ದಿನದ ಸುದ್ದಿ
ಹರಿಹರ | ತಂಬಾಕು ನಿಯಂತ್ರಣ ತನಿಖಾ ತಂಡದಿಂದ ಕ್ಷಿಪ್ರ ದಾಳಿ : ಪ್ರಕರಣ ದಾಖಲು
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನ ತಾಲ್ಲೂಕೆಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಹರಿಹರ ನಗರದ ವಿವಿಧೆಡೆ ಜು.17 ರಂದು ಜಿಲ್ಲಾ & ತಾಲ್ಲೂಕು ತಂಬಾಕು ನಿಯಂತ್ರಣ ತನಿಖಾ ದಳದಿಂದ ತಂಬಾಕು ದಾಳಿ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 20 ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 7 ಪ್ರಕರಣ ಸೇರಿದಂತೆ ಒಟ್ಟು 27 ಪ್ರಕರಣಗಳನ್ನು ದಾಖಲಿಸಿ, ರೂ. 2250/- ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.
ತಂಡವು ಹರಿಹರ ನಗರದ ಚೆಕ್‍ಪೋಸ್ಟ್, ಶಿವಮೊಗ್ಗ ರಸ್ತೆಯ ಸುತ್ತಮುತ್ತಲಿನ ಹೊಟೇಲ್, ಬಾರ್&ರೆಸ್ಟೋರೆಂಟ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.
ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧÀ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.
ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಮೋಹನ ಪಿ.ವಿ, ಆಹಾರ ಸುರಕ್ಷತಾಧಿಕಾರಿ ಎಂ.ಪಿ.ಕುಸಮ್ಮನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಸ್.ಹೆಚ್.ಪಾಟಿಲ್, ಯಶೋಧ ಜವಳಗೇರಿ, ಆರೋಗ್ಯ ನಿರೀಕ್ಷಕ ಕೂಡಿ ಭೀಮರಾಯಪ್ಪ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ಸಮಾಜ ಕಾರ್ಯಕರ್ತ ದೇವರಾಜ ಕೆ.ಪಿ, ಹರಿಹರ ಗ್ರಾಮೀಣ ಪೊಲೀಸ್ ಠಾಣೆಯ ಪಿಸಿ ವೆಂಕಟೇಶ ಟಿ, ಇತರರು ಹಾಜರಿದ್ದರು.
ಕೃಪೆ : ದಾವಣಗೆರೆ ವಾರ್ತಾಭವನ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


