ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243