ಕ್ರೀಡೆ
ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿ : ಪುರುಷರ ಫೈನಲ್ ಪಂದ್ಯದಲ್ಲಿ ಭಾರತ – ಇಂಡೊನೇಷ್ಯಾ ಸೆಣಸು
ಸುದ್ದಿದಿನ ಡೆಸ್ಕ್ : ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಥಾಮಸ್ ಕಪ್ ಟೂರ್ನಿಯಲ್ಲಿ ಭಾರತ ಪುರುಷರ ಬ್ಯಾಡ್ಮಿಂಟನ್ ತಂಡ ಇದೇ ಪ್ರಥಮ ಬಾರಿಗೆ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ.
ಇಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತೀಯ ತಂಡ ಇಂಡೊನೇಷ್ಯಾ ವಿರುದ್ಧ ಸೆಣಸಲಿದೆ. ಭಾರತ ಈವರೆಗೆ ಗುಂಪು ಹಂತದಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಸೋಲುಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಡೆನ್ಮಾರ್ಕ್ ತಂಡವನ್ನು 3-2 ಅಂತರದಿಂದ ಸೋಲಿಸಿದ ಭಾರತ ತಂಡ ಇದೇ ಮೊದಲ ಬಾರಿಗೆ ಪ್ರಶಸ್ತಿ ಸುತ್ತು ತಲುಪಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243