ದಿನದ ಸುದ್ದಿ
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಸುದ್ದಿದಿನ, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಭವಿಷ್ಯದ ದೃಷ್ಟಿಯಿಂದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಯೋಜನೆ ರೂಪಿಸಬೇಕು. ಕೇವಲ 17 ಎಕರೆ ಜಾಗದಲ್ಲಿ ಕಾಲೇಜು ಸ್ಥಾಪನೆಯ ಯೋಜನೆ ಬದಲಿಗೆ, 65 ರಿಂದ 70 ಎಕರೆ ಜಾಗದಲ್ಲಿ ವಿಶಾಲ ಹಾಗೂ ಸುಸಜ್ಜಿತ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿಸ್ತತ ಯೋಜನಾ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮೆಡಿಕಲ್ ಕಾಲೇಜು ಆರಂಭಿಸಲು ಸೂಕ್ತ ಕಟ್ಟಡ ಹಾಗೂ ಸ್ಥಳ ನಿಗದಿ ಮಾಡುವ ಕುರಿತು ಇನ್ನೊಮ್ಮೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳ ಪರೀಶೀಲನೆ ನಡೆಸಿ ವಾರದಲ್ಲಿ ವರದಿ ನೀಡಬೇಕು.
ವೈದ್ಯಕೀಯ ಕಾಲೇಜು ಸ್ಥಾಪನೆಗೆ ಡಿಎಂಎಫ್ ಅಡಿ 200 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡುವ ಸಂಬಂಧ ಜಿಲ್ಲಾ ಸಚಿವರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ಜನಪ್ರತಿನಿಧಿಗಳ ಸಭೆ ಆಯೋಜಿಸುವಂತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಸಮುದಾಯ ಭವನ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು

ಸುದ್ದಿದಿನ,ದಾವಣಗೆರೆ:ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಿಇಟಿ ಪರೀಕ್ಷಾಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್ 16 ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏ.17 ರಂದು ಬೆಳಗ್ಗೆ 10.30 ರಿಂದ 11.50 ರ ವರೆಗೆ ಗಣಿತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಷಯಗಳು 60 ಅಂಕಗಳಿಗೆ ಸೀಮಿತವಾಗಿರುತ್ತದೆ. ದಾವಣಗೆರೆ ನಗರದಲ್ಲಿನ 28 ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟು 12875 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದಾರೆ.
ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಬೇಕು, ಜೊತೆಗೆ ಗಾಳಿ, ಬೆಳಕು ಸರಿಯಾಗಿರಬೇಕು. ಕೆಲವು ಕಾಲೇಜುಗಳಲ್ಲಿ ಶೌಚಾಲಯದ ಬಳಿ ಇರುವ ಕೊಠಡಿಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದರು.
ವಶ್ತ್ರಸಂಹಿತೆ
ಸಿಇಟಿ-2025 ಬರೆಯುವ ಪುರುಷ, ಮಹಿಳೆಯರು ವಸ್ತ್ರಸಂಹಿತೆ ಪರಿಪಾಲನೆ ಮಾಡಬೇಕು. ಪುರುಷ ಅಭ್ಯರ್ಥಿಗಳು; ಪರೀಕ್ಷಾ ದಿನದಂದು ಪೂರ್ಣತೋಳಿನ ಶರ್ಟ್‍ಗಳನ್ನು ಅನುಮತಿಸಲಾಗುವುದಿಲ್ಲ, ಅರ್ಧತೋಳಿನ ಶರ್ಟ್‍ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಸಾಧಾರಣ ಶರ್ಟ್, ಟೀ ಶರ್ಟ್ ಧರಿಸಬೇಕು. ಕುರ್ತಾ ಪೈಜಾನು, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಜೇಬುಗಳು ಇಲ್ಲದಿರುವ, ಕಮ್ಮಿಜೇಬಿಗಳಿರುವ ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಧರಿಸಬೇಕು. ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೆಟ್‍ಗಳು, ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಬಟ್ಟೆಗಳಿರಬಾರದು. ಪರೀಕ್ಷಾ ಕೊಠಡಿಯಲ್ಲಿ ಶೂಗಳು ನಿಷಿದ್ದವಾಗಿದ್ದು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗದ ಚಪ್ಪಲಿಗಳನ್ನು ಧರಿಸಬೇಕು. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರುಗಳು, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳು
ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳ ಧರಿಸುವುದು ನಿಷಿದ್ದ, ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ವಸ್ತ್ರ ಸಂಹಿತೆಯಂತೆ ಬಟ್ಟೆ ಧರಿಸಬೇಕು. ಹೀಲ್ಡ್ ಚಪ್ಪಲಿ, ಶೂಗಳನ್ನು ಧರಿಸಬಾರದು, ತೆಳುವಾದ ಅಡಿಪಾಯವಿರುವ ಚಪ್ಪಲಿ ಧರಿಸಬೇಕು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.
ಎಲೆಕ್ಟ್ರಾನಿಕ್ಸ್ ವಸ್ತುಗಳ ನಿಷೇಧ
ಡ್ರೆಸ್ ಕೋಡ್ ಜೊತೆಗೆ ಎಲೆಕ್ಟ್ರಾನಿಕ್ಸ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂಥ್, ಕೈ ಗಡಿಯಾರಗಳನ್ನು ಕೊಠಡಿಗೆ ತರುವಂತಿಲ್ಲ. ತಿನ್ನಬಹುದಾದ ವಸ್ತುಗಳನ್ನು ತರುವಂತಿಲ್ಲ, ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಅನುಮತಿ ಇಲ್ಲ, ಕೇಂದ್ರದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.
ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ ಹಾಗೂ ಮುಖಮುಚ್ಚುವಂತ ಮಾಸ್ಕ್ ಧರಿಸುವಂತಿಲ್ಲ.
ಅನುಮತಿಸಲಾದ ವಸ್ತುಗಳು
ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ಪರೀಕ್ಷಾ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
ಪರೀಕ್ಷಾ ಕೇಂದ್ರ ಪ್ರವೇಶ ಅವಧಿ
ಅಭ್ಯರ್ಥಿಗಳು ಕೇಂದ್ರದೊಳಗೆ ಕನಿಷ್ಠ ಮೊದಲ ಬೆಲ್ ಆಗುವ 2 ಗಂಟೆ ಮುಂಚಿತವಾಗಿ ಹಾಜರಿರಬೇಕು. ಕೇಂದ್ರದಲ್ಲಿ ಕೊಠಡಿ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಮುಖವನ್ನಾಧರಿಸಿ ಆಫ್ ಮೂಲಕ ಗುರುತು ಪತ್ತೆ ಮಾಡುವ ಕಾರ್ಯ ನಡೆಯಲಿದೆ. ಮತ್ತು ಎಲ್ಲಾ ಅಭ್ಯರ್ಥಿಗಳ ಸಂಪೂರ್ಣ ತಪಾಸಣೆ ನಡೆಯುವುದರಿಂದ ಮೊದಲ ಬೆಲೆ ಆಗುವ ಮುನ್ನ 2 ಗಂಟೆಗಳ ಕಾಲ ಮುಂಚಿತವಾಗಿ ಕೇಂದ್ರದಲ್ಲಿರಬೇಕು. ಬೆಳಗ್ಗೆ 10.20 ಕ್ಕೆ ಮತ್ತು ಮಧ್ಯಾಹ್ನ 2.20 ಕ್ಕೆ ಮೊದಲ ಬೆಲೆ ಆಗಲಿದೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ಎಲ್ಲಾ ಕಾಲೇಜಿನ ಪ್ರಾಂಶುಪಾಲರು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೊಂಕಣ ರೈಲ್ವೆ, ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ ಮತ್ತು ಭಾರತೀಯ ರೈಲ್ವೆ ವಿಲೀನ ಪ್ರಯತ್ನ ಪ್ರಗತಿಯಲ್ಲಿ

ಸುದ್ದಿದಿನಡೆಸ್ಕ್:ಕೊಂಕಣ ರೈಲ್ವೆ ಹಾಗೂ ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ – HMRDCL ಅನ್ನು ಭಾರತೀಯ ರೈಲ್ವೆ ಜೊತೆ ವಿಲೀನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಲೀನ ಪ್ರಕ್ರಿಯೆ ನಡೆದರೆ ಈ ಭಾಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ಸಾಗಿದೆ ಎಂದರು. ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿ ಹಾಗೂ ರೈಲು ಮಾರ್ಗ ಅಭಿವೃದ್ಧಿಗೆ ಸಂಬಂಧಿಸಿ ವಿಸೃತ ಕಾರ್ಯಸಾಧ್ಯತಾ ವರದಿ – ಡಿಪಿಆರ್ ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ.
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – ಎನ್‌ಎಚ್‌ಎಐ ಹಾಗೂ ಶಿರಾಡಿ ಘಾಟ್‌ನಲ್ಲಿ ಪ್ರತ್ಯೇಕ ರೈಲು ಮಾರ್ಗ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಕೂಡ ಡಿಪಿಆರ್ ಸಿದ್ಧಪಡಿಸಲು ಮುಂದಾಗಿದೆ ಎಂದು ಸಂಸದರು ತಿಳಿಸಿದರು.
ಎರಡು ಇಲಾಖೆಗಳು ಪ್ರತ್ಯೇಕವಾಗಿ ಡಿಪಿಆರ್ ಸಿದ್ಧಪಡಿಸಿದರೆ ಅನುಮೋದನೆಗೆ ಕಷ್ಟವಾಗುತ್ತದೆ. ಇದರ ಬದಲು ಎರಡು ಇಲಾಖೆಗಳು ಸೇರಿ ಒಂದೇ ಡಿಪಿಆರ್ ಸಿದ್ಧಪಡಿಸಬೇಕು. ಆಗ ಪರಿಸರ ಇಲಾಖೆಯ ನಿರಪೇಕ್ಷಣೆ ಪಡೆದುಕೊಳ್ಳಲು ಅನುಕೂಲವಾಗಲಿದೆ. ಅಲ್ಲದೆ ಇದರಿಂದ ಪರಿಸರ ಹಾನಿಯ ಪ್ರಮಾಣವನ್ನೂ ತಗ್ಗಿಸಲು ಸಾಧ್ಯವಾಗಲಿದೆ ಎನ್ನುವ ಅಭಿಪ್ರಾಯ ಕೇಳಿ ಬರುತ್ತಿದೆ. ಆದಾಗ್ಯೂ ಈ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಲಾಗಿದ್ದು, ಜಂಟಿ ಡಿಪಿಆರ್‌ನಿಂದ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸಂಸದ ಚೌಟ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಮೇ11 ರಂದು ಗ್ರಾಮ ಪಂಚಾಯತಿ ಚುನಾವಣೆ
-
ಅಂಕಣ4 days ago
ಕವಿತೆ | ಚಳಿಗಾಲದ ಎರಡು ಜೀವರಸಗಳು
-
ದಿನದ ಸುದ್ದಿ4 days ago
ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತದೊಂದಿಗೆ ‘ಉಮ್ಮೀದ್ -2024’ ಕಾಯ್ದೆಯಾಗಿ ಜಾರಿ
-
ದಿನದ ಸುದ್ದಿ4 days ago
ಕನಗೊಂಡನಹಳ್ಳಿಗೆ 24/7 ನೀರು ಪೂರೈಕೆ | ಮಿತವಾಗಿ ಬಳಸಿ, ಭವಿಷ್ಯಕ್ಕೆ ಉಳಿಸಿ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ4 days ago
ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ : ಅನುದಾನ ಬಿಡುಗಡೆಗೆ ಆರ್. ಅಶೋಕ್ ಒತ್ತಾಯ
-
ದಿನದ ಸುದ್ದಿ3 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ರಕ್ತದಾನ ಶಿಬಿರ’
-
ದಿನದ ಸುದ್ದಿ4 days ago
ಇಟ್ಟುಕೊಂಡವನ ಜೊತೆ ಸೇರಿ, ಕಟ್ಟಿಕೊಂಡನಿಗೆ ಚಟ್ಟಕಟ್ಟಿದ ನೀಲಮಣಿ ಅಂಡ್ ಗ್ಯಾಂಗ್
-
ದಿನದ ಸುದ್ದಿ3 days ago
ಹರಿಹರ | ಸಕಾರಾತ್ಮಕ ಚಿಂತನೆ ಉತ್ತಮ ಆರೋಗ್ಯದ ಮದ್ದು : ಪ್ರಾಂಶುಪಾಲ ಡಾ. ರಮೇಶ್ ಎಂ.ಎನ್