ದಿನದ ಸುದ್ದಿ
ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ಚಿಂತನೆ : ಸಿಎಂ ಬೊಮ್ಮಾಯಿ
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜಧಾನಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ದೂರದೃಷ್ಟಿಯ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಅಭಿವೃದ್ಧಿ ಕಾಮಗಾರಿ ಅನುಷ್ಠಾನಗೊಳಿಸುವ ಮೂಲಕ ಬೆಂಗಳೂರಿನ ಸಂಪೂರ್ಣ ಚಿತ್ರಣವನ್ನು ಬದಲಾಯಿಸಲಾಗುವುದು ಎಂದರು. ಮಾಸ್ತಿ ಭವನದಲ್ಲಿ ಸಾಹಿತ್ಯಾತ್ಮಾಕ ಸಂಶೋಧನಾ ಕಾರ್ಯಗಳು ಆಗಬೇಕು ಎಂದ ಮುಖ್ಯಮಂತ್ರಿ, ಮಾಸ್ತಿ ಭವನ ನಿರ್ಮಾಣಕ್ಕೆ ಸರ್ಕಾರದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯ ಬಗ್ಗೆ ವರಿಷ್ಠ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ನವದೆಹಲಿಯಲ್ಲಿ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಲಾಗುವುದು. ಆ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯ ಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆ ಜರುಗಿತು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ @NiraniMurugesh, ವಸತಿ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ ಸಚಿವ @drashwathcn, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ
1/2 pic.twitter.com/L0acvrTu8D— CM of Karnataka (@CMofKarnataka) April 18, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243