ದಿನದ ಸುದ್ದಿ

ಹರಿಹರ | ತಂಬಾಕು ನಿಯಂತ್ರಣ ತನಿಖಾ ತಂಡದಿಂದ ಕ್ಷಿಪ್ರ ದಾಳಿ : ಪ್ರಕರಣ ದಾಖಲು

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನ ತಾಲ್ಲೂಕೆಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಹರಿಹರ ನಗರದ ವಿವಿಧೆಡೆ ಜು.17 ರಂದು ಜಿಲ್ಲಾ & ತಾಲ್ಲೂಕು ತಂಬಾಕು ನಿಯಂತ್ರಣ ತನಿಖಾ ದಳದಿಂದ ತಂಬಾಕು ದಾಳಿ ನಡೆಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 20 ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 7 ಪ್ರಕರಣ ಸೇರಿದಂತೆ ಒಟ್ಟು 27 ಪ್ರಕರಣಗಳನ್ನು ದಾಖಲಿಸಿ, ರೂ. 2250/- ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.

ತಂಡವು ಹರಿಹರ ನಗರದ ಚೆಕ್‍ಪೋಸ್ಟ್, ಶಿವಮೊಗ್ಗ ರಸ್ತೆಯ ಸುತ್ತಮುತ್ತಲಿನ ಹೊಟೇಲ್, ಬಾರ್&ರೆಸ್ಟೋರೆಂಟ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.

ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧÀ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಮೋಹನ ಪಿ.ವಿ, ಆಹಾರ ಸುರಕ್ಷತಾಧಿಕಾರಿ ಎಂ.ಪಿ.ಕುಸಮ್ಮನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಸ್.ಹೆಚ್.ಪಾಟಿಲ್, ಯಶೋಧ ಜವಳಗೇರಿ, ಆರೋಗ್ಯ ನಿರೀಕ್ಷಕ ಕೂಡಿ ಭೀಮರಾಯಪ್ಪ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ಸಮಾಜ ಕಾರ್ಯಕರ್ತ ದೇವರಾಜ ಕೆ.ಪಿ, ಹರಿಹರ ಗ್ರಾಮೀಣ ಪೊಲೀಸ್ ಠಾಣೆಯ ಪಿಸಿ ವೆಂಕಟೇಶ ಟಿ, ಇತರರು ಹಾಜರಿದ್ದರು.

ಕೃಪೆ : ದಾವಣಗೆರೆ ವಾರ್ತಾಭವನ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version