ದಿನದ ಸುದ್ದಿ
ಧಾರ್ಮಿಕ ಸ್ಥಳಗಳಲ್ಲಿ ಲೌಡ್ಸ್ಪೀಕರ್ ಬಳಕೆ ; ಶೀಘ್ರದಲ್ಲೇ ಮಾರ್ಗಸೂಚಿ
ಸುದ್ದಿದಿನ ಡೆಸ್ಕ್ : ಧಾರ್ಮಿಕ ಸ್ಥಳಗಳಲ್ಲಿ ಲೌಡ್ಸ್ಪೀಕರ್ ಬಳಕೆ ಕುರಿತಂತೆ ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸುವ ನಿರೀಕ್ಷೆ ಇದೆ.
ಮುಂಬೈನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ದಿಲೀಪ್ ವಲ್ಸೆಪಾಟೀಲ್, ಈ ಸಂಬಂಧ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಂಬೈ ಪೊಲೀಸ್ ಆಯುಕ್ತರು ಸಮಾಲೋಚನೆ ನಡೆಸುತ್ತಿದ್ದು, ಮಾರ್ಗಸೂಚಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಮುಂದಿನ ಕೆಲವೇ ದಿನಗಳಲ್ಲಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.
ಇತ್ತೀಚೆಗೆ ಮಹಾರಾಷ್ಟ್ರ ನವನಿರ್ಮಾಣ್ ಸೇನೆಯ ಮುಖ್ಯಸ್ಥ ರಾಜ್ಠಾಕ್ರೆ ಅವರು ಮಸೀದಿಗಳ ಮುಂದೆ ಲೌಡ್ಸ್ಪೀಕರ್ ತೆರವುಗೊಳಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243