Connect with us

ಲೈಫ್ ಸ್ಟೈಲ್

ನೂರು ಮಕ್ಕಳ ತಾಯಿ ಶತಾವರಿ

Published

on

ತಾವರಿ ಸಸ್ಯಕ್ಕೆ ನೂರು ಮಕ್ಕಳ ತಾಯಿ ಎಂದು ಕರೆಯುತ್ತಾರೆ. ಇದಕ್ಕೆ ಸಂಸ್ಕøತದಲ್ಲಿ ಶತಮೂಲಿ ಎಂಬ ಹೆಸರಿದೆ. ಇಂಗ್ಲಿಶ್‍ನಲ್ಲಿ ಅಸ್ಪರಾಗಸ್ ಎಂದು ಕರೆಯಲಾಗುತ್ತದೆ. ಆಸ್ಪರಾಗಸ್ ಇದು ಗ್ರೀಕ್ ಪದವಾಗಿದ್ದು, ಇದರರ್ಥ ಕಾಂಡ, ಚಿಗುರು ಎಂದು. ಹಾಗೆನೇ ಇದೊಂದು ಕವಲು ಬೇರುಳ್ಳ ಸಸ್ಯ.

ಪ್ರಸವದ ನಂತರ ಎದೆಹಾಲು ಕಮ್ಮಿ ಇರುವ ತಾಯಂದಿರು ಸೇವಿಸಿದರೆ ಹಾಲು ಸಮೃದ್ಧಿಯಾಗಿ ಉತ್ಪತ್ತಿ ಆಗುತ್ತದೆ. ಅಜೀರ್ಣ, ಸುಟ್ಟಗಾಯ, ಮೂತ್ರರೋಗ, ನರಸಂಬಂಧ ವ್ಯಾಧಿ ಮುಂತಾದ ತೊಂದರೆಗಳಿಗೆ ಬಳಸಬಹುದು.

ಶತಾವರಿಯ ಔಷಧೀಯ ಗುಣಗಳು

  • ಶತಾವರಿ ಬೇರನ್ನು ಎಣ್ಣೆಯಲ್ಲಿ ಕುದಿಸಿ, ಆ ಎಣ್ಣೆಯನ್ನು ಚರ್ಮರೋಗಗಳಿಗೆ ಉಪಯೋಗಿಸುತ್ತಾರೆ. ಶತಾವರಿಯ ತಾಜಾ ಬೇರಿನ 25 ಮಿಲಿಲೀಟರ್ ರಸವನ್ನು ಅರ್ಧ ಚಮಚ ಜೇನಿನೊಂದಿಗೆ ಸೇವಿಸಿದರೆ, ಊತ ನಿವಾರಣೆ ಆಗುತ್ತದೆ.
  • ಶತಾವರಿ ಬೇರಿನ ರಸ, ಎಳ್ಳೆಣ್ಣೆ, ಅರಿಶಿಣದ ಕಷಾಯ, ಒಡೆದ ಹಾಳಿನ ತಿಳಿಭಾಗ ಮತ್ತು ಹಾಲನ್ನು ಸೇರಿಸಿ, ಎಣ್ಣೆ ಮಾತ್ರ ಉಳಿಯುವಂತೆ ಕುದಿಸಬೇಕು. ಕುದಿದ ಉಳಿದ ಭಾಗವನ್ನು ಜೀರ್ಣ ಸಂಬಂಧ ಸಮಸ್ಯೆಗಳಲ್ಲಿ ಮತ್ತು ಅನ್ಯ ಮೂತ್ರ ರೋಗಗಳಿಗೆ ಉಪಯೋಗಿಸುತ್ತಾರೆ.
  • ಶತಾವರಿ ಎಲೆಯನ್ನು ಬೇಯಿಸಿ, ಆ ಎಲೆಗಳ ಮೇಲೆ ತುಪ್ಪ ಸವರಿ ತಯಾರಿಸಿ ಸವರಿ ಸುಟ್ಟ ಗಾಯಗಳೀಎ, ಘೋರ, ಅಮ್ಮಬಂದಾಗ ಲೇಪಿಸಿದರೆ, ಉತ್ತಮ ಫಲಿತಾಂಶವನ್ನು ಪಡೆಯಬಹುದು.
  • ಶತಾವರಿ ಬೇರಿನ ರಸವನ್ನು ಹಾಲು ಸಕ್ಕರೆಯೊಂದಿಗೆ ಪೇಯ ತಯಾರಿಸಿ ಸೇವಿಸಿದರೆ, ಆರೋಗ್ಯ ವರ್ಧನೆಯಾಗುತ್ತದೆ.
  • ಶತಾವರಿ ಬೇರಿನ ರಸಕ್ಕೆ ಸಮಪ್ರಮಾಣದಲ್ಲಿ ಎಳ್ಳಣ್ಣೆ ಬೆರೆಸಿ, ಹಸುವಿನ ಅಥವಾ ಮೇಕೆ ಹಾಲನ್ನು ಸೇರಿಸಿ ಎಣ್ಣೆ ಉಳಿಯುವವರೆಗೆ ಕಾಯಿಸಬೇಕು, ನಂತರ ಅದನ್ನು ನರಗಳ ಮೇಲೆ ಲೇಪಿಸಿದರೆ ನರಗಳಿಗೆ ಸಂಬಂಧವಾ ವ್ಯಾಧಿ ದೂರ ಆಗುತ್ತದೆ.
  • ಎರಡು ಚಮಚ ಶತಾವರಿ ಚೂರ್ಣವನ್ನು ಒಂದು ಲೋಟ ನೀರು ಮತ್ತು ಒಂದು ಲೋಟ ಹಾಲಿಗೆ ಸೇರಿಸಿ, ಹಾಲು ಮಾತ್ರ ಉಳಿಯುವಂತೆ ಕುದಿಸ ಬೇಕು. ಅದಕ್ಕೆ ಕಲ್ಲು ಸಕ್ಕರೆ, ಏಲಕ್ಕಿಪುಡಿ ಬೆರೆಸಿ ಸೇವಿಸಿದರೆ ಬಲ, ಕಾಂತಿ ವೃದ್ಧಿಯಾಗಿ, ಆರೋಗ್ಯ ವೃದ್ದಿಸುತ್ತದೆ. ಹಾಲು ಕುಡಿಸುವ ತಾಯಂದಿರಿಗೆ ಉತ್ತಮ ಪೇಯವಾಗುತ್ತದೆ.
  • ಶತಾವರಿ ಚೂರ್ಣ, ಚೇಷ್ಟಮಧು ಚೂರ್ಣ, ಅಶ್ವಗಂಧ ಚೂರ್ಣಗಳನ್ನು ಸಮಪ್ರಮಾಣದಲ್ಲಿ ಬೆರೆಸಿಟ್ಟು ಪ್ರತಿದಿನ ಒಂದು ಚಮಚವನ್ನು ಜೇನಿನಲ್ಲಿ ಕಲೆಸಿ ತಿಂದ ಮೇಲೆ, ಹಾಲನ್ನು ಕುಡಿಯುತ್ತಾ ಬಂದರೆ ವೀರ್ಯಾಣುಗಳು ವೃದ್ಧಿಯಾಗುತ್ತವೆ. ದೀರ್ಘ
  • ವ್ಯಾಧಿಯಿಂದ ಚೇತರಿಸಿಕೊಳ್ಳುವವರಿಗೆ ಒಂದು ಉತ್ತಮ ಔಷಧಿ.
    ಶತಾವರಿ ಬೇರಿನಿಂದ ಯಾರಿಸಿದ ಶತಾವರ್ಯಾದಿ ಲೇಹ್ಯ ಸ್ತ್ರೀಯರಿಗೆ ಎಲ್ಲಾ ವಿಧವಾದ ತೊಂದರೆಗಳಿಗೆ ಒಂದು ಶ್ರೇಷ್ಠ ಔಷಧಿ.
  • ಶತಾವರಿ ಗಡ್ಡೆ ಪುಡಿ ಅತೀಸಾರ ಭೇದಿಯಿಂದ ನರಳುತ್ತಿರುವವರಿಗೆ ಫಲಕಾರಿ.
    ಎಳ್ಳೆಣ್ಣೆಯಲ್ಲಿ ಶತಾವರಿ ಗಡ್ಡೆ ಹಾಕಿ, ನೋವಿರುವ ಸ್ಥಳಕ್ಕೆ ಹಂಚಿಕೊಂಡರೆ ನೋವು ಕಡಿಮೆಯಾಗುತ್ತದೆ.
  • ಅಡುಗೆಯಲ್ಲಿ ಶತಾವರಿಯನ್ನು ಪಲ್ಯದ ರೂಪದಲ್ಲಿ ಬಳಸುವುದರಿಂದ ಹೃದ್ರೋಗ ಪರಿಹಾರವಾಗುತ್ತದೆ.
  • ಶತವರಿಯನ್ನು ಆಹಾರದಲ್ಲಿ ನಿಯಮಿತವಾಗಿ ಬಳಸುವುದರಿಂದ ಮೂತ್ರ ಸುಲಭವಾಗುತ್ತದೆ.

ನೂರು ಗ್ರಾಂ ಶತಾವರಿಯಲ್ಲಿರುವ ಪೋಷಕಾಂಶಗಳು                                               

  • ತೇವಾಂಶ – 93.0 ಗ್ರಾಂ
  • ಸಸಾರಜನಕ – 2.2 ಗ್ರಾಂ
  • ಕೊಬ್ಬು – 0.2 ಗ್ರಾಂ
  • ಶರ್ಕರ ಪಿಷ್ಟ – 3.2 ಗ್ರಾಂ
  • ನಾರಿನಾಂಶ – 0.7 ಗ್ರಾಂ
  • ಕಬ್ಬಿಣ – 0.960 ಗ್ರಾಂ
  • ರಂಜಕ – 0.039 ಗ್ರಾಂ
  • ಸುಣ್ಣ – 0.025 ಗ್ರಾಂ
  • ಎ ಜೀವಸತ್ವ – 1400 ಇಂ. ಯೂ
  • ಬಿ1 ಜೀವಸತ್ವ – 0.180 ಗ್ರಾಂ
  • ಬಿ2 ಜೀವಸತ್ವ – 0.130 ಗ್ರಾಂ
  • ಸಿ ಜೀವಸತ್ವ – 0.040 ಗ್ರಾಂ

ಶತಾವರಿಯಿಂದ ತಯಾರಿಸ ಬಹುದಾದ ಅಡುಗೆಗಳು

  • ಶತಾವರಿ ಸೂಪ್
  • ಶತವರಿ ಪಲ್ಯ
  • ಶತಾವರಿ ಉಪ್ಪಿನಕಾಯಿ
  • ಶತಾವರಿ ಸಾಂಬಾರ್
  • ಶತಾವರಿ ಚಟ್ನಿ
  • ಶತಾವರಿ ಮಸ್ಸೊ

 

ಸುದ್ದಿಗಾಗಿ,ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್¦9986715401

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

Published

on

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.

ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.

ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.

ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.

ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ7 days ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ1 week ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ2 weeks ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ3 weeks ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ3 weeks ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ3 weeks ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

Trending