ದಿನದ ಸುದ್ದಿ
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ಸುದ್ದಿದಿನ, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಭವಿಷ್ಯದ ದೃಷ್ಟಿಯಿಂದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಯೋಜನೆ ರೂಪಿಸಬೇಕು. ಕೇವಲ 17 ಎಕರೆ ಜಾಗದಲ್ಲಿ ಕಾಲೇಜು ಸ್ಥಾಪನೆಯ ಯೋಜನೆ ಬದಲಿಗೆ, 65 ರಿಂದ 70 ಎಕರೆ ಜಾಗದಲ್ಲಿ ವಿಶಾಲ ಹಾಗೂ ಸುಸಜ್ಜಿತ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿಸ್ತತ ಯೋಜನಾ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮೆಡಿಕಲ್ ಕಾಲೇಜು ಆರಂಭಿಸಲು ಸೂಕ್ತ ಕಟ್ಟಡ ಹಾಗೂ ಸ್ಥಳ ನಿಗದಿ ಮಾಡುವ ಕುರಿತು ಇನ್ನೊಮ್ಮೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳ ಪರೀಶೀಲನೆ ನಡೆಸಿ ವಾರದಲ್ಲಿ ವರದಿ ನೀಡಬೇಕು.
ವೈದ್ಯಕೀಯ ಕಾಲೇಜು ಸ್ಥಾಪನೆಗೆ ಡಿಎಂಎಫ್ ಅಡಿ 200 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡುವ ಸಂಬಂಧ ಜಿಲ್ಲಾ ಸಚಿವರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ಜನಪ್ರತಿನಿಧಿಗಳ ಸಭೆ ಆಯೋಜಿಸುವಂತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243