ಕ್ರೀಡೆ

ಪರಿಶಿಷ್ಟ ಜಾತಿ/ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ 2021ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2021 ರಿಂದ 31.12.2021 ರವರೆಗೆ) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜೂ.21 ರ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08192-237480 ಸಂಪರ್ಕಿಸಬಹುದಾಗಿದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version