ದಿನದ ಸುದ್ದಿ
ಕೇರಳದಲ್ಲಿ ದಲಿತರಿಂದ ಊಟ ನಿರಾಕರಿಸಿದ ‘ಸುದ್ದಿ ಸತ್ಯ’ : ಇದು ‘ಸುದ್ದಿದಿನ’ ರಿಯಾಲಿಟಿ ಚೆಕ್..!

ಸುದ್ದಿದಿನ ಡೆಸ್ಕ್ | ದಲಿತರ ಧ್ವನಿ ಅಡಗಿಸಲಾಗುತ್ತಿದೆ, ಮಾಧ್ಯಮಗಳು ದಲಿತರಿಗೆ ಅನ್ಯಾಯವಾದ ಸುದ್ದಿಗಳನ್ನು ಪ್ರಕಟಿಸುತ್ತಿಲ್ಲ ಎಂಬ ಒಂದು ಆರೋಪವಿದೆ. ಇದನ್ನು ದಿಟ್ಟವಾಗಿ ಎದುರಿಸಿದ ಸುದ್ದಿದಿನಕ್ಕೆ ತುಳಿತಕ್ಕೊಳಗಾದವರ ನೋವನ್ನು ಪ್ರಪಂಚಕ್ಕೆ ಮುಟ್ಟಿಸುವುದು ಹೇಗೆಂಬ ಆತಂಕ ಎದುರಾಗಿದೆ.
ಭಾನುವಾರ ಬೆಳ್ಳಂಬೆಳಗ್ಗೆ ಇಂಡಿಯಾ ಟುಡೆ ವೆಬ್ ಪೋರ್ಟಲ್ ಕೇರಳದ ಅಲಪ್ಪುಳ ಜಿಲ್ಲೆಯ ನಿರಾಶ್ರಿತರ ಕೇಂದ್ರದಲ್ಲಿ ದಲಿತರು ಮಾಡಿದ ಅಡುಗೆಯನ್ನು ಮೇಲ್ಜಾತಿಯವರು ತಿನ್ನುತ್ತಿಲ್ಲ. ಸವರ್ಣೀಯರು ಪ್ರತ್ಯೇಕ ಕ್ಯಾಂಪ್ ಮಾಡಿಕೊಂಡು ಪರಿಹಾರವಾಗಿ ಬಂದ ಅರ್ಧಕ್ಕೂ ಹೆಚ್ಚು ದಿನಸಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯನ್ನು ಭಾವಾನುವಾದ ಮಾಡಿ ಕನ್ನಡಿಗರಿಗೆ ತಲುಪಿಸಲಾಗಿತ್ತು.
ಈ ಸುದ್ದಿ ಬರೆದ ಕೆಲವೇ ನಿಮಿಷಗಳಲ್ಲಿ ಫೇಸ್‌ಬುಕ್ ಪೇಜ್‌ನಲ್ಲಿ ಶೇರ್ ಮಾಡಿದ್ದೆವು. ಹಾಗೆಯೇ ನಮ್ಮ ಪೋರ್ಟಲ್‌ನ ಸಿಬ್ಬಂದಿಯೂ ಅದನ್ನು ತಮ್ಮ ಖಾತೆಗಳ ಮೂಲಕ ಶೇರ್ ಮಾಡಿದ್ದರು. ಬರಹ ಹೆಸರಿನ ಖಾತೆಯಿಂದ ಗಂಟೆಗಳಲ್ಲಿ ಸಾವಿರಾರು ಮಂದಿ ತಲುಪಿದ ಪೋಸ್ಟ್ ವೈರಲ್ ಆಗಿತ್ತು. ಸದ್ಯ ಧಮನಿತರ ಧ್ವನಿ ಎಲ್ಲರಿಗೂ ತಲುಪಿತಲ್ಲ ಎಂದು ನಿರಾತಂಕವಾದೆವು. ಆದರೆ, ನಮ್ಮ ನಿರೀಕ್ಷೆ ಕೆಲವೇ ನಿಮಿಷಗಳಲ್ಲಿ ಸುಳ್ಳಾಯಿತು.
ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ದಲಿತ ವಿರೋಧಿಗಳು ಈ ಸುದ್ದಿಯನ್ನು ಫೇಕ್ ಎಂದು ಕಮೆಂಟ್ ಮಾಡಿದರು. ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟು ರಿಪೋರ್ಟ್ ಮಾಡಿದರು. ಪರಿಣಾಮವಾಗಿ ಈ ಖಾತೆಯು ಬ್ಲಾಕ್ ಆಯಿತು. ಅಷ್ಟಕ್ಕೂ ನಾವು ಬರೆದ ಸುದ್ದಿ ಸುಳ್ಳಾಗಿರಲಿಲ್ಲ. ಇಂಡಿಯಾ ಟುಡೆ ಪೋರ್ಟಲ್‌ನಲ್ಲಿ ಬಂದ ಇದೇ ಸುದ್ದಿಯು ಟೈಮ್ಸ್ ಆಫ್ ಇಂಡಿಯಾ ಕೂಡ ಅಪ್‌ಲೋಡ್ ಮಾಡಿತ್ತು.
ಈ ಎರಡೂ ಪೋರ್ಟಲ್‌ನಲ್ಲಿ ಬಂದ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಬರೆದಿದ್ದರೂ ನಾವೇ ಎಡವಿದೆವಾ ಎಂಬ ಅನುಮಾನದಿಂದ ಸುದ್ದಿಯನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆವು. ಇದಕ್ಕಾಗಿ ಕೇರಳದ ಅಲಪ್ಪುಳ ಜಿಲ್ಲೆಯ ಜಿಲ್ಲಾಧಿಕಾರಿ ಸುಹಾಸ್ ಅವರನ್ನು ಸುದ್ದಿದಿನ ತಂಡ ಸಂಪರ್ಕಿಸಿತು. ಈ ವಿಷಯವನ್ನು ಅವರು ಖಚಿತಪಡಿಸಿದರೂ, ಹೆಚ್ಚು ಹೈಲೈಟ್ ಮಾಡದಂತೆ ಸುಹಾಸ್ ಸಲಹೆ ನೀಡಿದರೆ. ನಾವು ಅದನ್ನು ಗೌರವಿಸುತ್ತೇವೆ. ಆದರೆ, ಪ್ರವಾಹದಂಥ ಭೀಕರ ಪರಿಸ್ಥಿತಿಯಲ್ಲೂ ದಲಿತರನ್ನು ತುಳಿಯುವ ಮನೋಭಾವನೆಗೆ ನಮ್ಮ ವಿರೋಧವಿದೆ. ಖಾತೆ ಬ್ಲಾಕ್ ಆದರೆ, ಅದನ್ನು ಮತ್ತೆ ಪಡೆಯಬಹುದು. ನಮ್ಮನ್ನು ಫೇಸ್‌ಬುಕ್‌ನಿಂದ ಹೊರಗೆ ತಳ್ಳಿ ಸತ್ಯವನ್ನು ಬಚ್ಚಿಡುವ ಯತ್ನಕ್ಕೆ ನಾವು ಹೆದರುವುದಿಲ್ಲ. ಸಮಾಜದ ಮೂರನೇ ವರ್ಗದವರಿಗೂ ಧನಿಯಾಗುವುದು ಪತ್ರಿಕೋದ್ಯಮದ ಮೂಲ ಉದ್ದೇಶ. ಅದಕ್ಕೆ ಸುದ್ದಿದಿನ ಸದಾ ಬೆಂಬಲಿಸುತ್ತದೆ.
-ಸುದ್ದಿದಿನ

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ4 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ