ದಿನದ ಸುದ್ದಿ

ಇಂದು‌ ‘ಎಚ್.ಡಿ.ಕೆ ಮಂಡ್ಯ ಜಿಲ್ಲಾ ಪ್ರವಾಸ’

Published

on

ಸುದ್ದಿದಿನ,ಮಂಡ್ಯ : ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವೆಂಬರ್ 23 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನವೆಂಬರ್ 23 ರಂದು ಮಧ್ಯಾಹ್ನ 1.20 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ದುದ್ದ ಹೋಬಳಿ ವಿ.ಸಿ.ಫಾರಂ ನಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಶಿವಳ್ಳಿ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3.05 ಗಂಟೆಗೆ ದುದ್ದ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 54 ಕೆರೆಕಟ್ಟೆಗಳಿಗೆ ಕುಡಿಯುವ ನೀರು ತುಂಬಿಸುವ ಕಾಮಗಾರಿಗಳಿಗೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಸಂಜೆ 4.20 ಗಂಟೆಗೆ ಜಕ್ಕನಹಳ್ಳಿ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 4.45 ಗಂಟೆಗೆ ಮೇಲುಕೋಟೆ ಪ್ರವಾಸಿ ಮಂದಿರ ಆವರಣದಲ್ಲಿ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಬಗ್ಗೆ ರಾಜ್ಯ/ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು. ನಂತರ ಸಂಜೆ 6.15 ಗಂಟೆಗೆ ಕೆರೆತೊಣ್ಣೂರು ಗ್ರಾಮದಲ್ಲಿ ಕೆರೆತೊಣ್ಣೂರು ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಕೆರೆತೊಣ್ಣೂರು ಗ್ರಾಮದಿಂದ ರಸ್ತೆ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version