ದಿನದ ಸುದ್ದಿ
8ನೇ ವೇತನ ಆಯೋಗ ರಚಿಸುವ ಯಾವುದೇ ಪ್ರಸ್ತಾವನೆ ಇಲ್ಲ
ಸುದ್ದಿದಿನಡೆಸ್ಕ್:ಸರ್ಕಾರಿ ನೌಕರರ ವೇತನ ಹಾಗೂ ಪಿಂಚಣಿ ಪರಿಷ್ಕರಣೆಗಾಗಿ 8ನೇ ಕೇಂದ್ರ ವೇತನ ಆಯೋಗ ರಚಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.
ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, 2024ರ ಜೂನ್‌ನಲ್ಲಿ ೮ನೇ ವೇತನ ಆಯೋಗದ ಕುರಿತಂತೆ ಎರಡು ಮನವಿಗಳನ್ನು ಸ್ವೀಕರಿಸಲಾಗಿದೆ. ಆದರೆ ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಡುವೆ, ಕೇಂದ್ರ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಹಳೆಯ ಪಿಂಚಣಿ ಯೋಜನೆಯನ್ನು ಪುನರಾರಂಭಗೊಳಿಸುವ ಯಾವುದೇ ಪ್ರಸ್ತಾವನೆ ಪರಿಶೀಲನೆಯಲ್ಲಿ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಸಂಸದೆ ಪ್ರಣಿತಿ ಸುಶಿಲ್ ಕುಮಾರ್ ಶಿಂಧೆ ಕೇಳಿದ ಪ್ರಶ್ನೆಗೆ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಉತ್ತರಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243