Connect with us

ದಿನದ ಸುದ್ದಿ

ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

Published

on

ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಗುರುವಾರದಂದು ಸಂತೇಬೆನ್ನೂರಿನ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳು, ಪಾನ್‍ಶಾಪ್, ಹೋಟೆಲ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ತಾಲ್ಲೂಕು ಪಂಚಾಯ್ತಿ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 22, ಸೆಕ್ಷನ್ 6ಎ ಅಡಿಯಲ್ಲಿ 07, 29 ಸೇರಿದಂತೆ ಒಟ್ಟು 29 ಪ್ರಕರಣಗಳನ್ನು ದಾಖಲಿಸಿ, ರೂ.3500/- ಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಯಿತು.

ತಂಡವು ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಮೇಲೆ ಹೊಟೇಲ್, ಬಾರ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.

ಇದನ್ನೂ ಓದಿ | ದಾವಣಗೆರೆ | ಶನಿವಾರ ಮತ್ತು ಭಾನುವಾರ ಎಪಿಎಂಸಿಗೆ ರಜೆ 

ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿಹ್ನೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ಟಿಹೆಚ್‍ಓ ಡಾ.ಪ್ರಭು.ಬಿ.ಎಂ, ಪಿಎಸ್‍ಐ ಶಿವರುದ್ರಪ್ಪ ಮೇಟಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ಹಿರಿಯ ಆರೋಗ್ಯ ಸಹಾಯಕ ಲೋಕೇಶಪ್ಪ, ಉಪ ತಹಶಿಲ್ದಾರ್ ಮಂಜುನಾಥ, ಹಿರಿಯ ಆರೋಗ್ಯ ಸಹಾಯಕ ಮಂಜಪ್ಪ.ಟಿ.ಕೆ, ಕಂದಾಯ ನಿರೀಕ್ಷಕರಾದ ವಿಶ್ವನಾಥ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶ್ರೀಶೈಲಪ್ಪ ಹಾಗೂ ಪೊಲೀಸ್ ಸಿಬ್ಬಂದಿ, ಇತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending