ದಿನದ ಸುದ್ದಿ
ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ
ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು ದಾರಿ ತಪ್ಪಿಸುವುದಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
500 ಔಷಧಿಗಳ ದರ ಸಣ್ಣ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ ಎಂಬ ವರದಿಗಳಲ್ಲಿ ಸತ್ಯಾಂಶವಿಲ್ಲ. ಆ ವರದಿಗಳು ದುರುದ್ದೇಶ ಪೂರ್ವಕವಾಗಿವೆ ಎಂದು ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಔಷಧ ನಿಯಂತ್ರಣ ಪ್ರಾಧಿಕಾರ ಪ್ರತಿವರ್ಷ ಸಗಟು ಬೆಲೆ ಸೂಚ್ಯಂಕ ಆಧರಿಸಿ ಔಷಧಗಳ ಬೆಲೆಯನ್ನು ನಿಗದಿಪಡಿಸುತ್ತದೆ. 782 ಔಷಧಿಗಳ ಪೈಕಿ 54ಔಷಧಿಗಳ ದರ ಅಲ್ಪ ಪ್ರಮಾಣದಲ್ಲಿ ಅಂದರೆ, 1 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243