Connect with us

ದಿನದ ಸುದ್ದಿ

ಪರವಾನಗಿ ಹೊಂದಿದ ಮಾರಾಟಗಾರರಿಂದ ಮಾತ್ರ ತಂಬಾಕು ಮಾರಾಟವಾಗಬೇಕು : ಎನ್ಎಲ್ಎಸ್ಐಯು ವರದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು: ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಎಲ್ಲ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳು ಪರವಾನಗಿ ಹೊಂದಿರಬೇಕು. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಎಲ್ಲ ಆವರಣಗಳಲ್ಲಿ ಪರವಾನಗಿಯನ್ನು ಎದ್ದು ಕಾಣುವಂತೆ ಪ್ರದರ್ಶಿಸಬೇಕು ಹಾಗು ಪ್ರತಿ ವರ್ಷ ಪರವಾನಗಿಯನ್ನು ನವೀಕರಿಸಬೇಕು ಎಂದು ಇತ್ತೀಚೆಗೆ ಬಿಡುಗಡೆಗೊಂಡ ‘ಭಾರತದಲ್ಲಿ ತಂಬಾಕು ಮಾರಾಟಗಾರರ ಪರವಾನಗಿ ಜಾರಿ ಚೌಕಟ್ಟು’ (Framework for Implementation of Tobacco Vendor Licensing in India) ವರದಿ ಶಿಫಾರಸು ಮಾಡಿದೆ.

ತಂಬಾಕು ಉತ್ಪನ್ನಗಳ ಲಭ್ಯತೆಯನ್ನು ನಿಯಂತ್ರಿಸಿ, ವ್ಯಸನಕಾರಿ ತಂಬಾಕು ಉತ್ಪನ್ನಗಳಿಂದ ಉಂಟಾಗುವ ಆಜೀವ ಯಾತನೆಯಿಂದ ಭಾರತೀಯರನ್ನು ರಕ್ಷಿಸಲು ತಂಬಾಕು ಮಾರಾಟಗಾರರ ಪರವಾನಗಿ ನಿರ್ಣಾಯಕವಾಗಿದೆ. ವರದಿಯ ಪ್ರಕಾರ, ಸಿಗರೇಟ್, ಬೀಡಿ ಮತ್ತು ಜಗಿಯುವ ತಂಬಾಕು ಉತ್ಪನ್ನ ಮಾರಾಟಕ್ಕೆ ಮಾರಾಟಗಾರರ ಪರವಾನಗಿಯನ್ನು ಅನುಷ್ಠಾನಗೊಳಿಸಿದರೆ, ತಂಬಾಕು ನಿಯಂತ್ರಣ ಕಾನೂನು ಮತ್ತು ನೀತಿಗಳ ಪರಿಣಾಮಕಾರಿ ಜಾರಿಗೂ ಸಹಕಾರಿಯಾಗುತ್ತದೆ.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್ಎಲ್ಎಸ್ಐಯು) ದಿ ಚೇರ್ ಆನ್ ಕನ್ಸ್ಯುಮರ್ ಲಾ ಅಂಡ್ ಪ್ರಾಕ್ಟೀಸ್ ಬಿಡುಗಡೆ ಮಾಡಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಫೆಬ್ರವರಿ 25ಕ್ಕೆ ಸಲ್ಲಿಸಲಾಗಿರುವ ಈ ವರದಿ, ಭಾರತದಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸಲು ಮಾರಾಟಗಾರರ ಪರವಾನಗಿ ಪರಿಕಲ್ಪನೆಯನ್ನು ವಿಶ್ಲೇಷಿಸಿದೆ.

ಇದನ್ನೂ ಓದಿ | ದಾವಣಗೆರೆ ಜಿ.ಪಂ ಸಾಮಾನ್ಯ ಸಭೆ | ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವಂತೆ ಸದಸ್ಯರ ಒತ್ತಾಯ

ಅಲ್ಲದೆ, ಭಾರತದ ವಿವಿಧ ರಾಜ್ಯ ಮತ್ತು ನಗರಗಳು ಮಾರಾಟಗಾರರ ಪರವಾನಗಿ ಕುರಿತು ಅಳವಡಿಸಿಕೊಂಡಿರುವ ಪದ್ಧತಿ ಮತ್ತು ಪ್ರಕ್ರಿಯೆಯನ್ನು ಪರಿಶೀಲಿಸಿದೆ. ತಂಬಾಕು ಮಾರಾಟಗಾರರ ಪರವಾನಗಿಗಾಗಿ ಅಸ್ತಿತ್ವದಲ್ಲಿರುವ ಕಾನೂನುಗಳು, ಜಾಗತಿಕವಾಗಿ ಆಚರಣೆಯಲ್ಲಿರುವ ಅತ್ಯುತ್ತಮ ಅಭ್ಯಾಸಗಳು ಮತ್ತು ವಿಶ್ವ ಅರೋಗ್ಯ ಸಂಸ್ಥೆಯ ಫ್ರೇಮ್ ವರ್ಕ್ ಕನ್ವೆನ್ಷನ್ ಆನ್ ಟೊಬ್ಯಾಕೋ ಕಂಟ್ರೋಲ್ (WHO FCTC) ತಂಬಾಕು ನಿಯಂತ್ರಣದ ಕುರಿತಾದ ಜಾಗತಿಕ ಸಾರ್ವಜನಿಕ ಆರೋಗ್ಯ ಒಪ್ಪಂದದಡಿ ಸೂಚಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ವರದಿ ಮಾದರಿ ಚೌಕಟ್ಟನ್ನು ಪ್ರಸ್ತಾಪಿಸಿದೆ.

ನಿಯಂತ್ರಕ ವಿಧಾನವಾಗಿ ಪರಿಗಣಿಸುವುದಾದರೆ, ತಂಬಾಕು ಮಾರಾಟಗಾರರ ಪರವಾನಗಿ ರಾಜ್ಯ/ಪುರಸಭೆ ಮಟ್ಟದಲ್ಲಿ ಅತ್ಯಂತ ಪರಿಣಾಮಕಾರಿ ಅಸ್ತ್ರವಾಗಬಹುದು. ಚಿಲ್ಲರೆ ವ್ಯಾಪಾರದಲ್ಲಿ ತಂಬಾಕು ಉತ್ಪನ್ನಗಳ ಲಭ್ಯತೆ ಕುಗ್ಗಿಸುವ ಗುರಿ ಹೊಂದಿರುವ ವಿವಿಧ ನೀತಿಗಳನ್ನು ಕಾರ್ಯಗತಗೊಳಿಸಿ ಜಾರಿಗೊಳಿಸಲು ಮಾರಾಟಗಾರರ ಪರವಾನಗಿ ಮಾದರಿ ಚೌಕಟ್ಟನ್ನು ಬಳಸಬಹುದಾಗಿದ್ದು, ಇದು ಸ್ಥಳೀಯ ಸರ್ಕಾರಗಳಿಗೆ ಉತ್ತಮ ನಿಯಂತ್ರಕ ಸಾಧನದ ಅಡಿಗಲ್ಲಾಗಿದೆ.

ಭಾರತದಲ್ಲಿ ತಂಬಾಕು ನಿಯಂತ್ರಣವನ್ನು ಪ್ರಾಥಮಿಕವಾಗಿ ಕೋಟ್ಪಾ (COTPA) ನಿಯಂತ್ರಿಸುತ್ತಿದ್ದರೂ, ತಂಬಾಕು ಬಳಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಇತರ ಕಾನೂನುಗಳಿವೆ. ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿವಿಧ ಕಾನೂನುಗಳ ಪರಿಣಾಮಕಾರಿ ಮತ್ತು ಸಂಘಟಿತ ಜಾರಿಗೆ ರಾಜ್ಯ ಮತ್ತು ಪುರಸಭೆ ಸರ್ಕಾರಗಳಿಗೆ ತಂಬಾಕು ಮಾರಾಟಗಾರರ ಪರವಾನಗಿ ಒಂದು ವಿಶಿಷ್ಟ ಅವಕಾಶವನ್ನು ಒದಗಿಸುತ್ತದೆ.

“ತಂಬಾಕಿನ ಹಾನಿಕಾರಕ ಪರಿಣಾಮಗಳು ಜಗತಿನಾದ್ಯಂತ ಸಾಬೀತಾಗಿದ್ದು, ಅವುಗಳನ್ನು ಒಪ್ಪಿಕೊಳ್ಳಲಾಗಿದೆ. ಈ ವರದಿಯ ಮೂಲಕ, ಅಸ್ತಿತ್ವದಲ್ಲಿರುವ ಕಾನೂನು ಮತ್ತು ಜಾಗತಿಕ ಅತ್ಯುತ್ತಮ ಅಭ್ಯಾಸಗಳ ಆಧಾರದ ಮೇಲೆ ಪರವಾನಗಿ ಪಡೆದ ಮಾರಾಟಗಾರರ ಮೂಲಕ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮಾದರಿ ಕಾನೂನು ಚೌಕಟ್ಟನ್ನು ಎನ್‌ಎಲ್‌ಎಸ್‌ಐಯು ಶಿಫಾರಸು ಮಾಡಿದೆ.

ಈ ಮಾರಕ ಉತ್ಪನ್ನಗಳಿಂದ ಭಾರತೀಯರನ್ನು, ವಿಶೇಷವಾಗಿ ಮಕ್ಕಳು ಮತ್ತು ಯುವಕರನ್ನು ರಕ್ಷಿಸಲು ರಾಜ್ಯ ಮತ್ತು ಪುರಸಭ ಸರ್ಕಾರಗಳು ಈ ಶಿಫಾರಸುಗಳನ್ನು ಪರಿಗಣಿಸುತ್ತವೆ ಎಂದು ನಾವು ಆಶಿಸುತ್ತೇವೆ,” ಎಂದು ಪ್ರೊ. (ಡಾ.) ಅಶೋಕ್ ಆರ್. ಪಾಟೀಲ್, ಕಾನೂನು ಪ್ರಾಧ್ಯಾಪಕರು ಮತ್ತು ಚೇರ್ ಪ್ರೊಫೆಸರ್, ದಿ ಚೇರ್ ಆನ್ ಕನ್ಸ್ಯುಮರ್ ಲಾ ಅಂಡ್ ಪ್ರಾಕ್ಟೀಸ್, ಎನ್‌ಎಲ್‌ಎಸ್‌ಐಯು, ಬೆಂಗಳೂರು, ಅವರು ತಿಳಿಸಿದರು.

ಎನ್‌ಎಲ್‌ಎಸ್‌ಐಯು ವರದಿಯ ತಂಬಾಕು ಮಾರಾಟಗಾರರ ಪರವಾನಗಿಯ ಮಾದರಿ ಕಾನೂನು ಚೌಕಟ್ಟಿನ ಪ್ರಕಾರ: ಎಲ್ಲ ತಂಬಾಕು ಮಾರಾಟಗಾರರು, ಚಿಲ್ಲರೆ ಅಥವಾ ಸಗಟು ವ್ಯಾಪಾರಿಗಳು, 12 ತಿಂಗಳ ಅವಧಿಯ ಮಾನ್ಯತೆಯುಳ್ಳ ಪರವಾನಗಿ ಹೊಂದಿರಬೇಕು, ಅದು ವರ್ಗಾಯಿಸಲಾಗದ ಪರವಾನಗಿಯಾಗಿರಬೇಕು ಮತ್ತು ಅದನ್ನು ಪ್ರತಿವರ್ಷ ನವೀಕರಿಸಬೇಕು; ಪರವಾನಗಿ ಪಡೆಯಲು ಉದ್ದೇಶಿಸುವ ಎಲ್ಲ ಅರ್ಜಿದಾರರು ತಂಬಾಕು ನಿಯಂತ್ರಣ ಕಾನೂನುಗಳನ್ನು ಅನುಸರಿಸಬೇಕು; ತಂಬಾಕು ಉತ್ಪನ್ನಗಳನ್ನು ಮಾತ್ರ ಮಾರುವ ಮಾಡುವ ಮಾರಾಟಗಾರರಿಗೆ ಪರವಾನಗಿ ನೀಡಬೇಕು ಮತ್ತು ತಂಬಾಕಿನೊಂದಿಗೆ ಚಾಕೊಲೇಟ್, ಮಿಠಾಯಿ, ಬಿಸ್ಕತ್ತು, ಚಿಪ್ಸ್ ಮುಂತಾದ ತಂಬಾಕೇತರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಬೇಕು; ತಂಬಾಕು ಉತ್ಪನ್ನಗಳ ಮಾರಾಟದ ಆವರಣದಲ್ಲಿ ತಂಬಾಕು ಪರವಾನಗಿ ಎದ್ದು ಕಾಣುವಂತೆ ಪ್ರದರ್ಶಿಸಬೇಕು; ನಿಬಂಧನೆಗಳು ಮತ್ತು ಷರತ್ತುಗಳ ಉಲ್ಲಂಘನೆಗೆ ಹಂತ ಹಂತವಾಗಿ ದಂಡ ವಿಧಿಸುವುದು, ಪರವಾನಗಿ ಅಮಾನತುಗೊಳಿಸುವುದು ಮತ್ತು ಅಂತಿಮವಾಗಿ ಪರವಾನಗಿ ರದ್ದುಗೊಳಿಸುವ ಮೂಲಕ ಕ್ರಮಕೈಗೊಳ್ಳಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಭಾಗವಾದ ರಾಜ್ಯ ತಂಬಾಕು ನಿಯಂತ್ರಣ ಕೋಶದ (ಎಸ್‌ಟಿಸಿಸಿ) ಉಪನಿರ್ದೇಶಕರಾದ ಡಾ. ಸೆಲ್ವರಾಜನ್, “ವರದಿಯಲ್ಲಿ ಮುಖ್ಯವಾಗಿ ಉಲ್ಲೇಖಿಸಿರುವಂತೆ, ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳು ಸುಲಭವಾಗಿ ಸಿಗುವುದನ್ನು ತಡೆಯಲು ಮತ್ತು ಮಾರಾಟವನ್ನು ನಿಯಂತ್ರಿಸಲು, ಮಾರಾಟಗಾರರ ಪರವಾನಗಿ ಅತ್ಯಗತ್ಯವಾಗಿದೆ. ಸಾರ್ವಜನಿಕರಿಂದಲೂ ಇದಕ್ಕೆ ವ್ಯಾಪಕ ಬೆಂಬಲವಿದ್ದು, ನೂರಾರು ಮಕ್ಕಳು, ಪೋಷಕರು ಮತ್ತು ಶಿಕ್ಷಕರು ಬೆಂಬಲ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಪತ್ರಗಳನ್ನು ಬರೆದಿದ್ದಾರೆ” ಎಂದರು.

ಮೈಸೂರಿನ ತಂಬಾಕು ವಿರೋಧಿ ವೇದಿಕೆಯ ಸಂಚಾಲಕರಾದ ಶ್ರೀ ವಸಂತ್‌ಕುಮಾರ್ ಮೈಸೂರಮಠ್, “ಜೀವನವಿಡಿ ದುಃಖ ಮತ್ತು ಸಂಕಟದಿಂದ ಯುವಕರು/ಮಕ್ಕಳನ್ನು ರಕ್ಷಿಸಲು ತಂಬಾಕು ಉತ್ಪನ್ನಗಳು ಅವರಿಗೆ ಸಿಗದಂತೆ ಮಾಡುವುದು ಅನಿವಾರ್ಯವಾಗಿದೆ. ವಿಶೇಷವಾಗಿ, ಈ ಸವಾಲಿನ ಸಂದರ್ಭದಲ್ಲಿ, ಭಾರತದಲ್ಲಿ ತಂಬಾಕು ಎಂಬ ಪೀಡೆಯನ್ನು ತಡೆಯಲು ಈ ವ್ಯಸನಕಾರಿ ಉತ್ಪನ್ನಗಳ ಮಾರಾಟ, ಪ್ರಚಾರ ಮತ್ತು ಬಳಕೆಯನ್ನು ನಿಯಂತ್ರಿಸುವುದು ಅತ್ಯಂತ ನಿರ್ಣಾಯಕವಾಗಿದೆ.

ಅಧಿಕೃತವಾಗಿ ಪರವಾನಗಿ ಪಡೆದ ಅಂಗಡಿಗಳು/ಮಾರಾಟಗಾರರ ಮೂಲಕ ತಂಬಾಕು ಉತ್ಪನ್ನಗಳ ಮಾರಾಟದಿಂದ ಜನರ ಆರೋಗ್ಯ ಹದಗೆಡುವುದನ್ನುತಪ್ಪಿಸಿದಂತಾಗುತ್ತದೆ ಮತ್ತುಸರ್ಕಾರದ ಮೂಲ ಕರ್ತವ್ಯವಾದ ಸಾರ್ವಜನಿಕ ಆರೋಗ್ಯ ಸುಧಾರಣೆ, ಸ್ವಾಸ್ಥ್ಯ ಹಾಗು ಯೋಗಕ್ಷೇಮ ರಕ್ಷಣೆಯನ್ನೂ ಮಾಡಿದಂತಾಗುತ್ತದೆ,” ಎಂದು ಅಭಿಪ್ರಾಯಪಟ್ಟರು.

2017ರ ಸೆಪ್ಟೆಂಬರ್‌ನಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಕ್ಕಳು ತಂಬಾಕು ಉತ್ಪನ್ನಗಳಿಗೆ ಒಡ್ಡಿಕೊಳ್ಳುವುದರಿಂದ ರಕ್ಷಿಸುವಂತೆ ಪುರಸಭೆ/ಸ್ಥಳೀಯ ಪ್ರಾಧಿಕಾರಗಳಿಗೆ ಸೂಚಿಸಿತ್ತು. ಇದಕ್ಕಾಗಿ ವ್ಯವಸ್ಥೆಯೊಂದನ್ನು ಅಭಿವೃದ್ಧಿಪಡಿಸಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಚಿಲ್ಲರೆ ಅಂಗಡಿಗಳಿಗೆ ಅನುಮತಿ ನೀಡುವುದರೊಂದಿಗೆ ಅಲ್ಲಿ ಮಿಠಾಯಿ, ಚಿಪ್ಸ್, ಬಿಸ್ಕತ್ತು, ತಂಪು ಪಾನೀಯ, ಇತ್ಯಾದಿ ತಂಬಾಕೇತರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಖಚಿತಪಡಿಸಿಕೊಳ್ಳಲು ಸೂಚಿಸಿತ್ತು.

ಇದರನ್ವಯ, ಅಯೋಧ್ಯೆ, ಲಕ್ನೋ, ಜೈಪುರ, ರಾಂಚಿ, ಪಾಟ್ನಾ, ಹೌರಾ, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಗತ್ಯ ಆದೇಶ ಹೊರಡಿಸಿ ನಶ್ಯ, ಸಿಗಾರ್, ಸಿಗರೇಟ್ ಮತ್ತು ಬೀಡಿ ಸೇರಿದಂತೆ ಎಲ್ಲ ರೀತಿಯ ತಂಬಾಕಿನ ಸಂಗ್ರಹ, ಪ್ಯಾಕಿಂಗ್, ಶುದ್ಧೀಕರಣ ಸೇರಿದಂತೆ ತಂಬಾಕಿನ ಉತ್ಪಾದನೆಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ಪರವಾನಗಿ ಕಡ್ಡಾಯಗೊಳಿಸಿವೆ.

ತಂಬಾಕು ಬಳಕೆದಾರರ ಪಟ್ಟಿಯಲ್ಲಿ ಜಾಗತಿಕವಾಗಿ ಭಾರತ ಎರಡನೇ ಸ್ಥಾನದಲ್ಲಿದೆ (268 ಮಿಲಿಯನ್ ಅಥವಾ ದೇಶದ ಶೇಕಡಾ 28.6 % ವಯಸ್ಕರು). ಇದರಲ್ಲಿ ಪ್ರತಿವರ್ಷ 12 ಲಕ್ಷ ಮಂದಿ ತಂಬಾಕು ಸಂಬಂಧಿತ ಖಾಯಿಲೆಗಳಿಂದ ಮೃತಪಡುತಿದ್ದಾರೆ. ಧೂಮಪಾನದಿಂದಾಗಿ 10 ಲಕ್ಷ ಜನ ಮರಣ ಹೊಂದುತ್ತಿದ್ದರೆ, ಎರಡು ಲಕ್ಷಕ್ಕೂ ಹೆಚ್ಚು ಮಂದಿ ಧೂಮಪಾನಕ್ಕೆ ಒಡ್ಡಿಕೊಂಡು (ಸೆಕೆಂಡ್ ಹ್ಯಾಂಡ್ ಸ್ಮೋಕಿಂಗ್) ಸಾವನ್ನಪ್ಪುತ್ತಿದ್ದಾರೆ.

ಅಲ್ಲದೆ, 35,000ಕ್ಕೂ ಹೆಚ್ಚು ಜನ ಹೊಗೆರಹಿತ ತಂಬಾಕು ಬಳಕೆಯಿಂದ ಅಸುನೀಗುತ್ತಿದ್ದಾರೆ. ತಂಬಾಕು ಬಳಕೆ ಭಾರತದಲ್ಲಿನ ಶೇಕಡಾ 27 % ಎಲ್ಲ ವಿಧದ ಕ್ಯಾನ್ಸರ್ ಗಳಿಗೆ ಕಾರಣ. ತಂಬಾಕು ಸಂಬಂದಿತ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಪ್ರತಿವರ್ಷ 1,82,000 ಕೋಟಿ ರೂಪಾಯಿಗಳು ವ್ಯಯವಾಗುತ್ತಿದ್ದು, ಇದು ಭಾರತದ ಜಿಡಿಪಿಯ ಶೇಕಡಾ 1.8% ರಷ್ಟಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!

Published

on

ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ ವ್ಯಾಪಕ ವ್ಯವಸ್ಥೆಯಿಂದ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ಅಧಿಕಾರಿಗಳ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಚುನಾಯಿತ ಅಭ್ಯರ್ಥಿಗಳ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ನೂತನ ಅಭ್ಯರ್ಥಿಗಳ ಆಗಮನ ಪ್ರಕ್ರಿಯೆ ಆರಂಭವಾಗುತ್ತದೆ. ಅವರ ಪ್ರಯಾಣಕ್ಕೆ ಮುನ್ನವೇ ಲೋಕಸಭೆ ಕಾರ್ಯಾಲಯದ ನೋಡಲ್ ಅಧಿಕಾರಿಗಳು ಅವರನ್ನು ಸಂಪರ್ಕಿಸುತ್ತಾರೆ. ಐಜಿಐ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ವಿವಿಧ ಟರ್ಮಿನಲ್‌ಗಳಲ್ಲಿ ವಿಶೇಷ ಸ್ವಾಗತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಸಂಸದರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ನಿಗದಿತ ಕೇಂದ್ರಗಳಲ್ಲಿ ಬರ ಮಾಡಿಕೊಳ್ಳಲಾಗುತ್ತದೆ.

ಸಂಸತ್ತಿನ ಅನೆಕ್ಸೆ ವಿಸ್ತೃತ ಕಟ್ಟಡದ ಸ್ವಾಗತ ಕೇಂದ್ರಕ್ಕೆ ಆಗಮಿಸಿದ ನಂತರ ಅವರಿಗೆ ದೂರವಾಣಿ ಸಂಪರ್ಕ, ಹೊಸಬ್ಯಾಂಕ್ ಖಾತೆ, ಸಂಸತ್ ಕಟ್ಟಡಕ್ಕೆ ಪ್ರವೇಶ ಪಡೆಯಲು ಸ್ಮಾರ್ಟ್ ಆಕ್ಸೆಸ್ ಕಾರ್ಡ್, ಅವರ ವಾಹನಗಳಿಗಾಗಿ ಫಾಸ್ಟ್ ಟ್ಯಾಗ್ ಸ್ಟಿಕರ್ ಮತ್ತು ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಿ ಅತಿಥಿ ಭವನ ಹಾಗೂ ಪಶ್ಚಿಮ ನ್ಯಾಯಾಲಯ ಹಾಸ್ಟೇಲ್ ಸಂಕೀರ್ಣದಲ್ಲಿ ಅವರಿಗೆ ತಂಗಲು ಅವಕಾಶ ಕಲ್ಪಿಸಲಾಗುತ್ತದೆ. ಹೊಸ ಸದಸ್ಯರಿಗೆ ಸಂವಿಧಾನದ ಪ್ರತಿ ನೀತಿ ಮತ್ತು ಕಲಾಪ, ಪ್ರಕ್ರಿಯೆ, ನಿಯಮಾವಳಿ ಕೈಪಿಡಿಗಳನ್ನು ಅನುಸರಿಸಲು ನೀಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕವಿತೆ | ಒಂದು ಕಪ್ ಕಾಫಿ

Published

on

  • ಲಕ್ಕೂರು ಆನಂದ್

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending