ದಿನದ ಸುದ್ದಿ
ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಅಮಾಯಕರು ಬಲಿಯಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ; ಅಕ್ರಮ ಗಣಿಗಳ ಸಕ್ರಮಕ್ಕೆ ಮುಂದಾಗಿರುವ ಮುಖ್ಯಮಂತ್ರಿಗಳ ದುರಾಡಳಿತಕ್ಕೆ : ಸಿದ್ದರಾಮಯ್ಯ ಆಕ್ರೋಶ
ಸುದ್ದಿದಿನ ಡೆಸ್ಕ್ : ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಮುಖ್ಯಮಂತ್ರಿಗಳೇ, ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಬದಲಿಗೆ ಈ ಅಮಾಯಕ ಕಾರ್ಮಿಕರು ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿಗಳ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | ಜಿ ಎಸ್ ಟಿ ವಿರೋಧಿಸಿ ಸಿಎಐಟಿ ಫೆ. 26ರಂದು ಭಾರತ್ ಬಂದ್ ಗೆ ಕರೆ : ಎಐಟಿಡಬ್ಲ್ಯುಎ ಬೆಂಬಲ
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಮುಖ್ಯಮಂತ್ರಿ ಅವರು ತಕ್ಷಣ ಆದೇಶಿಸಬೇಕು. ಇದಕ್ಕಿಂತ ಮೊದಲು ಈ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಅಮಾನತ್‌ನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.
ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಷಾಮೀಲಾಗಿದ್ದಾರೆ. ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ ಜಿಲ್ಲೆಯ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಅವರ ಗಮನಕ್ಕೆ ಬಂದಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ 2000ಕ್ಕೂ ಹೆಚ್ಚು ಅನಧಿಕೃತ ಕ್ರಷರ್, ಕ್ವಾರಿಗಳಿವೆ ಎಂದು ಹೇಳಲಾಗುತ್ತಿದೆ. ಇವುಗಳ ಪಟ್ಟಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಬಿಡುಗಡೆಗೊಳಿಸಬೇಕು ಮತ್ತು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚುವ ಕೆಲಸ ಶುರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ.
ಈ ಅಮಾಯಕ ಕಾರ್ಮಿಕರು,
ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ @CMofKarnataka ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ.#ChkkaballapuraBlast
3/6— Siddaramaiah (@siddaramaiah) February 23, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


