ದಿನದ ಸುದ್ದಿ
ವಸತಿ ಯೋಜನೆ ಫಲಾನುಭವಿಗಳಿಗೆ ಆರ್ಥಿಕ ನೆರವು ಹೆಚ್ಚಳಕ್ಕೆ ಚಿಂತನೆ : ಸಚಿವ ವಿ.ಸೋಮಣ್ಣ
ಸುದ್ದಿದಿನ, ಬೆಳಗಾವಿ : ಗ್ರಾಮೀಣ ಮತ್ತು ನಗರಪ್ರದೇಶಗಳಲ್ಲಿ ವಸತಿ ಯೋಜನೆ ಫಲಾನುಭವಿಗಳಿಗೆ ಆರ್ಥಿಕ ನೆರವು ಹೆಚ್ಚಳ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಯಲ್ಲಿಂದು ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಅವರು, ಗ್ರಾಮೀಣ ಭಾಗಗಳಲ್ಲಿ ಮನೆ ನಿರ್ಮಾಣಕ್ಕೆ 3 ಲಕ್ಷ, ನಗರ ಪ್ರದೇಶಗಳಲ್ಲಿ5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
2019-20ರಲ್ಲಿ 3 ಲಕ್ಷದ 85 ಸಾವಿರ ಮನೆ ನಿರ್ಮಾಣಕ್ಕೆ 8 ಸಾವಿರದ 223 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಶಾಸಕರು ಆಯ್ಕೆ ಮಾಡಿದ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243