ದಿನದ ಸುದ್ದಿ
ದೇಶದ ಅಭಿವೃದ್ಧಿಯಲ್ಲಿ ತೋಟಗಾರಿಕೆಯ ಪಾತ್ರ ಮಹತ್ವದ್ದು; ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್
ಸುದ್ದಿದಿನ ಡೆಸ್ಕ್ : ದೇಶದ ಅಭಿವೃದ್ಧಿಯಲ್ಲಿ ತೋಟಗಾರಿಕೆಯ ಪಾತ್ರ ಅಪಾರವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಹೇಳಿದ್ದಾರೆ.
ಬಾಗಲಕೋಟೆಯಲ್ಲಿಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಕೃಷಿ ಪದವೀದರರು ವಿವಿಧ ಪ್ರಯೋಗ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿಯಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ತೋಟಗಾರಿಕೆ ಸಚಿವ ಮುನಿರತ್ನ ಮಾತನಾಡಿ, ವಿದ್ಯಾರ್ಥಿಗಳು ತೋಟಗಾರಿಕೆಯಲ್ಲಿ ಕಲಿತಂತಹ ಜ್ಞಾನವನ್ನು ರೈತರ ಆದಾಯ ಹೆಚ್ಚಿಸುವಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ನೀರಾವರಿ ತಜ್ಞ ರಾಜೇಂದ್ರ ಸಿಂಗ್ ಮಾತನಾಡಿ, ಜಲ ಸಂಪನ್ಮೂಲ ಸಂರಕ್ಷಣೆ, ನಿರ್ವಹಣೆ ಹಾಗೂ ಸದ್ಭಳಕೆಯ ಬಗ್ಗೆ ವೈಜ್ಞಾನಿಕ ತಿಳುವಳಿಕೆಯ ಅವಶ್ಯಕತೆ ಇದು, ನೈಸರ್ಗಿಕ ಸ್ವರೂಪ, ನೀರಿನ ಲಭ್ಯತೆ, ಇತಿಮಿತಿಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕಾಗಿದೆ ಎಂದು ಹೇಳಿದರು.
ಘಟಿಕೋತ್ಸವದಲ್ಲಿ ಹಿರಿಯೂರಿನ ಹೆಚ್.ಏಕಾಂತಯ್ಯನವರಿಗೆ ಗೌರವ ಡಾಕ್ಟರೇಟ್ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಕುಲಪತಿ ಡಾ.ಕೆ.ಎಂ.ಇಂದಿರೇಶ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಮತ್ತಿತರರು ಘಟಿಕೋತ್ಸವದಲ್ಲಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243