ದಿನದ ಸುದ್ದಿ
ಸಚಿವ ಬಿ.ಶ್ರೀರಾಮುಲು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಉದ್ಘಾಟನೆ ನೆರವೇರಿತು
ಸುದ್ದಿದಿನ,ಧಾರವಾಡ : ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಕವಿವಿ ಆವರಣದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯರ್ಥಿ ನಿಲಯ ಹಾಗೂ ಸಪ್ತಾಪೂರದಲ್ಲಿ ನಿರ್ಮಿಸಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಇಂದು ಮಧ್ಯಾಹ್ನ ಕವಿವಿ ಆವರಣದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬೃಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಕವಿವಿ ಕುಲಪತಿ ಡಾ.ಕೆ.ಬಿ.ಗುಡಸಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಸೇರಿದಂತೆ ಇತರ ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ | ಟಿಎಂಸಿ ಮಣ್ಣಿನ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಲಿದೆ: ಪಿಎಂ ಮೋದಿ ಅಭಿಮತ
ಕವಿವಿ ಆವರಣದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯವನ್ನು 412.83 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಸಪ್ತಾಪೂರದಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯರ್ಥಿ ನಿಲಯವನ್ನು 387 ಲಕ್ಷ ರೂ.ಗಳ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ.
ಇದೆ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆಯಡಿ ಆಯ್ಕೆಯಾಗಿದ್ದ ವಿವಿಧ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243