Connect with us

ದಿನದ ಸುದ್ದಿ

ನಿವೇಶನಗಳಲ್ಲಿ ಕೊಳಚೆ ನೀರು ಕಳೆ ಗಿಡ ತ್ಯಾಜ್ಯ ಶೀಘ್ರ ತೆರವುಗೊಳಿಸಿ : ಮುಖ್ಯಾಧಿಕಾರಿ ಹೆಚ್.ಎನ್. ಬಜಕ್ಕನವರ್

Published

on

ಸುದ್ದಿದಿನ,ಮಲೆಬೆನ್ನೂರು:ಪಟ್ಟಣದ ಎಲ್ಲಾ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಳನ್ನು ತ್ಯಾಜ್ಯ ವಸ್ತುಗಳನ್ನು ಮಾಲೀಕರು ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು ಇದರಿಂದ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟಬೇಕು ಎಂದು ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಹೆಚ್.ಎನ್. ಬಜಕ್ಕವರ್ ಸೂಚನೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೇಬೆನ್ನೂರು ಪಟ್ಟಣದ ಹಾಗೂ ಪಟ್ಟಣಕ್ಕೆ ಹೊಂದಿಕೊಂಡಿರುವ ಖಾಲಿ ನಿವೇಶನಗಳಲ್ಲಿ ಗಿಡಗಂಟಿಗಳು ಬೆಳೆದಿರುತ್ತದೆ ಕೊಳಚೆ ನೀರು ನಿಂತಿರುವುದು ಕಸ ಕಡ್ಡಿಗಳಂತಹ ತ್ಯಾಜ್ಯ ವಸ್ತುಗಳು ಇರುವುದು ಸ್ವಚ್ಛತೆ ಇಲ್ಲದೆ ಇರುವುದು ಡೆಂಗ್ಯೂ ಜ್ವರ ಹರಡಲು ಕಾರಣವಾಗುತ್ತಿದೆ ಇದರಿಂದ ಪಟ್ಟಣದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗ ತೊಡಗಿವೆ ಆದಕಾರಣ ಖಾಲಿ ನಿವೇಶನಗಳ ಮಾಲೀಕರು ಈ ಕೂಡಲೇ ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸೂಚನೆ ನೀಡಿದರು.

ಸ್ವಚ್ಛತೆ ನಿರ್ಲಕ್ಷಿಸಿದರೆ ಸೊಳ್ಳೆಗಳ ಉತ್ಪತ್ತಿಗೆ ಅವಕಾಶ ಆಗುತ್ತದೆ ಆದುದರಿಂದ ಡೆಂಗ್ಯೂ ಜ್ವರ ಹರಡಲು ಆಸ್ಪದ ಕೊಟ್ಟಂತಾಗುತ್ತದೆ ಎಂದಿದ್ದಾರೆ ಈ ಹಿನ್ನೆಲೆಯಲ್ಲಿ ಕೂಡಲೇ ಮಾಲೀಕರು ತಮ್ಮ ನಿವೇಶನಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಇಲ್ಲವಾದಲ್ಲಿ ಪುರಸಭಾ ವತಿಯಿಂದಲೇ ಸ್ವಚ್ಛತೆ ಮಾಡಿಸಿ ಅದಕ್ಕೆ ತಗಲುವ ವೆಚ್ಚವನ್ನು ಸಂಬಂಧಿಸಿದ ಮಾಲೀಕರ ಖಾತೆಗೆ ಸೇರಿಸಿ ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು

ಪಟ್ಟಣದ ಗುಜರಿ ವ್ಯಾಪಾರಿಗಳು ತಮ್ಮ ಗುಜರಿಗಳ ಒಳಗೆ ವಾಹನಗಳ ಟೈರ್ ಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಅಂಗಡಿ ಮಾಲೀಕರು ಬೇಕರಿ ಮಾಲೀಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದಂತೆ ಗಮನಹರಿಸಬೇಕು, ಸಾರ್ವಜನಿಕರು ತಮ್ಮ ಮನೆಯ ಅಕ್ಕಪಕ್ಕದಲ್ಲಿ ಖಾಲಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಪುರಸಭೆ ವ್ಯಾಪ್ತಿಯ ಅನೇಕ ವಾರ್ಡ್ ಗಳ ಮನೆಗಳ ಮುಂದಿನ ನಳಗಳಿಗೆ ಟ್ಯಾಪ್ ಅಳವಡಿಸಿಲ್ಲ ಇದರಿಂದಾಗಿ ಪ್ರತಿನಿತ್ಯ ನೀರು ಪೋಲಾಗುತ್ತಿದೆ ಈ ಬಗ್ಗೆ ನಾಗರೀಕರು ಎಚ್ಚರ ವಹಿಸಬೇಕು ಕೂಡಲೇ ನಳಗಳ ಟ್ಯಾಪ್ ಅಳವಡಿಸಿ ನೀರು ಇತಮಿತವಾಗಿ ಬಳಸಬೇಕು ನಿರ್ಲಕ್ಷ ಮುಂದುವರೆದರೆ ಪುರಸಭೆ ಕಾಯ್ದೆ ಅನ್ವಯ ಕ್ರಮವಹಿಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending