ಕ್ರೀಡೆ
ಈಗಿನ ಪ್ರಮುಖ ಸುದ್ದಿಮುಖ್ಯಾಂಶಗಳು
ಈಗಿನ ಪ್ರಮುಖ ಸುದ್ದಿಮುಖ್ಯಾಂಶಗಳು
- ಪ್ರಧಾನಮಂತ್ರಿ ನರೇಂದ್ರ ಮೋದಿ ಡೆನ್ಮಾರ್ಕ್ ಮತ್ತು ಫ್ರಾನ್ಸ್ ಸೇರಿದಂತೆ ಮೂರು ಯುರೋಪಿಯನ್ ರಾಷ್ಟ್ರಗಳಿಗೆ ತಮ್ಮ ಅಧಿಕೃತ ಭೇಟಿಯ ಮೊದಲ ಚರಣದಲ್ಲಿಂದು ಮುಂಜಾನೆ ಜರ್ಮನಿಗೆ ತಲುಪಿದ್ದಾರೆ. ಈ ವರ್ಷದ ತಮ್ಮ ಮೊದಲ ವಿದೇಶ ಭೇಟಿಯಲ್ಲಿ, ಪ್ರಧಾನಿ ಅವರು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಮಟ್ಟದ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
- ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಉನ್ನತ ಶಿಕ್ಷಣ ಖಾತೆ ಸಚಿವ ಡಾಕ್ಟರ್ ಸಿ.ಎನ್.ಅಶ್ವತ ನಾರಾಯಣ ಪರಿಶೀಲಿಸಿದರು. ಸರ್ಕಾರಿ ಕಲಾ ಕಾಲೇಜಿನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 5 ಸಾವಿರ ಮಂದಿ ಭಾಗವಹಿಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ ಶಾ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿ, ಶೈಕ್ಷಣಿಕ ಸಮುಚ್ಛಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಶ್ವವಿದ್ಯಾಲಯವನ್ನು ಜಾಗತಿಕ ಗುಣಮಟ್ಟದ ಸಂಸ್ಥೆಯನ್ನಾಗಿ ಅಭಿವೃದ್ಧಿ ಪಡಿಸುವುದು ಸರ್ಕಾರದ ಗುರಿ ಎಂದು ಅವರು ಹೇಳಿದರು.
- ತೆಲಂಗಾಣದಾದ್ಯಂತ ಬಿಸಿಗಾಳಿಯ ಪ್ರಕೋಪ ಸೃಷ್ಠಿಯಾಗಿದ್ದು, ಆ ರಾಜ್ಯದ ಉತ್ತರ ಭಾಗದಲ್ಲಿ ಬಿಸಿಗಾಳಿಯ ತ್ರೀವ್ರತೆ ಅಧಿಕವಾಗಿದೆ. ಹವಾಮಾನ ಇಲಾಖೆ ಅಧಿಕಾರಿಗಳು ಮುಂದಿನ ಐದು ದಿನಗಳ ಎಚ್ಚರಿಕೆಯನ್ನು ನೀಡಿದ್ದಾರೆ.
- ದೆಹಲಿಯಲ್ಲಿ ಹೊಸದಾಗಿ ನಿನ್ನೆ1485 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೊನ್ನೆಗೆ ಹೋಲಿಸಿದರೆ ಪ್ರಕರಣಗಳು ಕೊಂಚ ಇಳಿಕೆಯಾಗಿದೆ. ಮೊನ್ನೆ 1520 ಪ್ರಕರಣಗಳು ವರಿದಯಾಗಿದ್ದು, ಯಾವುದೇ ಸಾವು ಸಂಭವಿಸಿರಲಿಲ್ಲ. ಸದ್ಯಕ್ಕೆ ದೇಶದ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ4.89 ರಷ್ಟಿದೆ. ಕೋವಿಡ್ ಸಂಬಂಧಿ ಸಾವಿನ ಪ್ರಮಾಣ ಶೇ1.39 ರಷ್ಟಿದೆ.
- 33 ನೇ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಫುಟ್ಬಾಲ್ ತಂಡ 75ನೇ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಆತಿಥೇಯ ಕೇರಳ ತಂಡವನ್ನು ಎದುರಿಸಲಿದೆ. ಮಂಜೇರಿಯ ಪಯ್ಯನಾಡು ಕ್ರೀಡಾಂಗಣದಲ್ಲಿ ರಾತ್ರಿ 8ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.
- ಬೆಂಗಳೂರಿನಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂನಿರ್ವಸಿಟಿ ಕ್ರೀಡಾಕೂಟದ ಮಹಿಳೆಯರ ಹೆಪ್ಟಾಥ್ಲಾನ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಕ್ಷತಾ 5.44 ಮೀಟರ್ ಉದ್ದ ಜಿಗಿದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಮಹಿಳೆಯರ 200ಮೀಟರ್ ಓಟದ ಸ್ಪರ್ಧೆಯಲ್ಲಿ ಜೈನ್ ವಿಶ್ವವಿದ್ಯಾಲಯದ ಪ್ರಿಯಾ ಮೋಹನ್ 23.90 ಸೆಕೆಂಡುಗಳಲ್ಲಿ ಮೊದಲಿಗರಾಗಿ ಗುರಿ ತಲುಪಿ ಬಂಗಾರ ಪದಕ ಗೆದ್ದಿಕೊಂಡಿದ್ದಾರೆ. ಇದರೊಂದಿಗೆ ಪ್ರಿಯಾ ಮೋಹನ್ ಎರಡು ಚಿನ್ನ ಗೆದ್ದಂತಾಗಿದೆ.
- ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್‌ಸಿ,ಎಸ್‌ಟಿ ದಿನದ 24 ಗಂಟೆಯು ಸಹಾಯವಾಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿಂದು ಚಾಲನೆ ನೀಡಿದರು. ಈ ವೇಳೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಬಿ.ಶ್ರೀರಾಮುಲು ಉಪಸ್ಥಿತರಿದ್ದರು.
- ಇಂದು ಖ್ಯಾತ ಚಲನಚಿತ್ರ ನಿರ್ದೇಶಕ ಸತ್ಯಜಿತ್ ರೇ ಅವರ ಜನ್ಮ ಶತಮಾನೋತ್ಸವ. ಮೇ 3, 1921ರಂದು ಜನಿಸಿದ ರೇ ಅವರನ್ನು ಜಗತ್ತು ಕಂಡ ಅತ್ಯುತ್ತಮ ಚಲನಚಿತ್ರ ನಿರ್ದೇಶಕರಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದಾರೆ. ಸತ್ಯಜಿತ್ ರೇ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಅವರಿಗೆ ಗೌರವ ಸಲ್ಲಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿವಿಧ ಚಟುವಟಿಕೆಗಳನ್ನು ಆರಂಭಿಸಿದೆ.
- ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3 ಸಾವಿರದ 157ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19ಸಾವಿರದ 500 ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಮಾಹಿತಿ ನೀಡಿದೆ.
- ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 4ಲಕ್ಷ 2 ಸಾವಿರದ 170 ಕೋವಿಡ್ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ಇದರೊಂದಿಗೆ ಇದುವರೆಗೆ ನೀಡಲಾದ ಲಸಿಕಾ ಡೋಸ್ ಗಳ ಸಂಖ್ಯೆ 189 ಕೋಟಿ 23 ಲಕ್ಷದ 98ಸಾವಿರದ 347 ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
- ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಕ್ ಸೆನ್ಸೆಕ್ಸ್ 648 ಇಳಿಕೆ ಕಂಡು 56 ಸಾವಿರದ 403೪ ರಲ್ಲಿ ವಹಿವಾಟು ಆರಂಭಿಸಿದೆ. ಹಾಗೆಯೇ, ರಾಷ್ಟ್ರೀಯ ಸಂವೇದಿ ಸೂಚ್ಯಂಕ ನಿಫ್ಟಿ ಸಹ 185ಅಂಕ ಇಳಿಕೆ ಕಂಡು 16ಸಾವಿರದ 917ರಲ್ಲಿ ವಹಿವಾಟು ನಡೆಸಿದೆ.
- ವಿದೇಶಿ ವಿನಮಯ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 6 ಪೈಸೆ ಬಲವರ್ಧನೆಗೊಂಡು, ಪ್ರತಿ ಡಾಲರ್ ಬೆಲೆ 76 ರೂಪಾಯಿ 44ಪೈಸೆಯಷ್ಟಿದೆ.
- 33ನೇ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಫುಟ್ಬಾಲ್ ತಂಡ 75ನೇ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಆತಿಥೇಯ ಕೇರಳ ತಂಡವನ್ನು ಎದುರಿಸಲಿದೆ. ಮಂಜೇರಿಯ ಪಯ್ಯನಾಡು ಕ್ರೀಡಾಂಗಣದಲ್ಲಿ ರಾತ್ರಿ 8 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243