ಸಿನಿ ಸುದ್ದಿ
‘ತ್ರೀ ಮಸ್ಕಟೀಯರ್ಸ್’ ಬಿ-ಟೌನ್ ಬ್ಯೂಟಿ ಗಳ ದೋಸ್ತಿ-ಮಸ್ತಿ ಗೆ ಸಾಕ್ಷಿ ಆಯ್ತು ಸಲ್ಲು ಮಿಯಾ ರ ದಬ್ಬಂಗ್ ರಿಲೋಡೆಡ್..!
ಬಾಲಿವುಡ್ ನಲ್ಲಿ ಈಗ ಸ್ನೇಹದ ಅಲೆ ಎದ್ದಿದೆ…!
ಬಿ-ಟೌನ್ ದುನಿಯಾದ ಸುಲ್ತಾನ್… ಸಲ್ಮಾನ್ ಖಾನ್ ರೊಂದಿಗೆ “ದಬ್ಬಂಗ್ ರಿಲೋಡೆಡ್” ನಲ್ಲಿ ಮಿಂಚುತ್ತಿದ್ದಾರೆ ಬಾಲಿವುಡ್ ತಾರೆಯರು.. ಕತ್ರಿನಾ ಕೈಫ್, ಜಕ್ವಿಲೀನ್ ಫರ್ನಾಂಡೀಸ್, ಸೊನಾಕ್ಷಿ ಸಿನ್ಹಾ, ಸೇರಿದಂತೆ ಹಲವು ಬಿಟೌನ್ ನಟ-ನಟಿಯರು ಸಲ್ಲು ಗೆ ಸಾಥ್ ನೀಡಿದ್ದಾರೆ.
ಸಲ್ಮಾನ್ ಖಾನ್ ರ ಡ್ಯಾನ್ಸ್-ಮ್ಯೂಸಿಕ್ ಕಾಂಸರ್ಟ್ ಗಾಗಿ, ಸಲ್ಲು ಆಂಡ್ ಗ್ಯಾಂಗ್ ಜೊತೆ ದೇಶ-ವಿದೇಶ ಸುತ್ತುತ್ತಿರುವ ಬಾಲಿವುಡ್ ಚೆಲುವೆ ಯರ ಕಾನ್ಸರ್ಟ್ ಫೋಟೋ ಗಳು ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿರುವ ಬೆನ್ನಲ್ಲೇ… ಬಿ-ಟೌನ್ ನ ಮೂರು ಟಾಪ್ ನಟಿಯರು ಲಾಸ್ ಏಂಜಲಿಸ್ ನಿಂದ ದಲ್ಲಾಸ್ ಗೆ ಹೊರಡುವ ಮುನ್ನ ಕ್ಲಿಕ್ಕಿಸಿದ ಫೋಟೋ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
ಕತ್ರೀನಾ ಕೈಫ್ , ಜಕ್ವಿಲೀನ್ ಫರ್ನಾಂಡೀಸ್ ಮತ್ತು ಸೊನಾಕ್ಷಿ ಸಿನ್ಹಾ ವಿಮಾನದಲ್ಲಿ ಮೆಟ್ಟಿಲ ಮೇಲೆ ನಿಂತು ಕ್ಲಿಕ್ಕಿಸಿ ಕೊಂಡಿರುವ ಫೋಟೋ, ಈ ಮೂರೂ ಸುಂದರಿಯರು ತಮ್ಮ ಇಂಸ್ಟಾ ಅಕೌಂಟ್ ನಲ್ಲಿ ಹಂಚಿಕೊಂಡಿದ್ದು.. ಬಾಲಿವುಡ್ ತಾರೆಯರು ಸ್ನೇಹ ಸಂಬಂಧ ಕ್ಕೆ ಸಾಕ್ಷ್ಯ ವೆಂಬಂತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ನಡುವೆ ಕತ್ರೀನಾ ಮತ್ತು ರೇಸ್3 ಬೆಡಗಿ ಜಕ್ವಿಲೀನ್ ಫರ್ನಾಂಡೀಸ್ ನಡುವಿನ ಕೋಳಿ ಜಗಳ ದ ಪುಕಾರಿಗೂ ಮುಕ್ತಾಯ ಹಾಡಿದ್ದಾರೆ.
ಸಲ್ಮಾನ್ ಖಾನ್ ರ ಮೂರು ಹೀರೂಯಿನ್ ಗಳು. ತಮ್ಮದೇ ವಿಶಿಷ್ಟ ವಾದ ಏರ್ಪೋಟ್ ಲುಕ್ ನಲ್ಲಿ ಮಿಂಚುತ್ತಿದ್ದಾರೆ. ಜಕ್ವಿಲೀನ್ ಫರ್ನಾಂಡೀಸ್ ರ ಡೆನಿಮ್ ಆನ್ ಡೆನಿಮ್ ಲುಕ್ ಹೊಸ ಫ್ಯಾಷನ್ ಸ್ಟೇಟ್ ಮೆಂಟ್ ನೀಡುತ್ತಿದೆ . ಲೋ ವೇಸ್ಟ್ ಪೆಂಸಿಲ್ ಕಟ್ ಟೋರ್ನ ಡೆನಿಮ್ ಪ್ಯಾಂಟ್ ಮತ್ತು ಪಫ್ಡ್ ಲಾಂಗ್ ಸ್ಲೀವ್ ನ ಡೆನಿಮ್ ಕ್ರಾಪ್ ಟಾಪ್ ಫ್ಯಾಷನ್ ಪ್ರಿಯರಿಗೆ ಹೊಸ ಸ್ಟೈಲ್ ಕೋಷಂಟ್ ನೀಡಿದೆ.
ಕತ್ರೀನಾ ರ ಬ್ಲಾಕ್ ಆನ್ ಬ್ಲಾಕ್ ಲುಕ್ ಸಖತ್ ಸಿಂಪಲ್ ಮತ್ತು ಸೆಕ್ಸಿ ಎನಿಸುತ್ತದೆ. ಇನ್ನು ಸೊನಾಕ್ಷಿ ಸಿನ್ಹಾ ರ ಬ್ಲಾಕ್ ಲಾಂಗ್ ಕೋಟ್ ಮತ್ತು ಲೋ ವೇಸ್ಟ್ ಗ್ರೀನ್ ಮಿಲಿಟರಿ ಪ್ಯಾಂಟ್ ಸೆಲಿಬ್ರಿಟಿ ಏರ್ಪೋಟ್ ಲುಕ್ ನ ಹೈಲೈಟಾಗಿದೆ.
– ಚಿತ್ರಶ್ರೀ ಹರ್ಷ
ಸುದ್ದಿದಿನ|ವಾಟ್ಸಾಪ್|9986715401
ದಿನದ ಸುದ್ದಿ
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.
ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.
ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್‌ಗೆ ಜೋಡಿಯಾಗಿ ವನಿತಾ ನಟಿಸಿದ್ದರು.
ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.
ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.
ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್‌ಗೆ.. ಬೀಚ್‌ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
ಸುದ್ದಿದಿನ,ಮುಂಬೈ:ಗನ್ ಮಿಸ್ ಫೈರ್ ಆದ ಕಾರಣ ಬಾಲಿವುಡ್ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ತನ್ನದೇ ಗನ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಗೋವಿಂದ ಅವರ ಬಳಿಯಿದ್ದ ಗನ್‌ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ನಟ ಗೋವಿಂದ ಹಾಗೂ ಕುಟುಂಬಸ್ಥರು ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಟ ದರ್ಶನ್‌ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು
ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್, ವಾರ್ಡರ್‌ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ6 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ6 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ
-
ದಿನದ ಸುದ್ದಿ6 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ
-
ದಿನದ ಸುದ್ದಿ6 days ago
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ