ದಿನದ ಸುದ್ದಿ

ಇದೇ 5 ರಂದು 50 ಹಾಸಿಗೆಗಳ ಸಂಯುಕ್ತ ಆಯುಷ್ ಆಸ್ಪತ್ರೆ ಮತ್ತು ಜಿಲ್ಲಾ ಆಯುಷ್ ಕಚೇರಿ ನೂತನ ಕಟ್ಟಡ ಉದ್ಘಾಟನೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೇ.5 ರಂದು ಮಧ್ಯಾಹ್ನ 3 ಗಂಟೆಗೆ ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆ, ಪೋದಾರ್ ಸ್ಕೂಲ್ ಹತ್ತಿರ, ಇಲ್ಲಿ 50 ಹಾಸಿಗೆಗಳ ಸಂಯುಕ್ತ ಆಯುಷ್ ಆಸ್ಪತ್ರೆ ಮತ್ತು ಜಿಲ್ಲಾ ಆಯುಷ್ ಕಚೇರಿ ನೂತನ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉದ್ಘಾಟಿಸುವರು.

ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು ಟಿ ಬಸವರಾಜ್, ಶಿರಮಗೊಂಡನಹಳ್ಳಿಯ ಗ್ರಾ.ಪಂ ಅಧ್ಯಕ್ಷರಾದ ಪ್ರಸನ್ನ.ಡಿ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರಕುಮಾರ್.ಬಿ.ಯು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಆಯುಷ್ ಇಲಾಖೆಯ ಆಯುಕ್ತರಾದ ವಿಪಿನ್‌ಸಿಂಗ್ ವಿಶೇಷ ಆಹ್ವಾನಿತರಾಗಿರುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version