Connect with us

ದಿನದ ಸುದ್ದಿ

ಭಾರತದ ಯುವಕರತ್ತ ಇಡೀ ವಿಶ್ವದ ಚಿತ್ತ : ಪ್ರಧಾನಮಂತ್ರಿ ನರೇಂದ್ರ ಮೋದಿ

Published

on

ಸುದ್ದಿದಿನ ಡೆಸ್ಕ್ : ಭಾರತದ ಯುವಕರನ್ನು ಇಡೀ ವಿಶ್ವ ಭರವಸೆಯ ಕಣ್ಣುಗಳಿಂದ ಎದುರು ನೋಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ  ( Prime minister Narendra modi)  ಹೇಳಿದ್ದಾರೆ.

ದೇಶದ ಯುವಕರು ಬೆಳವಣಿಗೆಯ ಇಂಜಿನ್‌ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾರತ, ವಿಶ್ವದ ಇಂಜಿನ್ ಕೂಡ ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡಿನ ಚೆನ್ನೈ  ( Chennai ) ನಲ್ಲಿ ಆಯೋಜಿಸಿದ್ದ ಅಣ್ಣಾ ವಿಶ್ವವಿದ್ಯಾಲಯದ 42ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುವಜನರ ಬಗ್ಗೆ ಸ್ವಾಮಿ ವಿವೇಕಾನಂದ ಅವರು ಆಡಿದ್ದ ಮಾತುಗಳನ್ನು ಇದೇ ಸಂದರ್ಭದಲ್ಲಿ ಮೆಲುಕು ಹಾಕಿದರು.

ಅಣ್ಣಾ ವಿಶ್ವವಿದ್ಯಾಲಯ ಮತ್ತು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಒಡನಾಟವನ್ನೂ ಪ್ರಧಾನಮಂತ್ರಿಗಳು ಇದೇ ಸಂದರ್ಭದಲ್ಲಿ ಸ್ಮರಿಸಿದ್ದಾರೆ.

ಕೋವಿಡ್-19 ಸೋಂಕು ಯಾರೂ ಊಹಿಸಲಾಗದಂತಹ ಘಟನೆ, ಶತಮಾನಕ್ಕೆ ಒಮ್ಮೆ ಎದುರಾಗಬಹುದಾದ ಸಾಂಕ್ರಾಮಿಕ ರೋಗ ಈ ಬಾರಿ ಕೋವಿಡ್ ಸೋಂಕಿನ ರೂಪದಲ್ಲಿ ಕಾಣಿಸಿಕೊಂಡಿದೆ. ಇದನ್ನು ಎದುರಿಸಲು ದೇಶ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ವಿಶೇಷವಾಗಿ ವಿಜ್ಞಾನಿಗಳು, ಆರೋಗ್ಯ ಕ್ಷೇತ್ರದ ವೃತ್ತಿಪರರು, ಸಾಮಾನ್ಯ ಜನರನ್ನು ಮುಕ್ತ ಕಂಠದಿಂದ ಶ್ಲಾಘಿಸುವುದಾಗಿ ಅವರು ಹೇಳಿದರು. ಕೋವಿಡ್ ಸೋಂಕು ನಂತರ ದೇಶದ ಪ್ರತಿಯೊಂದು ವಲಯವೂ ಕೂಡ ಹೊಸದಾಗಿ ಆರಂಭವಾಗುವಂತಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಎಸ್.ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕಳೆದ ಹಣಕಾಸು ವರ್ಷದಲ್ಲಿ ದಾಖಲೆಯ ಮೊತ್ತದ 83 ಶತಕೋಟಿ ಡಾಲರ್ ವಿದೇಶಿ ನೇರ ಬಂಡವಾಳ ಹೂಡಿಕೆ ದೇಶಕ್ಕೆ ಹರಿದುಬಂದಿದೆ. ಇದೇ ವೇಳೆ ದೇಶದಲ್ಲಿ ನವೋದ್ಯಮಗಳು ಕೂಡ ಸಾಕಷ್ಟು ಸಂಖ್ಯೆಯಲ್ಲಿ ತಲೆ ಎತ್ತಿವೆ, ಬಲಿಷ್ಠ ಸರ್ಕಾರ ಎಲ್ಲವನ್ನೂ ಮತ್ತು ಎಲ್ಲರನ್ನು ನಿಯಂತ್ರಿಸುತ್ತಿದೆ ಎಂದು ಹೇಳಿದರು.

ಇಂಟರ್ ನ್ಯಾಷನಲ್ ಬುಲಿಯನ್ ಎಕ್ಸ್‌ಚೇಂಜ್‌ಗೆ ಚಾಲನೆ

ಗುಜರಾತ್‌ನ ಗಾಂಧಿನಗರದಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಮೊಟ್ಟ ಮೊದಲ ಇಂಟರ್ ನ್ಯಾಷನಲ್ ಬುಲಿಯನ್ ಎಕ್ಸ್‌ಚೇಂಜ್‌ಗೆ ಚಾಲನೆ ನೀಡಿದರು. ಇದೇ ವೇಳೆ ಎನ್‌ಎಸ್‌ಸಿ-ಐಎಫ್‌ಎಸ್‌ಸಿ-ಎಸ್‌ಜಿಎಕ್ಸ್‌ಗೂ ಕೂಡ ಚಾಲನೆ ನೀಡಿದರು.

ಅಂತಾರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರ ಪ್ರಾಧಿಕಾರದ ಕೇಂದ್ರ ಕಚೇರಿಗೆ ಗಿಫ್ಟ್ ಸಿಟಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಹೊಸ ಅವಕಾಶ ಸೃಷ್ಟಿ ಮಾಡುವ ಜತೆಗೆ ಹಣಕಾಸು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಮನ್ವಂತರ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಅಮೆರಿಕ, ಇಂಗ್ಲೆಂಡ್, ಸಿಂಗಾಪುರ ಸೇರಿದಂತೆ ಅನೇಕ ಜಾಗತಿಕ ಹಣಕಾಸು ಸಂಸ್ಥೆಗಳನ್ನು ಬೆಸೆಯಲು ಕೂಡ ಸಹಕಾರಿಯಾಗಲಿವೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending