Connect with us

ಕ್ರೀಡೆ

ಇಂದಿನ ಪ್ರಮುಖ ಸುದ್ದಿಗಳು

Published

on

ಇಂದಿನ ಪ್ರಮುಖ ಸುದ್ದಿಗಳು

  1. ಮುಂಬೈನಲ್ಲಿ ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಥಮ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಖ್ಯಾತ ಹಿನ್ನೆಲೆ ಗಾಯಕಿ, ಭಾರತರತ್ನ ಪುರಸ್ಕೃತ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ರಾಷ್ಟ್ರಕ್ಕೆ ಅನುಕರಣಿಯ ಕೊಡುಗೆ ನೀಡಿರುವ ವ್ಯಕ್ತಿಗೆ ವಾರ್ಷಿಕವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
  2. ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೇಶಾದ್ಯಂತ ಎಲ್ಲ ಗ್ರಾಮ ಪಂಚಾಯತ್‌ಗಳ ಸದಸ್ಯರ ಸಭೆಗಳನ್ನುದ್ದೇಶಿಸಿ ಭಾಷಣ ಮಾಡುವುದರ ಜತೆಗೆ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ಗೂ ಸಹ ಪ್ರಧಾನಿ ಭೇಟಿ ನೀಡಿ ಸುಮಾರು 20ಸಾವಿರ ಕೋಟಿ ರೂಪಾಯಿ ಮೊತ್ತದ ಹಲವಾರು ಅಭಿವೃಧ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
  3. ಫಿನ್ ಟೆನ್ ಸಂಬಂಧಿತ ಅನೇಕ ಹೊಸ ಸ್ಟಾರ್ಟ್ ಅಪ್‌ಗಳು ಕೂಡ ದೇಶದಲ್ಲಿ ಕಾರ್ಯಾರಂಭ ಮಾಡಿವೆ. ದೆಹಲಿಯಲ್ಲಿ ಒಂದು ದಿನ ನಗದು ಬಳಸದೇ ಇಡೀ ದಿನದ ಖರ್ಚನ್ನು ಡಿಜಿಟಲ್ ಪಾವತಿ ಮೂಲವೇ ಮಾಡಿದ ಸಾಗರಿಕ ಮತ್ತು ಪ್ರೇಕ್ಷಾ ಅವರ ಪ್ರಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉದಾಹರಣೆ ನೀಡಿದರು.
  4. ಚುನಾಯಿತ ಪ್ರತಿನಿಧಿಗಳ ಪಕ್ಷಾಂತರ ದೇಶವನ್ನು ಬಾಧಿಸುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಂಬಂಧಿತ ಕಾಯ್ದೆಗೆ ತಿದ್ದುಪಡಿ ತರುವುದು ಅತ್ಯಗತ್ಯವಾಗಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಬೆಂಗಳೂರಿನಲ್ಲಿ ಆಯೋಜಿಸಿದ್ದ ನವಭಾರತದಲ್ಲಿ ಮಾಧ್ಯಮ ಕುರಿತು ಸಂವಾದದಲ್ಲಿ ಪ್ರತಿಪಾದಿಸಿದರು.
  5. ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ನಾಳೆ ನಾಗರಿಕ ವಿಮಾನಯಾನ ಸಚಿವಾಲಯದಿಂದ ಬೃಹತ್ ಯೋಗ ಕಾರ್ಯಕ್ರಮ ಯೋಗ ಪ್ರಭಾ ವನ್ನು ಆಯೋಜಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಚಿವಾಲಯದ 500ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
  6. ದೇಶದಲ್ಲಿ ಇದುವರೆಗೆ 187ಕೋಟಿ 67ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24ಗಂಟೆಗಳಲ್ಲಿ 19ಲಕ್ಷಕ್ಕೂ ಹೆಚ್ಚು ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2ಸಾವಿರದ 593ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
  7. ಖೇಲೋ ಇಂಡಿಯಾ 2021ಕ್ರೀಡಾಕೂಟಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಚಾಲನೆ ನೀಡಿದರು. 200 ವಿಶ್ವವಿದ್ಯಾಲಯಗಳ ನಾಲ್ಕೂವರೆ ಸಾವಿರ ಕ್ರೀಡಾಪಟುಗಳು 10ದಿನಗಳ ಕಾಲ ನಡೆಯುವ ಖೇಲೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
  8. ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ಲೋಬಲ್ ಕ್ಯಾಂಪಸ್‌ಗೆ ಭೇಟಿ ನೀಡಿ ಕ್ರೀಡಾಕೂಟದ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು.
  9. ಮುಂದಿನ ತಿಂಗಳ18 ರಂದು ಅಂತಾರಾಷ್ಟ್ರೀಯ ಸಂಗ್ರಹಾಲಯ ದಿನ ಆಚರಿಸಲಾಗುತ್ತದೆ. ಜನರು ಸ್ಥಳೀಯ ಮ್ಯೂಸಿಯಂಗಳಿಗೆ ಭೇಟಿ ನೀಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ. ಗಣಿತದ ಬಗ್ಗೆಯೂ ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಪ್ರಸ್ತಾಪಿಸಿದರು. ಕೋಲ್ಕತಾದ ಗೌರವ್ ಟೆಕರೀವಾಲ್ ಅವರೊಂದಿಗೆ ಮಾತನಾಡಿದರು. ವೈದಿಕ ಗಣಿತದ ಕೀರ್ತಿ ಭಾರತಿ ಕೃಷ್ಣ ತೀರ್ಥ ಮಹಾರಾಜ್ ಅವರಿಗೆ ಸಲ್ಲುತ್ತದೆ ಎಂದು ಗೌರವ್ ತಿಳಿಸಿದರು. ಭಾರತಿಕೃಷ್ಣ ತೀರ್ಥ ಮಹಾರಾಜ್ ನೀಡಿದ 16 ಸೂತ್ರಗಳ ಮೂಲಕ ಕ್ಲಿಷ್ಟಕರ ಗಣಿತ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಹೇಳಿದರು.
  10. ಚಿತ್ರದುರ್ಗ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇರುನಟ ಡಾ.ರಾಜ್‌ಕುಮಾರ್ ಅವರ 93ನೇ ಜಯಂತಿ ಆಚರಿಸಲಾಯಿತು. ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯನವರು ಡಾ.ರಾಜ್‌ಕುಮಾರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಪ ಸಮರ್ಪಿಸಿದರು. ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕರಾದ ಜೆ.ಮಂಜೇಗೌಡ, ಸಿಬ್ಬಂದಿಗಳಾದ ವೆಂಕಟೇಶ್, ವೇಣುಗೋಪಾಲ.ಪಿ.ಎಂ. ಚಂದ್ರಶೇಖರ. ಎಸ್ , ರಮೇಶ್, ಉಮೇಶ್.ಜೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ

Published

on

ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್‌ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.

ನಿನ್ನೆ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್‌ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.

ಅಸಾಧಾರಣ ಬೌಲಿಂಗ್‌ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್‌ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.

ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ

17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್‌ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.

ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್‌ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್‌ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್‌ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.

ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending