Connect with us

ದಿನದ ಸುದ್ದಿ

ವಸತಿ ಯೋಜನೆ ಫಲಾನುಭವಿಗಳಿಗೆ ಆರ್ಥಿಕ ನೆರವು ಹೆಚ್ಚಳಕ್ಕೆ ಚಿಂತನೆ : ಸಚಿವ ವಿ.ಸೋಮಣ್ಣ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಳಗಾವಿ : ಗ್ರಾಮೀಣ ಮತ್ತು ನಗರಪ್ರದೇಶಗಳಲ್ಲಿ ವಸತಿ ಯೋಜನೆ ಫಲಾನುಭವಿಗಳಿಗೆ ಆರ್ಥಿಕ ನೆರವು ಹೆಚ್ಚಳ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಯಲ್ಲಿಂದು ಹೇಳಿದರು.

ಪ್ರಶ್ನೋತ್ತರ ವೇಳೆಯಲ್ಲಿ ಅವರು, ಗ್ರಾಮೀಣ ಭಾಗಗಳಲ್ಲಿ ಮನೆ ನಿರ್ಮಾಣಕ್ಕೆ 3 ಲಕ್ಷ, ನಗರ ಪ್ರದೇಶಗಳಲ್ಲಿ5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

2019-20ರಲ್ಲಿ 3 ಲಕ್ಷದ 85 ಸಾವಿರ ಮನೆ ನಿರ್ಮಾಣಕ್ಕೆ 8 ಸಾವಿರದ 223 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಶಾಸಕರು ಆಯ್ಕೆ ಮಾಡಿದ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ

Published

on

ಸುದ್ದಿದಿನ,ಚನ್ನಗಿರಿ:ಇತ್ತೀಚಿಗೆ ತಾವರೆಕೆರೆಯಲ್ಲಿ ನಡೆದ ಘಟನೆ ಕಾನೂನು ಬಾಹಿರವಾಗಿದ್ದು, ಮುಖಂಡರುಗಳು ತಮ್ಮ ಗ್ರಾಮ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಯಾವುದೇ ಘಟನೆ ನಡೆದಿದ್ದರೆ ಕಾನೂನಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕೇ ವಿನಃ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ ನೀಡಿದರು.

ತಾವರೆಕೆರೆ ಗ್ರಾಮದಲ್ಲಿ ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಚಿತ್ರ ಹರಿದಾಡುತ್ತಿರುವ ವಿಚಾರವಾಗಿ ಚನ್ನಗಿರಿ ಪೊಲೀಸ್ ಠಾಣೆ ಹಾಗೂ ಸಂತೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಟೌನ್ ಹಾಗೂ ಗ್ರಾಮಗಳ ಮುಸ್ಲೀಂ ಮುಖಂಡರುಗಳನ್ನು ಉದ್ದೇಶಿಸಿ ಗುರುವಾರ (ಏ.7ರಂದು) ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಅವರು ಮಾತನಾಡಿದರು.

ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ 112 ಗೆ ಕರೆ ಮಾಡಿ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮದ ಬಗ್ಗೆ / ವ್ಯಕ್ತಿಗಳ ಬಗ್ಗೆ ಪ್ರಚೋಧನಕಾರಿ ಹೇಳಿಕೆಗಳಾಗಲಿ, ಭಾಷಣವನ್ನಾಗಲಿ ಪೋಸ್ಟ್ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ, ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾರು ಸಹಕಾರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಚನ್ನಗಿರಿ ಪೊಲೀಸ್ ಠಾಣೆ, ಪೊಲೀಸ್ ನಿರೀಕ್ಷಕರಾದ ಶ್ರೀ ರವೀಶ್, ಸಂತೇಬೆನ್ನೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಲಿಂಗನಗೌಡ ನೆಗಳೂರು ರವರು, ಸರ್ದಾರ್ ಅಹಮ್ಮದ್, ಪುರಸಭೆ ಸದಸ್ಯರಾದ ಗೌಸ್ ಪೀರ್, ತನ್ವೀರ್, ನಲ್ಲೂರು ತಾಲ್ಲೂಕು ಪಂಚಾಯ್ತಿಯ ಮಾಜಿ ಸದಸ್ಯರಾದ ಉಸ್ಮಾನ್ ಷರೀಪ್, ಚನ್ನಗಿರಿ ತಾಲ್ಲೂಕು ಮುಸ್ಲೀಂ ಸಮಾಜದ ಅಧ್ಯಕ್ಷ ಹೊನ್ನೆಬಾಗಿ ಜಬೀವುಲ್ಲಾ ಸೇರಿದಂತೆ ಚನ್ನಗಿರಿ/ಸಂತೇಬೆನ್ನೂರು ಠಾಣಾ ವ್ಯಾಪ್ತಿಯ ಚನ್ನಗಿರಿ ಟೌನ್, ಅಗರಬನ್ನಿಹಟ್ಟಿ, ನಲ್ಲೂರು, ಹೊನ್ನೇಬಾಗಿ, ತಾವರಕೆರೆ, ಸಂತೇಬೆನ್ನೂರು, ಕೆರೆಬಿಳಚಿ ಸೇರಿದಂತೆ ಇತರೆ ಗ್ರಾಮಗಳ ಮುಸ್ಲಿಂ ಮುಖಂಡರುಗಳು ಮತ್ತು ಮಸೀದಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಪ್ರವೇಶಕ್ಕಾಗಿ ಲಭ್ಯವಿರುತ್ತದೆ. ಮತ್ತು ಶೇ.50% ರಷ್ಟು ಹೆಣ್ಣು ಮಕ್ಕಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ಅಲ್ಪಸಂಖ್ಯಾತರ ಅಭ್ಯರ್ಥಿಗಳು ಮೇ.10 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhuservices.karnataka.gov.in/ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವೆಲ್‍ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು ಕೊಂಡಜ್ಜಿಯ ಪಬ್ಲಿಕ್ ಶಾಲೆಯಲ್ಲಿನ ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್ ಪದವಿ ಹೊಂದಿರಬೇಕು. ಕನಿಷ್ಠ 3 ವರ್ಷದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ರೊಳಗಾಗಿ ಇ-ಮೇಲ್ ppschooldvg@gmail.com ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9480803206, 9743936234 ನ್ನು ಸಂಪರ್ಕಿಸಲು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending