ದಿನದ ಸುದ್ದಿ

ಗರ್ಭಿಣಿಯನ್ನು 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು

Published

on

ಸುದ್ದಿದಿನ,ಚಾಮರಾಜನಗರ: ಗರ್ಭಿಣಿ ಮಹಿಳೆಗೆ ಹೆರಿಗೆ ಕಾಣಿಸಿಕೊಂಡಿದ್ದರಿಂದ 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ.

ಶಾಂತಲಾ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಸಿಗದೇ ಇರುವುದರಿಂದ 8 ಕಿಮೀ ದೂರದ ಮಾರ್ಟಳ್ಳಿ ಆಸ್ಪತ್ರೆಗೆ ಡೋಲಿ ಕಟ್ಟಿ ಸಾಗಿಸಲಾಗಿದ್ದು, ಸದ್ಯ ಶಾಂತಲಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಅರಣ್ಯ ಇಲಾಖೆ ಗ್ರಾಮಸ್ಥರ ಅನುಕೂಲಕ್ಕಾಗಿ ಜನವನ ಸಾರಿಗೆ ವ್ಯವಸ್ಥೆ ಜಾರಿಗೆ ತಂದಿದೆ. ಗರ್ಭಿರ್ಣಿಯರು, ಅನಾರೋಗ್ಯ ಪೀಡಿತರು, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರ ತುರ್ತು ಬಳಕೆಗೆ ಜಾರಿಗೆ ತಂದಿರುವ ಜನವನ ಸಾರಿಗೆ ಸೌಲಭ್ಯ ಇದ್ದೂ ಇಲ್ಲದಂತಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version