ದಿನದ ಸುದ್ದಿ
ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ ಪಾಲಿಸುವಂತೆ ಸೂಚಿಸಲಾಗಿದೆ.
ವಿಶೇಷವಾಗಿ 12 ಗಂಟೆವರೆಗೆ ಜನರು ಮನೆಯಿಂದ ಹೊರಬರಬಾರದು. ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚಾಗಿ ನೀರು ಕುಡಿಯಬೇಕು. ಸಡಿಲವಾದ, ಹತ್ತಿ ಬಟ್ಟೆಯನ್ನು ಧರಿಸಬೇಕು, ಮನೆಯಿಂದ ಹೊರಗೆ ಹೋಗುವಾಗ ನೀರಿನ ಬಾಟಲ್, ಕೊಡೆ ತೆಗೆದುಕೊಂಡು ಹೋಗಬೇಕು. ಪ್ರೋಟಿನ್, ಬಿಸಿ ಮತ್ತು ಸ್ವಚ್ಛವಾದ ಆಹಾರ ಸೇವಿಸಬೇಕು. ಮನೆಯಲ್ಲಿರುವ ಜಾನುವಾರುಗಳಿಗೆ ನೆರಳು ಮತ್ತು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಸಲಹೆ ನೀಡಲಾಗಿದೆ.
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಮಾತನಾಡಿ, ಬೇಸಿಗೆ ಸಮಯದಲ್ಲಿ ಜನರು ಆರೋಗ್ಯ ಕಾಪಾಡಿಕೊಳ್ಳಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243