ದಿನದ ಸುದ್ದಿ
ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಸ್ತು
ಸುದ್ದಿದಿನ, ನವದೆಹಲಿ : ಎಸ್ಸಿ,ಎಸ್ಟಿ ಬಡ್ತಿ ಮೀಸಲಾತಿ ಕಾಯ್ದೆಯನ್ನು ಸುಪ್ರೀಂ ಕೊರ್ಟ್ ದ್ವಿ ಸದಸ್ಯ ಪೀಠ ಎತ್ತಿಹಿಡಿದಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಸೇವೆಯಲ್ಲಿರುವ ಎಸ್ಸಿ ಎಸ್ಟಿ ಅಧಿಕಾರಿಗಳಿಗೆ ಮಿಸಲಾತಿ ಆಧಾರದಲ್ಲಿ ಬಡ್ತಿ ನೀಡಬೇಕೆಂಬ ಹೊಸ ಕಾಯ್ದೆಯನ್ನು ಹೊರಡಿಸಿದ್ದರು. ಆದರೆ, ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಎಂಬುವವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಬಡ್ತಿ ಮೀಸಲಾತಿ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ಪರಿಣಾಮ ರಾಜ್ಯ ಸರ್ಕಾರ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಬಿ.ಕೆ. ಪವಿತ್ರ ಅವರಿಗೆ ಹಿನ್ನಡೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬಿ.ಕೆ. ಪವಿತ್ರ ತಿಳಿಸಿದ್ದಾರೆ.