ದಿನದ ಸುದ್ದಿ

ಹೊಸ ಇಂಜಿನಿಯರಿಂಗ್ ಕಾಲೇಜುಗಳನ್ನು ಆರಂಭಿಸುವ ಪ್ರಶ್ನೆಯೇ ಇಲ್ಲ : ಸಚಿವ ಅಶ್ವಥ್ ನಾರಾಯಣ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಅಸ್ತಿತ್ವದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳಿಗೆ ಸಾಕಷ್ಟು ಪ್ರವೇಶಗಳು ಸಿಗುತ್ತಿಲ್ಲ. ಹೀಗಿರುವಾಗ ಹೊಸ ಕಾಲೇಜುಗಳನ್ನು ಆರಂಭಿಸುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​ ನಾರಾಯಣ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತಾಡಿದ ಅವರು, ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥ್ ನಾರಾಯಣ್​ ಪ್ರಸ್ತುತ ಇರುವ ಕಾಲೇಜುಗಳಿಗೆ ಸಾಕಷ್ಟು ಪ್ರವೇಶ ಪಡೆಯದ ಕಾರಣ ಕರ್ನಾಟಕ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಕರ್ನಾಟಕವು 15 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಹೊಂದಿದೆ. ಈ ಶೈಕ್ಷಣಿಕ ವರ್ಷದಲ್ಲಿ, ಕರ್ನಾಟಕವು ಎಲ್ಲಾ ವರ್ಗದ ಕಾಲೇಜುಗಳಲ್ಲಿ 23,000 ಎಂಜಿನಿಯರಿಂಗ್ ಸೀಟುಗಳು ಖಾಲಿ ಉಳಿದಿವೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮಾನದಂಡಗಳ ಪ್ರಕಾರ ಸರ್ಕಾರವು ಅಸ್ತಿತ್ವದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಅವುಗಳನ್ನು ಬಲಪಡಿಸುತ್ತಿದೆ ಎಂದು ಅಶ್ವತ್ಥ್​ ನಾರಾಯಣ್​ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version