Connect with us

ದಿನದ ಸುದ್ದಿ

ಮಹಾಮಳೆ | ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Published

on

ಸುದ್ದಿದಿನ, ಬೆಂಗಳೂರು : ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿ, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭದ್ರ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಕ್ಕೆ 59 ಸಾವಿರದ 500 ಕ್ಯೂಸೆಕ್ ನೀರು ಹರಿದು ಬಂದಿದೆ. ಜಲಾಶಯದ ಗರಿಷ್ಠ ಮಟ್ಟ 1 ಸಾವಿರದ 633 ಅಡಿ ಇದ್ದು, ಇಂದಿನ ಮಟ್ಟ 1ಸಾವಿರದ 600ಅಡಿಗೆ ತಲುಪಿದೆ. ಜಲಾಶಯದಿಂದ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಲಕ್ಷಾಂತರ ಎಕರೆ ಜಮೀನಿಗೆ ನೀರುಣಿಸಲಾಗುತ್ತಿದೆ.

ಕೃಷಿ ಚಟುವಟಿಕೆಗಳು ತಡವಾಗಿದ್ದರೂ ಸಹ ಅಗತ್ಯ ನೀರು ಬಿಡುಗಡೆ ಕುರಿತಂತೆ ತುಂಗಭದ್ರ ಸಲಹಾ ಸಮಿತಿ ಸಭೆ ಸೇರಿ ತೀರ್ಮಾನ ಕೈಗೊಳ್ಳಲಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾನುವಾರ ಇಡೀ ದಿನ ಮಳೆ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ತಸ್ಯವಾಗಿದೆ. ಹೊನ್ನಾವರದ ಗುಂಡಬಾಳ ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದೆ. ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಅದರ ಉಪನದಿ ಗುಂಡಬಾಳ ನದಿಯೂ ಉಕ್ಕಿ ಹರಿಯುತ್ತಿದ್ದು ನದಿಪಾತ್ರದ ಹತ್ತಾರು ಮನೆಗಳು ಜಲದಿಗ್ಬಂಧನಕ್ಕೆ ಒಳಪಟ್ಟಿವೆ. ಮಳೆ ನಿರಂತರ ಸುರಿಯುತ್ತಿರುವುದರಿಂದ ಇಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭಾರಿ ಮಳೆಗೆ ದಾಂಡೇಲಿ – ಹಳಿಯಾಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜೊಯಿಡಾ-ಕುಂಬಾರವಾಡಾ ಮಾರ್ಗ ಮಧ್ಯದ ದೊಣಪಾದಲ್ಲಿ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿ ಮೇಲೆ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಯಲ್ಲಾಪುರ ತಾಲ್ಲೂಕಿನಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆ ಜತೆಗೆ ವೇಗವಾಗಿ ಗಾಳಿ ಬೀಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಪ್ರಕೃತಿ ವಿಕೋಪ ಉಂಟಾದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎನ್‌ಡಿಆರ್‌ಎಪ್ ಮತ್ತು ಎಸ್‌ಡಿಆರ್‌ಎಫ್ ತಂಡಗಳ ಜೊತೆಗೆ ೩೬ ಬೋಟುಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಸಿದೆ. ಹಾವೇರಿ ಜಿಲ್ಲೆಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನ-ಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಜಿಲ್ಲೆಯಲ್ಲಿ ಹರಿಯುವ ತುಂಗಭದ್ರ, ವರದಾ, ಕುಮದ್ವತಿ, ಧರ್ಮಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಜನ-ಜೀವನ ಬಾಧಿತಗೊಂಡಿದೆ. ಕಳೆದ 24 ಗಂಟೆಗಳಲ್ಲಿ 1 ಸಾವಿರದ 120 ಮಿಲಿಮೀಟರ್ ಮಳೆಸುರಿದಿದೆ. ಜಿಲ್ಲೆಯ ವರದಾ ನದಿ ಬಹುತೇಕ ಭರ್ತಿಯಾಗಿದೆ. ಕೆಲವು ಪ್ರದೇಶಗಳ ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲಾಡಳಿತ ಘಟನಾ ಸ್ಥಳವನ್ನು ಪರಿಶೀಲಿಸಿದೆ ಎಂದು ವರದಿಯಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳ ಮಟ್ಟ ಗಣನೀಯವಾಗಿ ಏರಿಕೆಯಾಗಿವೆ. ಕಾನಾಪುರ, ಕಿತ್ತೂರು, ಬೆಳಗಾವಿ ಗ್ರಾಮಾಂತರ ತಾಲೂಕುಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜಾಪುರ್ ಬ್ಯಾರೆಜ್‌ನಿಂದ 2 ಸಾವಿರ ಕ್ಯೂಸೆಕ್ ನೀರನ್ನು ಬಿಟ್ಟಿರುವುದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಬರುವ 7 ಸೇತುವೆಗಳು ಮುಳುಗಡೆಯಾಗಿವೆ. ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ವರದಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಐದು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಂಬಾರಗಣವಿ ಸಂಪರ್ಕದ ಸೇತುವೆ ನೀರಿನಿಂದ ಮುಚ್ಚಿ ಹೊಗಿದ್ದು, ಗ್ರಾಮಸ್ಥರು ತೊಂದರೆಗೀಡಾಗಿದ್ದಾರೆ. ಇದರ ಪರಿಹಾರಕ್ಕಾಗಿ 1ಕೋಟಿ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಮಳೆ ಬೀಳುತ್ತಿದ್ದು, ಕಾವೇರಿ, ನದಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಎಲ್ಲೆಡೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕಾವೇರಿ ನದಿಯ ಪ್ರವಾಹದಿಂದ ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ್ತಗೊಂಡಿದೆ.

ಭಾಗಮಂಡಲ-ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೊಡಗಿನ ಚಿಕ್ಕ ಹೊಳೆ ಜಲಾಶಯ ಬಹುತೇಕ ಭರ್ತಿಯಾಗಿದೆ. ಹಾರಂಗಿ ಅಣೆಕಟ್ಟೆನ ಮುಂಭಾಗದ ಸೇತುವೆ ಬಹುತೇಕವಾಗಿ ಜಲಾವೃತ್ತವಾಗಿದೆ. ಕೆಲವು ಗ್ರಾಮಗಳಲ್ಲಿ ಸಂಪರ್ಕ ಕಡಿತವಾಗಿದ್ದು, ರಸ್ತೆ ಮೇಲೆ ಮರ ಉರುಳಿ ಬಿದ್ದಿದ್ದರಿಂದ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಸ್ಥಳೀಯ ಮತ್ತು ಅರಣ್ಯ ಆಡಳಿತದ ನೆರವಿನಿಂದ ಮರವನ್ನು ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹೇಮಾವತಿ, ತುಂಗ ಮತ್ತು ಭದ್ರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳಸದಿಂದ ಹೊರನಾಡು ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಪರೀಶೀಲಿಸಿದರು.

ಕುದುರೇಮುಖ ಮಂಗಳೂರು ರಸ್ತೆಯ ಮೇಲೆ ಭದ್ರಾ ನದಿ ನೀರು ಹರಿಯುತ್ತಿದೆ. ಅಲ್ಲದೆ ಜಿಲ್ಲೆಯ ಮುಳ್ಳಯ್ಯನಗಿರಿ, ಕಡೂರು-ಚಿಕ್ಕಮಗಳೂರು, ಶೃಂಗೇರಿಯಲ್ಲಿ ತುಂಗಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರಮುಖ ರಸ್ತೆಗಳಿಗೆ ನೀರು ನುಗ್ಗಿದೆ. ಕುದುರೆಮುಖ, ಮಂಗಳೂರು ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು; ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending