Connect with us

ಕ್ರೀಡೆ

ಈಗಿನ ಪ್ರಮುಖ ಸುದ್ದಿಮುಖ್ಯಾಂಶಗಳು

Published

on

ಈಗಿನ ಪ್ರಮುಖ ಸುದ್ದಿಮುಖ್ಯಾಂಶಗಳು

  1. ಪ್ರಧಾನಮಂತ್ರಿ ನರೇಂದ್ರ ಮೋದಿ ಡೆನ್ಮಾರ್ಕ್ ಮತ್ತು ಫ್ರಾನ್ಸ್ ಸೇರಿದಂತೆ ಮೂರು ಯುರೋಪಿಯನ್ ರಾಷ್ಟ್ರಗಳಿಗೆ ತಮ್ಮ ಅಧಿಕೃತ ಭೇಟಿಯ ಮೊದಲ ಚರಣದಲ್ಲಿಂದು ಮುಂಜಾನೆ ಜರ್ಮನಿಗೆ ತಲುಪಿದ್ದಾರೆ. ಈ ವರ್ಷದ ತಮ್ಮ ಮೊದಲ ವಿದೇಶ ಭೇಟಿಯಲ್ಲಿ, ಪ್ರಧಾನಿ ಅವರು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಮಟ್ಟದ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
  2. ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಉನ್ನತ ಶಿಕ್ಷಣ ಖಾತೆ ಸಚಿವ ಡಾಕ್ಟರ್ ಸಿ.ಎನ್.ಅಶ್ವತ ನಾರಾಯಣ ಪರಿಶೀಲಿಸಿದರು. ಸರ್ಕಾರಿ ಕಲಾ ಕಾಲೇಜಿನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 5 ಸಾವಿರ ಮಂದಿ ಭಾಗವಹಿಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ ಶಾ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿ, ಶೈಕ್ಷಣಿಕ ಸಮುಚ್ಛಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಶ್ವವಿದ್ಯಾಲಯವನ್ನು ಜಾಗತಿಕ ಗುಣಮಟ್ಟದ ಸಂಸ್ಥೆಯನ್ನಾಗಿ ಅಭಿವೃದ್ಧಿ ಪಡಿಸುವುದು ಸರ್ಕಾರದ ಗುರಿ ಎಂದು ಅವರು ಹೇಳಿದರು.
  3. ತೆಲಂಗಾಣದಾದ್ಯಂತ ಬಿಸಿಗಾಳಿಯ ಪ್ರಕೋಪ ಸೃಷ್ಠಿಯಾಗಿದ್ದು, ಆ ರಾಜ್ಯದ ಉತ್ತರ ಭಾಗದಲ್ಲಿ ಬಿಸಿಗಾಳಿಯ ತ್ರೀವ್ರತೆ ಅಧಿಕವಾಗಿದೆ. ಹವಾಮಾನ ಇಲಾಖೆ ಅಧಿಕಾರಿಗಳು ಮುಂದಿನ ಐದು ದಿನಗಳ ಎಚ್ಚರಿಕೆಯನ್ನು ನೀಡಿದ್ದಾರೆ.
  4. ದೆಹಲಿಯಲ್ಲಿ ಹೊಸದಾಗಿ ನಿನ್ನೆ1485 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೊನ್ನೆಗೆ ಹೋಲಿಸಿದರೆ ಪ್ರಕರಣಗಳು ಕೊಂಚ ಇಳಿಕೆಯಾಗಿದೆ. ಮೊನ್ನೆ 1520 ಪ್ರಕರಣಗಳು ವರಿದಯಾಗಿದ್ದು, ಯಾವುದೇ ಸಾವು ಸಂಭವಿಸಿರಲಿಲ್ಲ. ಸದ್ಯಕ್ಕೆ ದೇಶದ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ4.89 ರಷ್ಟಿದೆ. ಕೋವಿಡ್ ಸಂಬಂಧಿ ಸಾವಿನ ಪ್ರಮಾಣ ಶೇ1.39 ರಷ್ಟಿದೆ.
  5. 33 ನೇ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಫುಟ್ಬಾಲ್ ತಂಡ 75ನೇ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಆತಿಥೇಯ ಕೇರಳ ತಂಡವನ್ನು ಎದುರಿಸಲಿದೆ. ಮಂಜೇರಿಯ ಪಯ್ಯನಾಡು ಕ್ರೀಡಾಂಗಣದಲ್ಲಿ ರಾತ್ರಿ 8ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.
  6. ಬೆಂಗಳೂರಿನಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂನಿರ್ವಸಿಟಿ ಕ್ರೀಡಾಕೂಟದ ಮಹಿಳೆಯರ ಹೆಪ್ಟಾಥ್ಲಾನ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಕ್ಷತಾ 5.44 ಮೀಟರ್ ಉದ್ದ ಜಿಗಿದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಮಹಿಳೆಯರ 200ಮೀಟರ್ ಓಟದ ಸ್ಪರ್ಧೆಯಲ್ಲಿ ಜೈನ್ ವಿಶ್ವವಿದ್ಯಾಲಯದ ಪ್ರಿಯಾ ಮೋಹನ್ 23.90 ಸೆಕೆಂಡುಗಳಲ್ಲಿ ಮೊದಲಿಗರಾಗಿ ಗುರಿ ತಲುಪಿ ಬಂಗಾರ ಪದಕ ಗೆದ್ದಿಕೊಂಡಿದ್ದಾರೆ. ಇದರೊಂದಿಗೆ ಪ್ರಿಯಾ ಮೋಹನ್ ಎರಡು ಚಿನ್ನ ಗೆದ್ದಂತಾಗಿದೆ.
  7. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್‌ಸಿ,ಎಸ್‌ಟಿ ದಿನದ 24 ಗಂಟೆಯು ಸಹಾಯವಾಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿಂದು ಚಾಲನೆ ನೀಡಿದರು. ಈ ವೇಳೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಬಿ.ಶ್ರೀರಾಮುಲು ಉಪಸ್ಥಿತರಿದ್ದರು.
  8. ಇಂದು ಖ್ಯಾತ ಚಲನಚಿತ್ರ ನಿರ್ದೇಶಕ ಸತ್ಯಜಿತ್ ರೇ ಅವರ ಜನ್ಮ ಶತಮಾನೋತ್ಸವ. ಮೇ 3, 1921ರಂದು ಜನಿಸಿದ ರೇ ಅವರನ್ನು ಜಗತ್ತು ಕಂಡ ಅತ್ಯುತ್ತಮ ಚಲನಚಿತ್ರ ನಿರ್ದೇಶಕರಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದಾರೆ. ಸತ್ಯಜಿತ್ ರೇ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಅವರಿಗೆ ಗೌರವ ಸಲ್ಲಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿವಿಧ ಚಟುವಟಿಕೆಗಳನ್ನು ಆರಂಭಿಸಿದೆ.
  9. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3 ಸಾವಿರದ 157ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19ಸಾವಿರದ 500 ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಮಾಹಿತಿ ನೀಡಿದೆ.
  10. ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 4ಲಕ್ಷ 2 ಸಾವಿರದ 170 ಕೋವಿಡ್ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ಇದರೊಂದಿಗೆ ಇದುವರೆಗೆ ನೀಡಲಾದ ಲಸಿಕಾ ಡೋಸ್ ಗಳ ಸಂಖ್ಯೆ 189 ಕೋಟಿ 23 ಲಕ್ಷದ 98ಸಾವಿರದ 347 ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
  11. ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಕ್ ಸೆನ್ಸೆಕ್ಸ್ 648 ಇಳಿಕೆ ಕಂಡು 56 ಸಾವಿರದ 403೪ ರಲ್ಲಿ ವಹಿವಾಟು ಆರಂಭಿಸಿದೆ. ಹಾಗೆಯೇ, ರಾಷ್ಟ್ರೀಯ ಸಂವೇದಿ ಸೂಚ್ಯಂಕ ನಿಫ್ಟಿ ಸಹ 185ಅಂಕ ಇಳಿಕೆ ಕಂಡು 16ಸಾವಿರದ 917ರಲ್ಲಿ ವಹಿವಾಟು ನಡೆಸಿದೆ.
  12. ವಿದೇಶಿ ವಿನಮಯ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 6 ಪೈಸೆ ಬಲವರ್ಧನೆಗೊಂಡು, ಪ್ರತಿ ಡಾಲರ್ ಬೆಲೆ 76 ರೂಪಾಯಿ 44ಪೈಸೆಯಷ್ಟಿದೆ.
  13. 33ನೇ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಫುಟ್ಬಾಲ್ ತಂಡ 75ನೇ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಆತಿಥೇಯ ಕೇರಳ ತಂಡವನ್ನು ಎದುರಿಸಲಿದೆ. ಮಂಜೇರಿಯ ಪಯ್ಯನಾಡು ಕ್ರೀಡಾಂಗಣದಲ್ಲಿ ರಾತ್ರಿ 8 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending