ದಿನದ ಸುದ್ದಿ
ಥಾಮಸ್ ಕಪ್; ಮೊದಲ ಬಾರಿಗೆ ಫೈನಲ್ ಪ್ರವೇಶಿಸಿ, ಇತಿಹಾಸ ಸೃಷ್ಟಿಸಿದ ಭಾರತ ಬ್ಯಾಡ್ಮಿಂಟನ್ ತಂಡ

ಸುದ್ದಿದಿನ ಡೆಸ್ಕ್ : ಭಾರತ ಪುರುಷರ ಬ್ಯಾಡ್ಮಿಂಟನ್ ತಂಡ ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಥಾಮಸ್ ಕಪ್ ಟೂರ್ನಿಯಲ್ಲಿ ಮೊಟ್ಟ ಮೊದಲ ಬಾರಿಗೆ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ.
ಕಳೆದ ರಾತ್ರಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಡೆನ್ಮಾರ್ಕ್ ತಂಡವನ್ನು 3-2ರಲ್ಲಿ ಸೋಲಿಸಿದ ಭಾರತ ತಂಡ ಇದೇ ಮೊದಲ ಬಾರಿ ಫೈನಲ್ ತಲುಪಿತು. ಸೆಮಿಫೈನಲ್‌ನ ಐದನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಡೆನ್ಮಾರ್ಕ್ ನ ರಸ್ಮಸ್ ಗೆಮ್ಕೆ ವಿರುದ್ಧ 2-21,21-9, 21-12೨ಗೇಮ್ ಗಳಿಂದ ಎಚ್. ಎಸ್. ಪ್ರಣೋಯ್ ವೀರೋಚಿತ ಜಯ ಗಳಿಸಿ ಭಾರತ ತಂಡವನ್ನು ಪ್ರಶಸ್ತಿ ಸುತ್ತಿಗೆ ಕೊಂಡೊಯ್ದರು.
ಭಾರತ, ಚಿನ್ನದ ಪದಕಕ್ಕಾಗಿ ಭಾನುವಾರ ಇಂಡೊನೇಷ್ಯಾ ತಂಡದ ಸವಾಲು ಎದುರಿಸಲಿದೆ. ಇದಕ್ಕೂ ಮುನ್ನ ಭಾರತದ ಸ್ಟಾರ್ ಆಟಗಾರ ಕಿಡಂಬಿ ಶ್ರೀಕಾಂತ್ 20-18, 12-21,21-15 ಗೇಮ್ ಗಳಿಂದ ಆಂಡೆರ್ಸ್ ಆಂಡರ್ಸನ್ ವಿರುದ್ಧ ಜಯ ಗಳಿಸಿ ಭಾರತಕ್ಕೆ ಮುನ್ನಡೆ ತಂದುಕೊಟ್ಟರು.
ನಂತರ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ 21-18, 21-23, 22-20 ಗೇಮ್ ಗಳ ಅಂತರದಿಂದ ಕಿಮ್ ಆಸ್ಟ್ರಪ್ ಮತ್ತು ಮಥಾಯಿಸ್ ಕ್ರಿಸ್ಟಿಯಾನ್ಸೆನ್ ವಿರುದ್ಧ ರೋಚಕ ಜಯ ಗಳಿಸಿ ತಂಡದ ಮುನ್ನಡೆಯನ್ನು 2-0ಗೆ ವಿಸ್ತರಿಸಿದರು. ಆದರೆ, ಒಲಿಂಪಿಕ್ ಚಾಂಪಿಯನ್ ಅಕ್ಸೆಲ್ಸೆನ್ 21-13, 21-13 ನೇರ ಗೇಮ್ ಗಳಿಂದ ಭಾರತದ ಲಕ್ಷ್ಯ ಸೇನ್ ಅವರನ್ನು ಸೋಲಿಸಿ ಡೆನ್ಮಾರ್ಕ್ ತಂಡದ ಹಿನ್ನೆಡೆಯನ್ನು 1-2ಕ್ಕೆ ತಗ್ಗಿಸಿದರು.
ನಾಲ್ಕನೇ ಪಂದ್ಯದಲ್ಲಿ, ಆಂಡೆರ್ಸ್ ಸ್ಕಾರುಪ್ ರಸ್ಮಮ್ಸನ್ ಮತ್ತು ಫ್ರೆಡೆರಿಕ್ ಸೊಗಾರ್ಡ್ ಜೋಡಿ ಭಾರತದ ವಿಷ್ಣುವರ್ಧನ್ ಪಂಜಾಲಾ ಮತ್ತು ಕೃಷ್ಣ ಗರಗ್ ಜೋಡಿ ವಿರುದ್ಧ 21-14, 21-13ಗೇಮ್ ಗಳ ಅಂತರದಿಂದ ಗೆದ್ದು ತಂಡದ ಹೋರಾಟವನ್ನು 2-2ರಲ್ಲಿ ಸಮಬಲಗೊಳಿಸಿದರು.
🇮🇳 3-2 🇲🇾
Into the semis and how! 🤩
Indian men's team knock out Malaysia to make the semi-finals of the Thomas and Uber Cup after 4️⃣3️⃣ years! 😲
📸: @badmintonphoto#TUC2022 | #ThomasUberCups | #Bangkok2022 | @BAI_Media | @bwfmedia pic.twitter.com/Bwx75fjDVI
— Olympic Khel (@OlympicKhel) May 12, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ

ಸುದ್ದಿದಿನ,ಬೆಂಗಳೂರು:ಫೆ 10 ರಂದು ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸುವ ಬೃಹತ್ ಕಾರ್ಯ ಕ್ರಮವನ್ನು ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಉದ್ಘಾಟಿಸಿದರು.
ರಾಜ್ಯದ ನಾನಾ ಭಾಗಗಳಿಂದ ಸುಮಾರು 650 ಕ್ಕಿಂತ ಹೆಚ್ಚು ಕವಿಗಳು ಆಗಮಿಸಿ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸಿದರು,ಇದೇ ಸಂಧರ್ಭದಲ್ಲಿ ಅನೇಕ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ, ಮಾವಳ್ಳಿ ಶಂಕರ್,ಮಿಮಿಕ್ರಿ ಗೋಪಿ, ಜನಸಿರಿ ಫೌಂಡೇಶನ್ ಮುಖ್ಯಸ್ಥರಾದ ನಾಗಲೇಖ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುಂಬಿದ ಕೊಡ ತುಳುಕಿತಲೇ ಪರಾಕ್..!

- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
“ತುಂಬಿದ ಕೊಡ ತುಳುಕಿತಲೇ ಪರಾಕ್” ಎಂದು ಕಾರ್ಣಿಕ ನುಡಿದ ಗೊರವಯ್ಯ, ಅದು ಮೈಲಾರ ಕೋಟ್ಯಾಂತರ ಭಕ್ತರ ಆರಾಧ್ಯದೈವ ಮೈಲಾರ ಲಿಂಗನ ಪುಣ್ಯ ಕ್ಷೇತ್ರ. ಈ ಪುಣ್ಯ ಕ್ಷೇತ್ರ ಪ್ರತಿ ವರ್ಷ ಕಾರ್ಣಿಕ ನುಡಿಗೆ ರಾಜ್ಯಾದ್ಯಂತ ಫೇಮಸ್. ನುಡಿ ಆಲಿಸಲು ಲಕ್ಷಾಂತರ ಜನ್ರು ಅಲ್ಲಿಗೆ ಆಗಮಿಸ್ತಾರೆ. ಇನ್ನು 18 ಅಡಿ ಬಿಲ್ಲನ್ನ ಏರಿ ಕಾರ್ಣಿಕ ನುಡಿ ನುಡಿಯುವ ಗೊರವಯ್ಯನ ನುಡಿಯನ್ನ ಮಳೆ, ಬೆಳೆ, ರಾಜಕೀಯ ಹೀಗೆ ಆಗು ಹೋಗಗಳ ಬಗ್ಗೆ ವಿಮರ್ಶೆ ಮಾಡ್ತಾರೆ ಹಾಗಾದ್ರೆ ಈ ವರ್ಷ ನುಡಿದ ಕಾರ್ಣಿಕ ನುಡಿ ಏನು…? ಅಂತಿರಾ ಈ ಸ್ಟೋರಿ ಓದಿ
ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯ ನುಡಿದ ಗೊರವಯ್ಯ ಸದ್ದಲೇ ಎಂದು ಭವಿಷ್ಯವಾಣಿ ನುಡಿದ ಕಾರ್ಣಿಕದ ಗೊರವಯ್ಯ ರಾಮಣ್ಣ , 18 ಅಡಿ ಬಿಲ್ಲನ್ನು ಏರಿ ಕಾರ್ಣಿಕ ನುಡಿದು ಕೆಳಗೆ ಬಿದ್ದ ಗೊರವಯ್ಯ.
ತುಂಬಿದ ಕೊಡ ತುಳುಕಿತಲೇ ಪರಾಕ್… ಹೌದು ಇದು ಈ ವರ್ಷದ ಶ್ರೀ ಕ್ಷೇತ್ರ ಮೈಲಾರದ ಕಾರ್ಣಿಕ ( 2025 ರ ವರ್ಷ ಭವಿಷ್ಯ) ಅದು ಜಿಲ್ಲೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ. ಮೈಲಾರದ ಮೈಲಾರ ಲೀಂಗೆಶ್ವರನ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಭರತ ಹುಣ್ಣಿಮೆಯ ಬಳಿಕ ಶ್ರೀ ಕ್ಷೇತ್ರ ಮೈಲಾರದ ಡಂಕನಮರಡಿಯಲ್ಲಿ ಕಾರ್ಣಿಕ ನುಡಿಯನ್ನ 11 ದಿನಗಳ ಕಾಲ ಉಪವಾಸ ವಿದ್ದು ಭಕ್ತಿ ಭಾವ ಮಡಿ, 18 ಅಡಿಯ ಬಿಲ್ಲನ್ನ ಏರಿ ಕಾರ್ಣಿಕ ನುಡಿ ಭವಿಷ್ಯ ನುಡಿದ ಗೊರವಯ್ಯ ರಾಮಣ್ಣ, ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯವಾಣಿ ನುಡಿದಿದ್ದಾರೆ ಸಂಪಾದೀತಲೇ ಪರಾಕ್.
|ವೆಂಕಪ್ಪಯ್ಯ ಒಡೆಯರ್, ಮೈಲಾರ ಕ್ಷೇತ್ರದ ಧರ್ಮದರ್ಶಿ
ಈ ಸಮಯದಲ್ಲಿ ಹೂವಿನಹಡಗಲಿ ಶಾಸಕ ಕೃಷ್ಣ ನಾಯಕ್
ಮಾತನಾಡಿದ ಅವರು ತುಂಬಿದ ಕೊಡಾ ತುಳುಕಿತಲೇ ಪರಾಕ್ ಎಂಬ ಎರಡೇ ಶಬ್ದದಲ್ಲಿ ಈ ವರ್ಷದ ದೈವವಾಣಿ ಹೇಳಿದ ಗೊರವಯ್ಯ ರಾಮಣ್ಣ, ಗೊರವಯ್ಯನ ಹೇಳಿಕೆಯಿಂದ ನೆರೆದಿದ್ದ ಲಕ್ಷಾಂತರ ಜನರಿಂದ ವ್ಯಕ್ತವಾದ ಹರ್ಷಾದ್ಘೋರ ಮುಗಿಲು ಮುಟ್ಟಿತು.ಈ ಬಾರಿ ಉತ್ತಮ ಮಳೆ,ಬೆಳೆಯಾಗಲಿದೆ. ದೇಶ ಸುಭಿಕ್ಷೆಯಾಗಿರಲಿದೆ ಎಂದು ಅರ್ಥೈಸಲಾಗುತ್ತಿದೆ.
ಇದಕ್ಕೂ ಮೊದಲು ಮೈಲಾರಲಿಂಗೇಶ್ವರನ ದೇವಸ್ಥಾನದಿಂದ ಶ್ರೀ ವೆಂಕಪ್ಪಯ್ಯ ಒಡೆಯರ್ ಕುದುರೆಯನ್ನೇರಿ ಡೆಂಕನಮರಡಿ ಪ್ರದೇಶದವರೆಗೆ ಮೆರವಣಿ ಮೂಲಕ ಸಾಗಿ ಬಂದು ಕಾರ್ಣಿಕ ನುಡಿಯುವ ಸ್ಥಳದ ಸುತ್ತ ಪ್ರದಕ್ಷಿಣೆ ಹಾಕಿ, ಭಕ್ತರಿಗೆ ಆಶೀರ್ವಾದ ನೀಡಿದರು. ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸೇರಿ ರಾಜ್ಯದ ಮೂಲೆ ಮೂಲೆಗಳಿಂದ ಬಂದ ಲಕ್ಷಾಂತ ಭಕ್ತರು ನೆರೆದಿದ್ದರು.
ಒಟ್ಟಾರೆ ಹೇಳುವುದಾದರೆ, ಈ ಬಾರಿಯ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವವು ದೇಶ ಸುಭಿಕ್ಷವಾಗಿರಲಿದೆ, ಮಳೆ ಬೆಳೆ ಚೆನ್ನಾಗಿ ಆಗಲಿದೆ.. ರೈತರು ಉತ್ತಮ ರೀತಿಯಲ್ಲಿ ಇರ್ತಾರೆ ಅನ್ನೋ ಸಂದೇಶ ನೀಡಿದಂತಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.
ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ5 days ago
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
-
ದಿನದ ಸುದ್ದಿ4 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ7 days ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
-
ದಿನದ ಸುದ್ದಿ2 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ1 day ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ6 hours ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ