ಸಿನಿ ಸುದ್ದಿ
ಸಾಯಿಪಲ್ಲವಿಯಿಂದ ಮಾಧ್ಯಮದವರು ಕಲಿಯಿವುದು ಸಾಕಷ್ಟಿದೆ : ನಟ ಕಿಶೋರ್ ಕುಮಾರ್ ಕಿಡಿ
ನಟಿ ಸಾಯಿಪಲ್ಲವಿ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಯ ಪರ- ವಿರೋಧದ ಚರ್ಚೆಯ ನಡುವೆ, ನಿನ್ನೆ ನಟಿ ಸ್ಪಷ್ಟನೆ ನೀಡಿದ್ದರು. ಪಬ್ಲಿಕ್ ಟಿವಿಯ ರಂಗನಾಥ್ ಕಾಮನ್ ಸೆನ್ಸ್ ಇಲ್ಲದ ಚರ್ಚೆ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ರೈಲು ರಂಗ ಎಂದೇ ಸಖತ್ ಟ್ರೋಲ್ ಕೂಡ ಆಗಿದ್ದರು. ಈ ಹಿನ್ನೆಲೆಯಲ್ಲಿ ನಟ ಕಿಶೋರ್ ಕುಮಾರ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಸುದ್ದಿದಿನ ಡೆಸ್ಕ್: ಬಾಯಿ ಮುಚ್ಚಿಸುವುದು ಸರ್ಕಾರದ ಕೆಲಸವಲ್ಲವೇ ಮಾಧ್ಯಮಗಳು ಯಾವಾಗಿಂದ ಈ ಕೆಲಸಕ್ಕೂ ಗುತ್ತಿಗೆ ಪಡೆದವು? ಸಿನಿಮಾದವರಿಗೆ ಜನಪರ ಕಾಳಜಿ ಇರುವುದು ತಪ್ಪೇ? ಎಂದು ನಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರಣ ಏನೇ ಆದರೂ ಕೊಲೆ ಮಾಡುವ ಮನಸ್ಥಿತಿ ಒಂದೇ ಹಾಗೂ ಅದು ತಪ್ಪು ಎಂದರೆ ತಪ್ಪೇ? ನಮ್ಮಲ್ಲಿನ ಅಲ್ಪಸಂಖ್ಯಾತರನ್ನು ನಾವು ಹೇಗೆ ಸಮಾನರಾಗಿ ಬದುಕಲು ಬಿಡುತ್ತೇವೆನ್ನುವುದು ನಮ್ಮ ಸಮಾಜದ ಸ್ವಾಸ್ಥ್ಯದ, ಸಭ್ಯತೆಯ ಅಳತೆಗೋಲು ಎನ್ನುವುದು ತಪ್ಪೇ? ಜೀವಕ್ಕೆ ಜಾತಿ ಧರ್ಮಗಳ ಹಂಗಿಲ್ಲವೆಂದರೆ ತಪ್ಪೇ? ಎಂದಿದ್ದಾರೆ.
ಒಬ್ಬರ ಆಹಾರಕ್ರಮದ ಮೇಲೆ ನಿಷೇಧ ಹೇರಿ ಆಹಾರವನ್ನೂ ದ್ವೇಷದ ಸಾಧನವಾಗಿ ಬಳಸಬಾರದೆಂದರೆ ತಪ್ಪೇ? ಮಾನವೀಯತೆಯ ನಿಲುವಿನ ಸಾಯಿಪಲ್ಲವಿಯಿಂದ ಈ ಮಾಧ್ಯಮದವರು ಕಲಿಯಿವುದು ಸಾಕಷ್ಟಿದೆ . ಸಾಮಾಜಿಕ ಬದ್ಧತೆಯನ್ನು ಧರ್ಮಾಂಧತೆಯ ಕನ್ನಡಿಯಲ್ಲಿ ನೋಡುವ ಮಾಧ್ಯಮ ಗೋಕಾಕ್ ಚಳುವಳಿಯ ಕಾಲದಲ್ಲಿದ್ದಿದ್ದರೆ ರಾಜಕುಮಾರ್ ರವರ ಬಾಯನ್ನೂ ಮುಚ್ಚಿಸುತ್ತಿತ್ತೇನೊ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ನಟ ಕಿಶೋರ್ ಅಭಿಪ್ರಾಯ : ಇಲ್ಲಿ ಕ್ಲಿಕ್ ಮಾಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243