ಕ್ರೀಡೆ

ಐಪಿಎಲ್ ಸುದ್ದಿ

Published

on

ಸುದ್ದಿದಿನ ಡೆಸ್ಕ್ : ಮುಂಬೈನ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ೨೪ ರನ್‌ಗಳಿಂದ ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಜಯ ಗಳಿಸಿತು.

ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 178ರನ್ ಗಳಿಸಿತು.
ಈ ಗುರಿ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ8ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆಯೇ ನಡೆದ ಮತ್ತೊಂದು ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿತು. ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕೇವಲ 133 ರನ್ ಗಳಿಸಿತು. ಉತ್ತರವಾಗಿ 134 ರನ್ ಗಳ ಗುರಿಯತ್ತ ಸಾಗಿದ ಗುಜರಾತ್ ಟೈಟಾನ್ಸ್ 19.1 ಓವರುಗಳಲ್ಲಿ 3ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ವಿಜಯೋತ್ಸವ ಆಚರಿಸಿತು.

ಇಂದು ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ರಾತ್ರಿ 7.30 ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version