ದಿನದ ಸುದ್ದಿ
ಮರಕ್ಕೆ ಟೆಂಪೋ ಟ್ರಾಕ್ಸ್ ಡಿಕ್ಕಿ 9 ಜನ ಸಾವು
ಸುದ್ದಿದಿನ,ಧಾರವಾಡ : ಧಾರವಾಡ ತಾಲ್ಲೂಕಿನ ಬಾಡ ಗ್ರಾಮದ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಟೆಂಪೋ ಟ್ರಾಕ್ಸ್ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸಾವನ್ನಪ್ಪಿದ್ದಾರೆ. 13 ಜನರು ಗಾಯಗೊಂಡಿದ್ದಾರೆ.
ಧಾರವಾಡ ಜಿಲ್ಲೆ ಮನಸೂರಿನ ಶ್ರೀರೇವಣಸಿದ್ದೇಶ್ವರ ಮಠದಲ್ಲಿ ಮದುವೆಯ ನಿಶ್ಚಿತಾರ್ಥ ಮುಗಿಸಿ ಬೆನಕನಕಟ್ಟಿ ಗ್ರಾಮಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ. 21 ಜನರಿದ್ದ ಟೆಂಪೋ ಟ್ರಾಕ್ಸ್ ಬಾಡ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಲ್ಲೇ7ಮಂದಿ ಮೃತಪಟ್ಟಿದ್ದು, ಗಾಯಾಳುಗಳ ಪೈಕಿ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಅಪಘಾತದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲಿಸಿದರು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243