Connect with us

ರಾಜಕೀಯ

ಆರ್ ಎಸ್ ಎಸ್ ಸಮಾವೇಶಕ್ಕೆ ರಾಹುಲ್ ಗಾಂಧಿ ತೆರಳುವ ಮಾತೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Published

on

mallikarjun kharge_suddidina

ಸುದ್ದಿದಿನ ಡೆಸ್ಕ್: ಆರ್ ಎಸ್ ಎಸ್ ಸಮಾವೇಶಕ್ಕೆ ರಾಹುಲ್ ಗಾಂಧಿ ತೆರಳುವ ಮಾತೆ ಇಲ್ಲ ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ, ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮೂರು ದಿನಗಳ ಕಾಲ ಆಯೋಜಿಸಿರುವ ರಾಷ್ಟ್ರಮಟ್ಟದ ಸಮಾವೇಶಕ್ಕೆ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಸಿಪಿಎಂ ಪಕ್ಷದ ಸೀತಾರಾಮ್ ಯಚೂರಿ ಸೇರಿದಂತೆ ಹಲವು ನಾಯರಿಗೆ ಆಹ್ವಾನ ನೀಡಲಾಗಿದ್ದು, ಈ ಕುರಿತು ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಟಲ್ ಸಾವಿನ ವಿಚಾರದಲ್ಲಿ ಮೋದಿ ನಾಟಕ: ಖರ್ಗೆ

ಆರ್ ಎಸ್ ಎಸ್ ರಾಷ್ಟ್ರೀಯ ಸಮಾವೇಶಕ್ಕೆ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿರುವ ಕುರಿತು ಕೇವಲ ಮಾಧ್ಯಮಗಳಿಂದ ಗೊತ್ತಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಹ್ವಾನ ಬಂದರೂ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದಿನದ ಸುದ್ದಿ

ನಾಳೆಯಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ

Published

on

ಸುದ್ದಿದಿನಡೆಸ್ಕ್:18ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸಂಸತ್ ಸದಸ್ಯರ ಪ್ರಮಾಣ ವಚನ ನಡೆಯಲಿದೆ.

ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹ್ತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ 26 ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾಜ್ಯಸಭೆಯ ಅಧಿವೇಶನ ಇದೇ 27ರಂದು ಆರಂಭವಾಗಲಿದೆ. ಜುಲೈ 3 ರಂದು ಸಂಸತ್ ಅಧಿವೇಶನ ಮುಕ್ತಾಯವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Published

on

ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್‌ಡಿಎ ಸಂಸದರ ಸನ್ಮಾನದಲ್ಲಿ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ನೂತನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ ಎಂದು ಹೇಳಿದರು. ಜೆಡಿಎಸ್, ಬಿಜೆಪಿಯದ್ದು, ಸಹಜ ಮೈತ್ರಿಯಾಗಿದ್ದು, ಮುಂದಿನ ದಿನಗಳಲ್ಲಿ ನಡೆಯುವ ಪಾಲಿಕೆ ಚುನಾವಣೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು. ಬಿಜೆಪಿ, ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending