ರಾಜಕೀಯ
ಆರ್ ಎಸ್ ಎಸ್ ಸಮಾವೇಶಕ್ಕೆ ರಾಹುಲ್ ಗಾಂಧಿ ತೆರಳುವ ಮಾತೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ಸುದ್ದಿದಿನ ಡೆಸ್ಕ್: ಆರ್ ಎಸ್ ಎಸ್ ಸಮಾವೇಶಕ್ಕೆ ರಾಹುಲ್ ಗಾಂಧಿ ತೆರಳುವ ಮಾತೆ ಇಲ್ಲ ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ, ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮೂರು ದಿನಗಳ ಕಾಲ ಆಯೋಜಿಸಿರುವ ರಾಷ್ಟ್ರಮಟ್ಟದ ಸಮಾವೇಶಕ್ಕೆ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಸಿಪಿಎಂ ಪಕ್ಷದ ಸೀತಾರಾಮ್ ಯಚೂರಿ ಸೇರಿದಂತೆ ಹಲವು ನಾಯರಿಗೆ ಆಹ್ವಾನ ನೀಡಲಾಗಿದ್ದು, ಈ ಕುರಿತು ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅಟಲ್ ಸಾವಿನ ವಿಚಾರದಲ್ಲಿ ಮೋದಿ ನಾಟಕ: ಖರ್ಗೆ
ಆರ್ ಎಸ್ ಎಸ್ ರಾಷ್ಟ್ರೀಯ ಸಮಾವೇಶಕ್ಕೆ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿರುವ ಕುರಿತು ಕೇವಲ ಮಾಧ್ಯಮಗಳಿಂದ ಗೊತ್ತಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಹ್ವಾನ ಬಂದರೂ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.