ದಿನದ ಸುದ್ದಿ

ತುಂತುರು ನೀರಾವರಿ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ಧಾರವಾಡ : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ.90% ರಷ್ಟು ಸಹಾಯಧನ ಲಭ್ಯವಿದ್ದು, ಆಸಕ್ತ ಅರ್ಹ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ನಿಗದಿತ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್, ಬ್ಯಾಂಕ ಪಾಸ್‍ಬುಕ್, ಚಾಲ್ತಿ ಉತಾರ, ತಮ್ಮ ಜಮೀನದಲ್ಲಿ ನೀರಾವರಿ ಮೂಲ ಇರುವ ಬಗ್ಗೆ ಗ್ರಾಮ ಲೆಕ್ಕಾಧಿಕಾರಿಗಳಿಂದ ದೃಢಿಕರಣಪತ್ರ ಹಾಗೂ ರೂ.20/- ಬಾಂಡ್ ಪೇಪರ್ ಮೇಲೆ ಮುಚ್ಚಳಿಕೆ ಪ್ರಮಾಣ ಪತ್ರ ಸಲ್ಲಿಸಬೇಕು.

ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿದ ರೈತ ಫಲಾನುಭವಿಗಳು ಸಹ ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಲು ಜಂಟಿ ಕೃಷಿ ನಿರ್ದೇಶಕ ಐ.ಬಿ.ರಾಜಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version