ದಿನದ ಸುದ್ದಿ

ಚನ್ನಗಿರಿ ಮತ್ತು ನಲ್ಲೂರಿನಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶುಕ್ರವಾರದಂದು ಚನ್ನಗಿರಿ ನಗರ ಮತ್ತು ನಲ್ಲೂರಿನ ಬಳಿ ಇರುವ ಅಂಗಡಿ, ಪಾನ್‍ಶಾಪ್, ಹೋಟೆಲ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಪಟ್ಟಣ ಪಂಚಾಯ್ತಿ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 21, ಸೆಕ್ಷನ್ 6ಎ ಅಡಿಯಲ್ಲಿ 04, ಸೆಕ್ಷನ್ 6ಬಿ ರಡಿ 02 ಸೇರಿದಂತೆ ಒಟ್ಟು 27 ಪ್ರಕರಣಗಳನ್ನು ದಾಖಲಿಸಿ, ರೂ.2700/- ಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಯಿತು.

ತಂಡವು ಚನ್ನಗಿರಿ ನಗರ ಹಾಗೂ ನಲ್ಲೂರಿನಲ್ಲಿರುವ ಹೊಟೇಲ್, ಬಾರ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಸುದ್ದಿದಿನಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.

ಇದನ್ನೂ ಓದಿ | ಹಲ್ಲು‌ ನೋವು – ಬಾಯಿ‌ ಹುಣ್ಣುಗಳಿಗೆ ಇಲ್ಲಿದೆ ಮನೆ ಔಷಧಿ..!

ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿಹ್ನೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ಚನ್ನಗಿರಿಯ ತಾಲ್ಲೂಕು ಆರೋಗ್ಯಧಿಕಾರಿ ಡಾ.ಟಿ.ಎಂ ಪ್ರಭು, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ಹಿರಿಯ ಆರೋಗ್ಯ ಸಹಾಯಕ ಅಶೋಕ.ಎಂ, ಶಿಕ್ಷಣ ಇಲಾಖೆಯ ಟಿ.ಪಿ.ಇ.ಐ ಶ್ರೀಶೈಲಪ್ಪ, ಚನ್ನಗಿರಿಯ ಪೊಲೀಸ್ ಇಲಾಖೆಯ ಎಎಸ್‍ಐ ಜಯಪ್ಪ, ಮತ್ತು ಸಂತೋಷ ಸಹಾಯಕ ಕೃಷ್ಣ ಇತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version