ದಿನದ ಸುದ್ದಿ
ನೀರಿಗಿಳಿದ ಎಮ್ಮೆ ರಕ್ಷಿಸಲು ಹೋಗಿ ವ್ಯಕ್ತಿ ಸಾವು
ಸುದ್ದಿದಿನ ಡೆಸ್ಕ್ : ಕೃಷ್ಣರಾಜಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಕೆರೆಯ ಬಳಿ ಎಮ್ಮೆ ಮೇಯಿಸಲು ಹೋಗಿದ್ದ ರೈತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮುರುಕನಹಳ್ಳಿ ಗ್ರಾಮದ ರೈತ ನಂಜೇಗೌಡ(70) ನೀರಿಗಿಳಿದ ಎಮ್ಮೆಯನ್ನು ಹಿಡಿಯಲು ಹೋಗಿ ಕೆರೆಯ ನೀರಿನಲ್ಲಿದ್ದ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಪಟ್ಟಣದ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಶ್ರೀನಿವಾಸರಾವ್ ಮತ್ತು ಸಿಬ್ಬಂದಿಗಳು ತುರ್ತು ಕಾರ್ಯಾಚರಣೆ ನಡೆಸಿ ನೀರಿನಿಂದ ಮೃತ ದೇಹವನ್ನು ಹೊರತೆಗೆದು ಮೃತರ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಈ ಘಟನೆಯನ್ನುವೀಕ್ಷಿಸಲು ಸಾವಿರಾರು ಗ್ರಾನಸ್ಥರು ಜಮಾಯಿಸಿದ್ದರು.ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಮುರುಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೊಂಡಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401