Connect with us

ದಿನದ ಸುದ್ದಿ

ಜ.30 ರಂದು ದಾವಣಗೆರೆ ವಿವಿ ಯಲ್ಲಿ ರಂಗ ವಿಮರ್ಶಾ ಕಮ್ಮಟ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಆಸಕ್ತ ಬರಹಗಾರರಿಗಾಗಿ ರಂಗ ವಿಮರ್ಶಾ ಕಮ್ಮಟವನ್ನು ಜ.30 ರಂದು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ, ಜಿಲ್ಲಾ ವರದಿಗಾರರ ಕೂಟ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಜ.30 ರ ಬೆಳಿಗ್ಗೆ 10.30 ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ.ಬಿ.ಎ ಸಭಾಂಗಣದಲ್ಲಿ ರಂಗ ವಿಮರ್ಶಾ ಕಮ್ಮಟವನ್ನು ಏರ್ಪಡಿಸಲಾಗಿದೆ.

ಬೆಳಿಗ್ಗೆ 10.30 ಕ್ಕೆ ಒಂದನೇ ಗೋಷ್ಟಿಯಲ್ಲಿ ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯ ಹಾದಿ ವಿಷಯ ಕುರಿತು ರಂಗತಜ್ಞರು, ಸಿನೆಮಾ ನಿರ್ದೇಶಕರು ಹಾಗೂ ರಂಗ ವಿಮರ್ಶಾ ಕಮ್ಮಟದ ನಿರ್ದೇಶಕರಾದ ಬಿ.ಸುರೇಶ್ ವಿಷಯ ಮಂಡನೆ ಮಾಡುವರು. ಹಿರಿಯ ಸಾಹಿತಿಗಳು ಮತ್ತು ದಾವಣಗೆರೆ ನಗರವಾಣಿ ಪತ್ರಿಕೆಯ ಸಹ ಸಂಪಾದಕರಾದ ಬಿ.ಎನ್.ಮಲ್ಲೇಶ್, ಟಿವಿ9 ಜಿಲ್ಲಾ ವರದಿಗಾರರಾದ ಬಸವರಾಜ ದೊಡ್ಡಮನಿ, ಸಂಯುಕ್ತ ಕರ್ನಾಟಕ ದಾವಣಗೆರೆ ಬ್ಯೂರೋ ಮುಖ್ಯಸ್ಥರಾದ ಮಂಜುನಾಥ ಗೌರಕ್ಕಳವರ್, ವಿಜಯ ಕರ್ನಾಟಕ ಉಪ ಸಂಪಾದಕ ಯಳನಾಡು ಮಂಜುನಾಥ, ರಂಗವೈಭವದ ಉಪಸಂಪಾದಕ ಬಸವರಾಜ್ ಐರಣಿ, ಆ.ವಿ.ಎವಿಕೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅನುರಾಧ ಬಕ್ಕಪ್ಪ ಸಂವಾದದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 12.30 ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಸ್.ವಿ.ಹಲಸೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಪ್ರೊ.ಭೀಮಸೇನ.ಆರ್ ಅಧ್ಯಕ್ಷತೆ ವಹಿಸುವರು. ರಂಗತಜ್ಞರು ಹಾಗೂ ಸಿನೆಮಾ ನಿರ್ದೇಶಕರಾದ ಬಿ.ಸುರೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ಜಿ.ಎಂ.ಆರ್.ಆರಾಧ್ಯ, ವಾರ್ತಾಧಿಕಾರಿ ಅಶೋಕಕುಮಾರ್.ಡಿ, ರಂಗಸಮಾಜದ ಸದಸ್ಯರಾದ ಪ್ರಭುದೇವ ಕಪ್ಪಗಲ್ಲು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಮಧ್ಯಾಹ್ನ 2.30 ಕ್ಕೆ ಎರಡನೇ ಗೋಷ್ಟಿಯಲ್ಲಿ ನೀನಾಸಮ್ ತಿರುಗಾಟ 2018 ಇವರಿಂದ ಆಶ್ಚರ್ಯ ಚೂಡಾಮಣಿ ನಾಟಕದ ವಿಡಿಯೋ ಪ್ರದರ್ಶನವಿರುತ್ತದೆ. ಹಾಗೂ ಪ್ರದರ್ಶನದ ದೃಶ್ಯ ಭಾಷೆ ಮತ್ತು ಮೌಲ್ಯ ನಿಗದಿಪಡಿಸುವ ಬಗೆ ಕುರಿತು ರಂಗತಜ್ಞರು, ಸಿನೆಮಾ ನಿರ್ದೇಶಕರು ಹಾಗೂ ರಂಗ ವಿಮರ್ಶಾ ಕಮ್ಮಟದ ನಿರ್ದೇಶಕರಾದ ಬಿ.ಸುರೇಶ್ ವಿಷಯ ಮಂಡನೆ ಮಾಡುವರು. ಪ್ರಜಾವಾಣಿ ಬ್ಯೂರೋ ಮುಖ್ಯಸ್ಥ ವಿಶಾಖ.ಎನ್, , ಕನ್ನಡಪ್ರಭ ಪತ್ರಿಕೆಯ ಜಿಲ್ಲಾ ಪ್ರಧಾನ ವರದಿಗಾರ ನಾಗರಾಜ್ ಬಡದಾಳ್, ಏಷಿಯಾನೆಟ್ ಸುರ್ವಣ 24*7 ಜಿಲ್ಲಾ ವರದಿಗಾರ ಡಾ.ವರದರಾಜ್, ದಾವಿವಿ ಸ್ನಾತಕೋತ್ತರ ಕೇಂದ್ರದ ಸಂಯೋಜನಾಧಿಕಾರಿ ವಿಶ್ವನಾಥ್.ಹೆಚ್, ಕಥೆಗಾರ್ತಿ ಬಿ.ಟಿ.ಜಾಹ್ನವಿ, ರಂಗಕರ್ಮಿ ಸಿದ್ದರಾಜ.ಎಸ್.ಎಸ್ ಸಂವಾದದಲ್ಲಿ ಪಾಲ್ಗೊಳ್ಳುವರು.

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭವಿದ್ದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಬಸವರಾಜ ಬಣಕಾರ ಸಮಾರೋಪ ನುಡಿ ನುಡಿವರು. ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಪ್ರೊ.ಭೀಮಸೇನ.ಆರ್ ಅಧ್ಯಕ್ಷತೆ ವಹಿಸುವರು. ಲೇಖಕರು-ಹಿರಿಯ ಪತ್ರಕರ್ತರಾದ ಬಾ.ಮ.ಬಸವರಾಜಯ್ಯ ಪ್ರಮಾಣ ಪತ್ರ ವಿತರಣೆ ಮಾಡುವರು. ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮಿ ಹಿರೇಮಠ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವೀರಪ್ಪ ಎಂ.ಭಾವಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending