ದಿನದ ಸುದ್ದಿ

‘ದಿ ಕೇರಳ ಸ್ಟೋರಿ’ ವಿವಾದ| ಲವ್ ಜಿಹಾದ್ ಅನ್ನೋದು ಸುಳ್ಳು : ಕೇರಳ ಸಿಎಂ ಪಿಣರಾಯಿ

Published

on

ಸುದ್ದಿದಿನ, ಕೇರಳ : ‘ದಿ ಕೇರಳ ಸ್ಟೋರಿ’ ಸಿನೆಮಾ ಟ್ರೇಲರ್ ನೋಡಿ ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸಿನೆಮಾದಿಂದ ಕೇರಳಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಧ್ಯ ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಪರ- ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವಿಟ್ಟುಕೊಂಡು ತಯಾರಾಗಿರುವ ಈ ಸಿನಿಮಾದಲ್ಲಿ ಐಸಿಸ್ ವಿಚಾರವನ್ನೂ ಹೇಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚಿತ್ರದ ಟ್ರೇಲರ್ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೇರಳದಲ್ಲಿ ಸಿನಿಮಾ ರಿಲೀಸ್‌ಗೆ ತಡೆ ಬಿದ್ದರೂ ಅಚ್ಚರಿ ಏನಿಲ್ಲ.

ಲವ್ ಜಿಹಾದ್ ಅನ್ನೋದು ಸುಳ್ಳು. ತನಿಖಾ ಸಂಸ್ಥೆ, ನ್ಯಾಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯದಿಂದ ಲವ್ ಜಿಹಾದ್ ಎಂಬ ವಿಚಾರ ತಿರಸ್ಕರಿಸಲ್ಪಟ್ಟಿದೆ. ಈಗ ಲವ್ ಜಿಹಾದ್ ವಿಚಾರನ್ನೇ ಚಿತ್ರದ ಥೀಮ್ ಮಾಡಿಕೊಂಡಿದ್ದಾರೆ. ರಾಜ್ಯದ ಬಗ್ಗೆ ಅಪಪ್ರಚಾರ ಮಾಡಲು ಸಂಘಪರಿವಾರ ಪ್ರಯತ್ನಿಸುತ್ತಿದೆ’ ಎಂದಿದ್ದಾರೆ ಪಿಣರಾಯಿ ವಿಜಯನ್.

ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ತೆಗೆದ ಸಿನಿಮಾ ಇದು ಎಂದು ನಿರ್ದೇಶಕ ಸುದಿಪ್ಲೋ ಸೇನ್ ಹೇಳಿದ್ದಾರೆ. ಇರಾಕ್ ಮತ್ತು ಸಿರಿಯಾದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಂಡ ಕೇರಳದ 32,000 ಮಹಿಳೆಯರು ಕಣ್ಮರೆಯಾಗುವುದರ ಸುತ್ತ ಚಿತ್ರದ ಕಥೆ ಸಾಗುತ್ತದೆ. ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,ನಟಿ ಶ್ವೇತಾ ಮೆನನ್ ಕೂಡ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ. ಸದ್ಯ ಸಿನಿಮಾ ರಿಲೀಸ್‌ಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ, ಸಿನಿಮಾ ಮೇ5ಕ್ಕೆ ರಿಲೀಸ್ ಆಗಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಟ್ರೇಲರ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version