ದಿನದ ಸುದ್ದಿ

ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ‌ ಮಳೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ.

ಜೊತೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್​ ಸರ್ಕಲ್​, ಮೆಜೆಸ್ಟಿಕ್​ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಇಂದಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿಯೇ ಅಬ್ಬರಿಸಲಿದೆ.

ಇದೀಗ ಹವಾಮಾನ ಇಲಾಖೆ ಸೂಚನೆಯೊಂದನ್ನು ನೀಡಿದ್ದು, ಬೆಂಗಳೂರು ಜನರಿಗೆ ಎಚ್ಚರಿಕೆಯಿಂದಿರುವುದು ಒಳ್ಳೆಯದು. ವರದಿ ಪ್ರಕಾರ, ಬೆಂಗಳೂರಿನಲ್ಲಿ ಇನ್ನೂ 7 ದಿ‌ನ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದಿನಿಂದ 1 ವಾರದ ವೆರೆಗೆ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version