Connect with us

ಲೈಫ್ ಸ್ಟೈಲ್

ಶಿಯೋಮಿ ರೆಡ್ ಮೀ ನೋಟ್ 5 ‘ ಇಂದು ಮಾರುಕಟ್ಟೆಗೆ

Published

on

ತಿ‌ಕಡಿಮೆ ಬೆಲೆಗೆ ದೇಶಿಯ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟ ಹಾಗೂ ತಂತ್ರಜ್ಞಾನದ ಮೊಬೈಲ್ ಗಳನ್ನು ಬಿಡುಗಡೆಮಾಡಿ ಖ್ಯಾತಿ ಪಡೆದಿರುವ, ಶಿಯೋಮಿ ಕಂಪನಿ ಇಂದು (ಮೇ14) ತನ್ನ ಹೊಸ ಮೊಬೈಲ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ತಯಾರಿನಡೆಸಿದೆ. ಆ ಮೊಬೈಲ್ ಹೇಗಿದೆ ಅದರ ವೈಶಿಷ್ಟ್ಯತೆಗಳೇನು ಎಂದು ತಿಳಿಯಲು ನೀವು ಈ ಬರಹವನ್ನು ಸಂಪೂರ್ಣವಾಗಿ ಓದಲೇ ಬೇಕು.

ಒಳ್ಳೆಯ ಗುಣಮಟ್ಟದ ಮೊಬೈಲ್ ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಅತಿ ಕಡಿಮೆ ಬೆಲೆ ನಿಗಧಿಪಡಿಸಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಶಿಯೋಮಿ ಕಂಪೆನಿ ಯು, ಈಗಿನ ಟ್ರೆಂಡ್ ಗೆ ಹೊಂದಿಕೊಳ್ಳುವ ಹಾಗೆ ಹೊಸ ತಂತ್ರಜ್ಞಾನದೊಂದಿಗೆ ತನ್ನ ಹೊಸ ಮೊಬೈಲ್ ಪೋನ್’ ಶಿಯೋಮಿ ರೆಡ್ ಮೀ ನೋಟ್ 5 ‘ಅನ್ನು ಇಂದು ಮಾರುಕಟ್ಟೆಗೆ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ನೋಟ್ 5 ನ ಚಿತ್ರಗಳು ಸೋರಿಕೆ ಆಗಿದ್ದು, ಮಾರುಕಟ್ಟೆಯಲ್ಲಿ ಈ ಮೊಬೈಲ್ ಇಂದಿನಿಂದ ಸದ್ದು ಮಾಡಲಿದೆ.

ಕೆಲವು ಮೂಲಗಳ ಪ್ರಕಾರ ಶಿಯೋಮಿ ಕಂಪನಿ ಇಂದು ಬೆಳಗ್ಗೆ 11.30 ಕ್ಕೆ ಪತ್ರಿಕಾಗೋಷ್ಟಿಯನ್ನು ಕರೆದಿದೆ, ಸುಮಾರು 12 ಗಂಟೆ ಆಸುಪಾಸಿಗೆ ಕಾರ್ಯಕ್ರಮವು ಆರಂಭಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಆನ್‌ಲೈನ್‌ನಲ್ಲಿ ಶಿಯೋಮಿ ಮೊಬೈಲ್ ನ ಮಾಹಿತಿಗಳು ಮತ್ತು ಅದರ ವೈಶಿಷ್ಟ್ಯಗಳು ಸೋರಿಕೆಯಾಗಿದ್ದು ಅವುಗಳ ಕುರಿತಾದಂಹ ವಿವರಗಳು ಇಲ್ಲಿವೆ.

ಶಿಯೋಮಿ ರೆಡ್ ಮಿ ನೋಟ್ 5 ಮೊಬೈಲ್‌ನ ಹೊರ ವಿನ್ಯಾಸವು ತುಂಬಾ ಆಕರ್ಷಕವಾಗಿದೆ. ಹಳೆಯ ನೋಟ್‌ 4 ಮೊಬೈಲ್ ಗೆ ಹೋಲಿಸಿದರೆ ಇದರಲ್ಲಿ ನಾವು ತುಂಬಾ ಬದಲಾವಣೆಗಳನ್ನು
ಕಾಣಬಹುದು. ಈ ಮೊಬೈಲ್‌ 5.99 ಇಂಚು ಅಗಲದ ಸಂಪೂರ್ಣ ಎಚ್‌ಡಿ (1080×2160 ಪಿಕ್ಸೆಲ್) ಪರದೆಯನ್ನು ಹೊಂದಿದ್ದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 636 ಪ್ರೊಸೆಸರ್ ಮೂಲಕ ಇದು ಕಾರ್ಯನಿರ್ವಹಿಸುತ್ತದೆ. ನೋಟ್ 5 ಅನ್ನು ಎರಡು ರೀತಿಯಲ್ಲಿ ರೂಪಾಂತರಿಸಲಾಗಿದ್ದು ಮೊದಲನೆಯದು 3GB RAM ಮತ್ತು 32 GB ಆಂತರಿಕ ಸಂಗ್ರಹಣೆಯನ್ನು ಹೊಂದಿದ್ದರೆ, ಎರಡನೆಯದು 4 GB RAM ಹಾಗೂ 64 GB ಆಂತರಿಕ ಸಂಗ್ರಹಣೆಯನ್ನು ಹೊಂದಿದೆ. ಅಲ್ಲದೇ ಇವೆರಡು ಫೋನ್‌ಗಳ ಸಂಗ್ರಹಣೆಯನ್ನು 256 GB ವರೆಗೆ ವಿಸ್ತರಿಸಬಹುದಾಗಿದೆ.

ಈ ಮೊಬೈಲ್‌ನ ಮುಂಬದಿಯ ಕ್ಯಾಮರಾವು 8 ಮೆಗಾಫಿಕ್ಸೆಲ್‌ ಆಗಿದ್ದು, ಹಿಂಬದಿಯಲ್ಲಿ 16 ಮೆಗಾಫಿಕ್ಸೆಲ್ ಕ್ಯಾಮರಾವನ್ನು ಅಳವಡಿಸಲಾಗಿದೆ. ಈ ಮೂಲಕ ಉತ್ತಮವಾದ ಫೋಟೋವನ್ನು ಕ್ಲಿಕ್ಕಿಸಲು ಈ ಫೋನ್ ನಿಮಗೆ ಸಹಾಯಕವಾಗಲಿದೆ. ಅದಲ್ಲದೇ ಹಿಂಬದಿಯಲ್ಲಿ ಫ್ಲಾಶ್ ಲೈಟ್ ಅನ್ನು ಇದು ಹೊಂದಿದ್ದು, ಹಿಂಬದಿ ಕ್ಯಾಮರಾದಲ್ಲಿ ಡ್ಯುಯಲ್ ಕ್ಯಾಮರಾ ಸಂವೇದಕವನ್ನು ನಾವು ಕಾಣಬಹುದಾಗಿದೆ ಮತ್ತು ಈ ಕ್ಯಾಮರಾಗಳ ಮೂಲಕ 1080P ನಲ್ಲಿ ವೀಡಿಯೊ ರೆಕಾರ್ಡಿಂಗ್‌ ಅನ್ನು ಕೂಡಾ ಮಾಡಬಹುದಾಗಿದೆ.

ಈ ಮೊಬೈಲ್‌ನಲ್ಲಿ 4100mAh ಬ್ಯಾಟರಿಯನ್ನು ಅಳವಡಿಸಲಾಗಿದೆ ಎನ್ನುವ ವದಂತಿಗಳು ಕೇಳಿಬರುತ್ತಿದ್ದು ಇದುವರೆಗೂ ಅದರ ಕುರಿತು ಮಾಹಿತಿ ಲಭ್ಯವಾಗಿಲ್ಲ. ಇದರಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಕೂಡಾ ಇದ್ದು, ವೈಫೈ, ಜಿಪಿಎಸ್, ಬ್ಲೂಟೂತ್ ಅನ್ನು ಇದು ಹೊಂದಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಪ್ರೊಕ್ಸಿಮಿಟಿ ಸೆನ್ಸಾರ್, ಅಕ್ಸೆಲೆರೊಮೀಟರ್ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸರ್ ಅನ್ನು ನಾವು ಇದರಲ್ಲಿ ನಿರೀಕ್ಷಿಸಬಹುದಾಗಿದೆ.

ಬೆಲೆಗಳ ಕುರಿತಾಗಿ ಹೇಳುವುದಾದರೆ ಶಿಯೋಮಿ ಮೊದಲಿನಿಂದಲೂ ತನ್ನ ಬೆಲೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ.ಮೂಲಗಳ ಪ್ರಕಾರ ಇದರ ಬೆಲೆಯು 15,400 ಇರಬಹುದು ಎಂದು ಅಂದಾಜಿಸಲಾಗಿದೆ. ಮುಂದಿನ ವಾರದಿಂದ ಆನ್‌ಲೈನ್‌ಗಳಲ್ಲಿ ಈ ಮೊಬೈಲ್ ಲಭ್ಯವಿದ್ದು ನಂತರದ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಲಭ್ಯವಾಗಲ್ಲಿ.

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

Published

on

ಸುದ್ದಿದಿನ,ಬೆಂಗಳೂರು:ಆರ್‌ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ ರೆಸ್ಟೋರೆಂಟ್‌ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.

ಬೆಂಗಳೂರಿನ #NativeCooks ಫುಡ್‌ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

ಹೌದು, ಹೆಬ್ಬಾಳ, ಆರ್‌ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್‌ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್‌ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್‌ಬಾಕ್ಸ್‌ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.

ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್‌ ಕುಕ್ಸ್‌ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್‌ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್.‌ ವೆಜ್‌ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್‌ವೆಜ್‌ ಊಟವನ್ನು 135 ರೂಪಾಯಿಗೆ ಹಾಗೂ ಎಕ್‌ ಮೀಲ್‌ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.

ಸದ್ಯಕ್ಕೆ ಹೆಬ್ಬಾಳ, ಆರ್‌ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending