ದಿನದ ಸುದ್ದಿ
ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಸ್ಥಾಪನೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ : ಸಚಿವ ಡಾ. ಕೆ. ಸುಧಾಕರ್
ಸುದ್ದಿದಿನ, ಚಿಕ್ಕಮಗಳೂರು : ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಸ್ಥಾಪನೆಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಕೆ.ಸುಧಾಕರ್ ಚಿಕ್ಕಮಗಳೂರಿನಲ್ಲಿ ಬೃಹತ್ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ವಿಷಯ ತಿಳಿಸಿದರು.
ದೇಶದ್ಯಾಂತ 8 ಸಾವಿರದ 400ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಸ್ಥಾಪನೆಯಾಗಿವೆ. ಇದರಲ್ಲಿ ಕರ್ನಾಟಕದಲ್ಲಿ952 ಮಳಿಗೆಗಳು ಕಾರ್ಯಾರಂಭ ಮಾಡಿವೆ ಎಂದರು.
ಕೇಂದ್ರದಲ್ಲಿ ಆಯುಷ್ಮಾನ್ ಯೋಜನೆಯಡಿ ಎಲ್ಲರಿಗೂ ಆರೋಗ್ಯ ನೀಡುವ ದೃಷ್ಟಿಯಿಂದ ಆಯುಷ್ಮಾನ್ ಕಾರ್ಡ್‌ಗಳನ್ನು ಜಾರಿಗೊಳಿಸಿದ್ದಾರೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಸಿ.ಟಿ. ರವಿ, ಎಂ.ಪಿ.ಕುಮಾರ್‌ಸ್ವಾಮಿ, ಎಸ್.ಎಲ್. ಬೋಜೇಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಇದಕ್ಕೂ ಮುನ್ನ 300 ಕ್ಕೂ ಹೆಚ್ಚು ದಿವ್ಯಾಂಗರಿಗೆ ಉಚಿತ ಬೈಸಿಕಲ್ ವಿತರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243