ದಿನದ ಸುದ್ದಿ
ದೇಶದಲ್ಲಿರುವ ‘ಓಬಿಸಿಗಳಿಗೆ ಸಂವಿಧಾನದತ್ತ ಮೀಸಲಾತಿಯ’ ಮಹತ್ವದ ಅರಿವಿಲ್ಲ ; ಡಾ.ಶಿಲಾಧರ ಮುಗಳಿ
ಸುದ್ದಿದಿನ,ಧಾರವಾಡ : ನಮ್ಮ ದೇಶದಲ್ಲಿರುವ ಇತರೆ ಹಿಂದುಳಿದ ವರ್ಗ(ಓಬಿಸಿ)ಗಳ ಹಿತರಕ್ಷಣೆಗಾಗಿ ಸೇರಿಸಲಾಗಿರುವ ಸಂವಿಧಾನದ ಆರ್ಟಿಕಲ್-340ರ ಮಹತ್ವ ಮತ್ತು ಅರಿವಿಲ್ಲದ ಓಬಿಸಿಗಳಿಗೆ ಬಾಬಾಸಾಹೇಬರು ನೀಡಿದ ಸಂವಿಧಾನದತ್ತ ಮೀಸಲಾತಿಯ ಕುರಿತು ತಿಳಿದುಕೊಳ್ಳದೆ ಹಿತಶತ್ರುಗಳ ಮಾತಿಗೆ ಮರುಳಾಗಿ ಸಂವಿಧಾನದ ಸವಲತ್ತುಗಳಿಂದ ವoಚಿತರಾಗಲು ತಮಗೆ ತಾವೇ ಕಾರಣರಾಗಿದ್ದಾರೆ ಎಂದು ಕವಿವಿ ಇತಿಹಾಸ ಪ್ರಾಧ್ಯಾಪಕ ಡಾ.ಶಿಲಾಧರ ಮುಗಳಿ ವಿಷಾದ ವ್ಯಕ್ತಪಡಿಸಿದರು.
ಅವರು ಧಾರವಾಡದಲ್ಲಿ ಗಣಕರಂಗ ಸಂಸ್ಥೆಯು (Nov.26) ಸಂವಿಧಾನ ದಿನಾಚರಣೆ ಅಂಗವಾಗಿ ಎರ್ಪಡಿಸಿದ್ದ 3ಬಿ ನೆನಪಿನ ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಿದ್ದರು. ಬಹುಮುಖ ವ್ಯಕ್ತಿತ್ವದ ಬಾಬಾಸಾಹೇಬ ಡಾ.ಅಂಬೇಡ್ಕರ್ ಅವರು ಗುರುತಿಸಿರುವಂತೆ ಈ ದೇಶದಲ್ಲಿ ಆಚರಿಸಲಾಗುತ್ತಿರುವ ಅಸ್ಪøಶ್ಯತೆಯ ಮೂರು ಪ್ರಕಾರಗಳಾದ ಮುಟ್ಟಿಸಿಕೊಳ್ಳದ, ಸಂಪರ್ಕಿಸದ ಮತ್ತು ನೋಡಬಾರದ ಶೋಷಿತ ವರ್ಗಗಳ ಉದ್ಧಾರವನ್ನು ಗಮನದಲ್ಲಿಟ್ಟುಕೊಂಡು ವಿಶ್ವವೇ ಒಪ್ಪುವಂತಹ ಸಂವಿಧಾನ ರಚನೆ ಮಾಡಿದ್ದು ಈಗ ಇತಿಹಾಸ. ಮೊದಲು ಮತ್ತು ಅಂತಿಮವಾಗಿ ನಾವು ಭಾರತೀಯರು ಎಂದು ಪ್ರತಿಪಾಧಿಸಿದ ದೇಶಭಕ್ತ ಬಾಬಾಸಾಹೇಬ ಡಾ.ಅಂಬೇಡ್ಕರ ಅವರು ಕೊಡುಗೆಯಾಗಿ ಈ ದೇಶಕ್ಕೆ ನೀಡಿದ್ದು ರಾಜಕೀಯ ಮೀಸಲಾತಿ ಮತ್ತು ರಾಜಕೀಯೇತರ ಮೀಸಲಾತಿ ಎಂಬ ಎರಡು ಮೀಸಲಾತಿಗಳು ಮಾತ್ರ. ರಾಜಕೀಯ ದುರ್ಲಾಭಕ್ಕಾಗಿ ರಾಜಕೀಯ ಮೀಸಲಾತಿಯನ್ನು ಇಂದಿಗೂ ಮುಂದುವರೆಸಲಾಗುತ್ತಿದೆ. ರಾಜಕೀಯೇತರ ಮೀಸಲಾತಿಗೆ ಕೊನೆಯೆಂಬುದಿಲ್ಲ. ವಿವಿಧ ವಲಯಗಳಲ್ಲಿ ಅಂದರೆ ಭಾಷಾ ಮಾಧ್ಯಮ ಮೀಸಲಾತಿ, ಯೋಜನಾ ನಿರಾಶ್ರಿತರ ಮೀಸಲಾತಿ, ಮಹಿಳಾ ಮೀಸಲಾತಿ, ವಿಶೇಷ ವಲಯ ಮೀಸಲಾತಿ, ಕಾಶ್ಮೀರ ಪಂಡಿತರಿಗೆ ಮೀಸಲಾತಿ ಹೀಗೆ ಹಲವಾರು ರೀತಿಯ ಮೀಸಲಾತಿಗಳು ಜಾರಿಯಲಿದ್ದರೂ ಸಹ ಎಲ್ಲರ ಕಣ್ಣುಕಿಸುರಾಗುವುದು ಎಸ್ಸಿ-ಎಸ್ಟಿ ಅಂದರೆ ದಲಿತ-ದಮನಿತರ ಮೀಸಲಾತಿಯ ವಿಷಯದಲ್ಲಿ. ಆದರೆ ಇತ್ತೀಚಿನ ದಿನಗಳಲ್ಲಿ ಮೀಸಲಾತಿಯ ಸಂಪೂರ್ಣ ಅರಿವಿರದ ಕೆಲವು ಎಡಬಿಡಂಗಿಗಳು ದೇಶಬಾಂಧವರಲ್ಲಿ ತಪ್ಪು ತಿಳುವಳಿಕೆ, ಪರಸ್ಪರ ಅಪನಂಬಿಕೆ, ಅಸೂಯೆ, ವೈರತ್ವ ಮೂಡುವಂಥಹ ಸನ್ನಿವೇಶ ಸೃಷ್ಟಿಸುವ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಈ ದೇಶದ ಸಂವಿಧಾನದ ಸರ್ವ ಫಲಾನುಭವಿಗಳು ಅಂದರೆ ಜಾಗೃತ ದೇಶಬಾಂಧವರು ಎಚ್ಚರಿಕೆಯಿಂದ ಇರಬೇಕಾದುದು ಅವಶ್ಯ ಎಂದು ವಿವರಿಸಿದರು.
ಆಶಯ ನುಡಿಗಳನ್ನಾಡಿದ ಕವಿ ಡಾ.ಮಹೇಶ ರುದ್ರಕರ ಅವರು, ಸರ್ವ ಶೊಷಿತ ಸಮುದಾಯಗಳಷ್ಟೇ ಅಲ್ಲದೇ ಸರ್ವ ಪ್ರಜೆಗಳ ಕಲ್ಯಾಣವನ್ನು ಬಯಸುವ ವಿಶ್ವಶ್ರೇಷ್ಟ ಭಾರತದ ಸಂವಿಧಾನ ನೀಡುವ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳಲು ಸಂವಿಧಾನದ ಕುರಿತಾದ ಅರಿವು, ತಿಳುವಳಿಕೆ ಮೂಡಿಸುವ ಕೆಲಸ ನಿರಂತರ ನಡೆಯಬೇಕಾಗಿದೆ. ಕೆಲವು ರೂಡಿಗತ ಸಂಪ್ರದಾಯವಾದಿಗಳು ಬಹುತ್ವದ ಭಾರತದ ಮುಗ್ದರನ್ನು ದುರೂಪಯೋಗಪಡಿಸಿಕೊಳ್ಳಲು ಇಲ್ಲದ ಕಥೆ, ಪುರಾಣಗಳನ್ನು ಕಟ್ಟಿ ದಾರಿ ತಪ್ಪಿಸುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ದುಷ್ಕøತ್ಯವನ್ನು ತಡೆಯುವುದು ಸುಶಿಕ್ಷಿತ ಸಮುದಾಯದ ಜವಾಬ್ದಾರಿಯಾಗಿದೆ ಎಂದು ಹೇಳುತ್ತಾ, ಕೊನೆಯಲ್ಲಿ ಸಂವಿಧಾನದ ಮಹತ್ವ ಸಾರುವ ಸ್ವರಚಿತ ಕವನ ವಾಚಿಸಿದರು.
ಜಗತ್ತಿನ ಶಾಂತಿ, ಮೈತ್ರಿಯ ಸಂದೇಶ ನೀಡಿದ ಬುದ್ಧ, ಕಾಯಕದ ಮಹತ್ವ ಸಾರಿದ ಬಸವಾದಿ ಶರಣರು ಮತ್ತು ಆಧುನಿಕ ಭಾರತಕ್ಕೆ ದಿಕ್ಸೂಚಿಯಾದ ವಿಶ್ವಶ್ರೇಷ್ಟ ಸಂವಿಧಾನ ನೀಡಿದ ಬಾಬಾಸಾಹೇಬ ಡಾ.ಅಂಬೇಡ್ಕರ ನೆನಪಿನ ಕವಿಗೋಷ್ಟಿ ಮತ್ತು ಸಂವಿಧಾನ ದಿನಾಚರಣೆ ಹೆಚ್ಚು ಸೂಕ್ತವಾಗಿದೆ. 3ಬಿ ನೆನಪಿನ ಕವಿಗೋಷ್ಟಿ ಹೆಚ್ಚು ಅರ್ಥಪೂರ್ಣವಾಗಿದೆ. ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಕಾಣಬೇಕಾಗಿತ್ತು ಆದರೆ ಸಿನಿಕತನ ಹೆಚ್ಚಾಗುತ್ತಿರುವ ಇಂದಿನ ಸಾಮಾಜೀಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ತೀವ್ರವಾಗಿದೆ ಎಂದು ಅತಿಥಿಗಳಾಗಿ ಆಗಮಿಸಿದ್ದ ಕವಿ, ಕಥೆಗಾರ ಡಾ.ಬಸು ಬೇವಿನಗಿಡದ ಅಭಿಪ್ರಾಯ ವ್ಯಕ್ತಪಡಿಸಿದರು.
ಚಿಂತಕ ಲಕ್ಷ್ಮಣ ಬಕ್ಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ರಂಗಕರ್ಮಿ ಹಿಪ್ಪರಗಿ ಸಿದ್ಧರಾಮ ಅಚ್ಚುಕಟ್ಟಾಗಿ ನಿರ್ವಹಿಸಲು ನಿತಿನ್ ಗುಡಿಮನಿ ಸಹಕರಿಸಿದರು. ಕಾರ್ಯಕ್ರಮದ ಆರಂಭಕ್ಕೆ ಇತ್ತಿಚೆಗೆ ಅಗಲಿದ ಮಹಾನ್ ಚೇತನಗಳಾದ ಕನ್ನಡದ ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು, ಕಲಾವಿದ-ರಾಜಕಾರಣಿ ಡಾ.ಅಂಬರೀಷ ಮತ್ತು ಕವಿ-ರಾಜಕಾರಣಿ ಜಾಫರ್ ಶರೀಪ್ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ನಂತರ ನಡೆದ ‘ನಮ್ಮ ಭಾರತದ ಸಂವಿಧಾನ’ ಶೀರ್ಷಿಕೆಯಡಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಂದೀಪ ಕುಲಕರ್ಣಿ, ಶ್ರೀಧರ ಗಸ್ತಿ, ಆನಂದ ಮಾಲಗಿತ್ತಿಮಠ, ಆನಂದ ಹಕ್ಕೇನ್ನವರ, ಅರುಣ ಮೂಡಿ, ಅರುಣ ಕೊಪ್ಪ, ಭಾಗ್ಯಶ್ರೀ ರಜಪೂತ, ಎನ್.ಆರ್.ಠಕ್ಕಾಯಿ, ಸಚಿನ್ ಮುಂದಿನಕೇರಿ, ವಿನೋದಾ ಕರಣಂ, ಸುಭಾಸ ಚವಾಣ್, ಶರಣಪ್ಪ ಗೊಲ್ಲರ, ಶಿವಾನಂದ ಚವಾರ, ಅನಿಲಕುಮಾರ ಉಮಚಗಿ ಮುಂತಾದ ಕವಿಗಳು ಸ್ವರಚಿತ ಕವನ ವಾಚಿಸಿದ ನಂತರ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮ ನಿರ್ವಾಹಕರು
9902674005 / 9845109480
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ4 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ6 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು