಟಿನಲ್ಲಿ ಗುರಿ ಹೊಂದಿದ್ದೆವೆ ಎಂದು ಹೆಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಸಿ.ಬಿ. ರಿಷ್ಯಂತ್, ಉಪವಿಭಾಗಧಿಕಾರಿಗಳಾದ ತಿಮ್ಮಣ್ಣ ಹುಲ್ಲುಮನೆ ಮತ್ತು ಮಮತ ಹೊಸಗೌಡರ, ಜಿಲ್ಲಾ ಯೋಜನಾ ನಿರ್ದೇಶಕರಾದ ಜಿ. ನಜ್ಮ, ಜಿಲ್ಲಾ ಮಲೇರಿಯಾಧಿಕಾರಿಗಳಾದ ಡಾ|| ನಟರಾಜ ಕೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending